1 ಪೂರ್ವಕಾಲವೃತ್ತಾಂತ Chapter 23 KANIRV Bible Verse Images

1 ಪೂರ್ವಕಾಲವೃತ್ತಾಂತ 23 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 23 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 23:1 (KANIRV)
Square Portrait Landscape 4K UHD
ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.

1 ಪೂರ್ವಕಾಲವೃತ್ತಾಂತ 23:2 (KANIRV)
Square Portrait Landscape 4K UHD
ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.

1 ಪೂರ್ವಕಾಲವೃತ್ತಾಂತ 23:3 (KANIRV)
Square Portrait Landscape 4K UHD
ಮೂವತ್ತು ವರ್ಷಕ್ಕಿಂತ ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆಯು ಮೂವತ್ತೆಂಟು ಸಾವಿರವಾಗಿತ್ತು.

1 ಪೂರ್ವಕಾಲವೃತ್ತಾಂತ 23:4 (KANIRV)
Square Portrait Landscape 4K UHD
ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,

1 ಪೂರ್ವಕಾಲವೃತ್ತಾಂತ 23:5 (KANIRV)
Square Portrait Landscape 4K UHD
ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.

1 ಪೂರ್ವಕಾಲವೃತ್ತಾಂತ 23:6 (KANIRV)
Square Portrait Landscape 4K UHD
ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.

1 ಪೂರ್ವಕಾಲವೃತ್ತಾಂತ 23:7 (KANIRV)
Square Portrait Landscape 4K UHD
ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಮತ್ತು ಶಿಮ್ಮೀ ಎಂಬುವರು.

1 ಪೂರ್ವಕಾಲವೃತ್ತಾಂತ 23:8 (KANIRV)
Square Portrait Landscape 4K UHD
ಲದ್ದಾನನಿಗೆ ಪ್ರಧಾನನಾದ ಯೆಹೀಯೇಲ್, ಜೇತಾಮ್ ಮತ್ತು ಯೋವೇಲ್ ಎಂಬ ಮೂರು ಮಕ್ಕಳಿದ್ದರು.

1 ಪೂರ್ವಕಾಲವೃತ್ತಾಂತ 23:9 (KANIRV)
Square Portrait Landscape 4K UHD
ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.

1 ಪೂರ್ವಕಾಲವೃತ್ತಾಂತ 23:10 (KANIRV)
Square Portrait Landscape 4K UHD
ಶಿಮ್ಮೀಗೆ ಯಹತ್, ಜೀನ, ಯೆಯೂಷ್ ಮತ್ತು ಬೆರೀಯ ಎಂಬ ನಾಲ್ಕು ಮಕ್ಕಳಿದ್ದರು.

1 ಪೂರ್ವಕಾಲವೃತ್ತಾಂತ 23:11 (KANIRV)
Square Portrait Landscape 4K UHD
ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು.

1 ಪೂರ್ವಕಾಲವೃತ್ತಾಂತ 23:12 (KANIRV)
Square Portrait Landscape 4K UHD
ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್ ಎಂಬ ನಾಲ್ಕು ಮಕ್ಕಳಿದ್ದರು.

1 ಪೂರ್ವಕಾಲವೃತ್ತಾಂತ 23:13 (KANIRV)
Square Portrait Landscape 4K UHD
ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.

1 ಪೂರ್ವಕಾಲವೃತ್ತಾಂತ 23:14 (KANIRV)
Square Portrait Landscape 4K UHD
ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.

1 ಪೂರ್ವಕಾಲವೃತ್ತಾಂತ 23:15 (KANIRV)
Square Portrait Landscape 4K UHD
ಮೋಶೆಯ ಮಕ್ಕಳು ಗೇರ್ಷೋಮ್ ಮತ್ತು ಎಲೀಯೆಜೆರ್ ಎಂಬುವವರು.

1 ಪೂರ್ವಕಾಲವೃತ್ತಾಂತ 23:16 (KANIRV)
Square Portrait Landscape 4K UHD
ಪ್ರಧಾನನಾದ ಶೆಬೂವೇಲನು ಗೇರ್ಷೋಮನ ಮಗನು.

1 ಪೂರ್ವಕಾಲವೃತ್ತಾಂತ 23:17 (KANIRV)
Square Portrait Landscape 4K UHD
ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.

1 ಪೂರ್ವಕಾಲವೃತ್ತಾಂತ 23:18 (KANIRV)
Square Portrait Landscape 4K UHD
ಪ್ರಧಾನನಾದ ಶೆಲೋಮೋತನು ಇಚ್ಹಾರನ ಮಗ.

