1 ಪೂರ್ವಕಾಲವೃತ್ತಾಂತ Chapter 11 KANIRV Bible Verse Images

1 ಪೂರ್ವಕಾಲವೃತ್ತಾಂತ 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 11:1 (KANIRV)
Square Portrait Landscape 4K UHD
ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.

1 ಪೂರ್ವಕಾಲವೃತ್ತಾಂತ 11:2 (KANIRV)
Square Portrait Landscape 4K UHD
ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.

1 ಪೂರ್ವಕಾಲವೃತ್ತಾಂತ 11:3 (KANIRV)
Square Portrait Landscape 4K UHD
ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

1 ಪೂರ್ವಕಾಲವೃತ್ತಾಂತ 11:4 (KANIRV)
Square Portrait Landscape 4K UHD
ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.

1 ಪೂರ್ವಕಾಲವೃತ್ತಾಂತ 11:5 (KANIRV)
Square Portrait Landscape 4K UHD
ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.

1 ಪೂರ್ವಕಾಲವೃತ್ತಾಂತ 11:6 (KANIRV)
Square Portrait Landscape 4K UHD
ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.

1 ಪೂರ್ವಕಾಲವೃತ್ತಾಂತ 11:7 (KANIRV)
Square Portrait Landscape 4K UHD
ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.

1 ಪೂರ್ವಕಾಲವೃತ್ತಾಂತ 11:8 (KANIRV)
Square Portrait Landscape 4K UHD
ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.

1 ಪೂರ್ವಕಾಲವೃತ್ತಾಂತ 11:9 (KANIRV)
Square Portrait Landscape 4K UHD
ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.

1 ಪೂರ್ವಕಾಲವೃತ್ತಾಂತ 11:10 (KANIRV)
Square Portrait Landscape 4K UHD
ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

1 ಪೂರ್ವಕಾಲವೃತ್ತಾಂತ 11:11 (KANIRV)
Square Portrait Landscape 4K UHD
ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.

1 ಪೂರ್ವಕಾಲವೃತ್ತಾಂತ 11:12 (KANIRV)
Square Portrait Landscape 4K UHD
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.

1 ಪೂರ್ವಕಾಲವೃತ್ತಾಂತ 11:13 (KANIRV)
Square Portrait Landscape 4K UHD
ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,

1 ಪೂರ್ವಕಾಲವೃತ್ತಾಂತ 11:14 (KANIRV)
Square Portrait Landscape 4K UHD
ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.

1 ಪೂರ್ವಕಾಲವೃತ್ತಾಂತ 11:15 (KANIRV)
Square Portrait Landscape 4K UHD
ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.

1 ಪೂರ್ವಕಾಲವೃತ್ತಾಂತ 11:16 (KANIRV)
Square Portrait Landscape 4K UHD
ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.

1 ಪೂರ್ವಕಾಲವೃತ್ತಾಂತ 11:17 (KANIRV)
Square Portrait Landscape 4K UHD
ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.

1 ಪೂರ್ವಕಾಲವೃತ್ತಾಂತ 11:18 (KANIRV)
Square Portrait Landscape 4K UHD
ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

1 ಪೂರ್ವಕಾಲವೃತ್ತಾಂತ 11:19 (KANIRV)
Square Portrait Landscape 4K UHD
ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.

1 ಪೂರ್ವಕಾಲವೃತ್ತಾಂತ 11:20 (KANIRV)
Square Portrait Landscape 4K UHD
ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

1 ಪೂರ್ವಕಾಲವೃತ್ತಾಂತ 11:21 (KANIRV)
Square Portrait Landscape 4K UHD
ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.

1 ಪೂರ್ವಕಾಲವೃತ್ತಾಂತ 11:22 (KANIRV)
Square Portrait Landscape 4K UHD
ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

1 ಪೂರ್ವಕಾಲವೃತ್ತಾಂತ 11:23 (KANIRV)
Square Portrait Landscape 4K UHD
ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

1 ಪೂರ್ವಕಾಲವೃತ್ತಾಂತ 11:24 (KANIRV)
Square Portrait Landscape 4K UHD
ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

1 ಪೂರ್ವಕಾಲವೃತ್ತಾಂತ 11:25 (KANIRV)
Square Portrait Landscape 4K UHD
ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

1 ಪೂರ್ವಕಾಲವೃತ್ತಾಂತ 11:26 (KANIRV)
Square Portrait Landscape 4K UHD
ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,

1 ಪೂರ್ವಕಾಲವೃತ್ತಾಂತ 11:27 (KANIRV)
Square Portrait Landscape 4K UHD
ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,

1 ಪೂರ್ವಕಾಲವೃತ್ತಾಂತ 11:28 (KANIRV)
Square Portrait Landscape 4K UHD
ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,