1 ಪೂರ್ವಕಾಲವೃತ್ತಾಂತ 23:19 (KANIRV)
Square Portrait Landscape 4K UHD
ಹೆಬ್ರೋನನ ಮಕ್ಕಳಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.

1 ಪೂರ್ವಕಾಲವೃತ್ತಾಂತ 23:20 (KANIRV)
Square Portrait Landscape 4K UHD
ಉಜ್ಜೀಯೇಲನ ಮಕ್ಕಳಲ್ಲಿ ಮೀಕನು ಪ್ರಧಾನನು, ಇಷ್ಷೀಯನು ಎರಡನೆಯವನು.

1 ಪೂರ್ವಕಾಲವೃತ್ತಾಂತ 23:21 (KANIRV)
Square Portrait Landscape 4K UHD
ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಮತ್ತು ಕೀಷ್.

1 ಪೂರ್ವಕಾಲವೃತ್ತಾಂತ 23:22 (KANIRV)
Square Portrait Landscape 4K UHD
ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.

1 ಪೂರ್ವಕಾಲವೃತ್ತಾಂತ 23:23 (KANIRV)
Square Portrait Landscape 4K UHD
ಮೂಷೀಗೆ ಮಹ್ಲೀ, ಏದೆರ್ ಮತ್ತು ಯೆರೇಮೋತ್ ಎಂಬ ಮೂವರು ಮಕ್ಕಳಿದ್ದರು.

1 ಪೂರ್ವಕಾಲವೃತ್ತಾಂತ 23:24 (KANIRV)
Square Portrait Landscape 4K UHD
ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.

1 ಪೂರ್ವಕಾಲವೃತ್ತಾಂತ 23:25 (KANIRV)
Square Portrait Landscape 4K UHD
ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,

1 ಪೂರ್ವಕಾಲವೃತ್ತಾಂತ 23:26 (KANIRV)
Square Portrait Landscape 4K UHD
ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

1 ಪೂರ್ವಕಾಲವೃತ್ತಾಂತ 23:27 (KANIRV)
Square Portrait Landscape 4K UHD
ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.

1 ಪೂರ್ವಕಾಲವೃತ್ತಾಂತ 23:28 (KANIRV)
Square Portrait Landscape 4K UHD
ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,

1 ಪೂರ್ವಕಾಲವೃತ್ತಾಂತ 23:29 (KANIRV)
Square Portrait Landscape 4K UHD
ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,

1 ಪೂರ್ವಕಾಲವೃತ್ತಾಂತ 23:30 (KANIRV)
Square Portrait Landscape 4K UHD
ಪ್ರತಿದಿನ ಪ್ರಾತಃಕಾಲ ಸಾಯಂಕಾಲಗಳಲ್ಲಿ ನಿಯಮಿತ ಸಂಖ್ಯೆಗೆ ಸರಿಯಾಗಿ

1 ಪೂರ್ವಕಾಲವೃತ್ತಾಂತ 23:31 (KANIRV)
Square Portrait Landscape 4K UHD
ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.

1 ಪೂರ್ವಕಾಲವೃತ್ತಾಂತ 23:32 (KANIRV)
Square Portrait Landscape 4K UHD
ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.

Available Bible Translations

American Standard Version (ASV)
1 Chronicles 23 (ASV) »
King James Version (KJV)
1 Chronicles 23 (KJV) »
GOD’S WORD® (GW)
1 Chronicles 23 (GW) »
Berean Bible (BSB)
1 Chronicles 23 (BSB) »
World English Bible (WEB)
1 Chronicles 23 (WEB) »
French Bible (LSG)
1 Chroniques 23 (LSG) »
German Bible (LUTH1912)
1 Chronik 23 (LUTH1912) »
Arabic Bible (AVD)
١ أخبار 23 (AVD) »
Portuguese Bible (BSL)
1 Crônicas 23 (BSL) »
Vietnamese Bible (VIE)
1 Sử Ký 23 (VIE) »
Spanish Bible (RVA)
1 Crónicas 23 (RVA) »
Italian Bible (RIV)
1 Cronache 23 (RIV) »
Chinese Simplified (CUVS)
历 代 志 上 23 (CUVS) »
Chinese Traditional (CUVT)
歷 代 志 上 23 (CUVT) »
Albanian Bible (ALB)
1 Kronikave 23 (ALB) »
Swedish Bible (SV1917)
1 Krönikeboken 23 (SV1917) »
Ukrainian Bible (UKR)
1 хроніки 23 (UKR) »
Hungarian Bible (KAR)
1 Krónika 23 (KAR) »
Bulgarian Bible (BULG)
1 Летописи 23 (BULG) »
Japanese Bible (JPN)
歴代志上 23 (JPN) »
Norwegian Bible (NORSK)
1 Krønikebok 23 (NORSK) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List