1 ಪೂರ್ವಕಾಲವೃತ್ತಾಂತ 11:29 (KANIRV)
Square Portrait Landscape 4K UHD
ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,

1 ಪೂರ್ವಕಾಲವೃತ್ತಾಂತ 11:30 (KANIRV)
Square Portrait Landscape 4K UHD
ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,

1 ಪೂರ್ವಕಾಲವೃತ್ತಾಂತ 11:31 (KANIRV)
Square Portrait Landscape 4K UHD
ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,

1 ಪೂರ್ವಕಾಲವೃತ್ತಾಂತ 11:32 (KANIRV)
Square Portrait Landscape 4K UHD
ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,

1 ಪೂರ್ವಕಾಲವೃತ್ತಾಂತ 11:33 (KANIRV)
Square Portrait Landscape 4K UHD
ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.

1 ಪೂರ್ವಕಾಲವೃತ್ತಾಂತ 11:34 (KANIRV)
Square Portrait Landscape 4K UHD
ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,

1 ಪೂರ್ವಕಾಲವೃತ್ತಾಂತ 11:35 (KANIRV)
Square Portrait Landscape 4K UHD
ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,

1 ಪೂರ್ವಕಾಲವೃತ್ತಾಂತ 11:36 (KANIRV)
Square Portrait Landscape 4K UHD
ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,

1 ಪೂರ್ವಕಾಲವೃತ್ತಾಂತ 11:37 (KANIRV)
Square Portrait Landscape 4K UHD
ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,

1 ಪೂರ್ವಕಾಲವೃತ್ತಾಂತ 11:38 (KANIRV)
Square Portrait Landscape 4K UHD
ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,

1 ಪೂರ್ವಕಾಲವೃತ್ತಾಂತ 11:39 (KANIRV)
Square Portrait Landscape 4K UHD
ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,

1 ಪೂರ್ವಕಾಲವೃತ್ತಾಂತ 11:41 (KANIRV)
Square Portrait Landscape 4K UHD
ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,

1 ಪೂರ್ವಕಾಲವೃತ್ತಾಂತ 11:42 (KANIRV)
Square Portrait Landscape 4K UHD
ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ

1 ಪೂರ್ವಕಾಲವೃತ್ತಾಂತ 11:43 (KANIRV)
Square Portrait Landscape 4K UHD
ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,

1 ಪೂರ್ವಕಾಲವೃತ್ತಾಂತ 11:44 (KANIRV)
Square Portrait Landscape 4K UHD
ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,

1 ಪೂರ್ವಕಾಲವೃತ್ತಾಂತ 11:45 (KANIRV)
Square Portrait Landscape 4K UHD
ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,

1 ಪೂರ್ವಕಾಲವೃತ್ತಾಂತ 11:46 (KANIRV)
Square Portrait Landscape 4K UHD
ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,

1 ಪೂರ್ವಕಾಲವೃತ್ತಾಂತ 11:47 (KANIRV)
Square Portrait Landscape 4K UHD
ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.

Available Bible Translations

American Standard Version (ASV)
1 Chronicles 11 (ASV) »
King James Version (KJV)
1 Chronicles 11 (KJV) »
GOD’S WORD® (GW)
1 Chronicles 11 (GW) »
Berean Bible (BSB)
1 Chronicles 11 (BSB) »
World English Bible (WEB)
1 Chronicles 11 (WEB) »
French Bible (LSG)
1 Chroniques 11 (LSG) »
German Bible (LUTH1912)
1 Chronik 11 (LUTH1912) »
Arabic Bible (AVD)
١ أخبار 11 (AVD) »
Portuguese Bible (BSL)
1 Crônicas 11 (BSL) »
Vietnamese Bible (VIE)
1 Sử Ký 11 (VIE) »
Spanish Bible (RVA)
1 Crónicas 11 (RVA) »
Italian Bible (RIV)
1 Cronache 11 (RIV) »
Chinese Simplified (CUVS)
历 代 志 上 11 (CUVS) »
Chinese Traditional (CUVT)
歷 代 志 上 11 (CUVT) »
Albanian Bible (ALB)
1 Kronikave 11 (ALB) »
Swedish Bible (SV1917)
1 Krönikeboken 11 (SV1917) »
Ukrainian Bible (UKR)
1 хроніки 11 (UKR) »
Hungarian Bible (KAR)
1 Krónika 11 (KAR) »
Bulgarian Bible (BULG)
1 Летописи 11 (BULG) »
Japanese Bible (JPN)
歴代志上 11 (JPN) »
Norwegian Bible (NORSK)
1 Krønikebok 11 (NORSK) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List