1 ಪೂರ್ವಕಾಲವೃತ್ತಾಂತ Chapter 27 KANIRV Bible Verse Images

1 ಪೂರ್ವಕಾಲವೃತ್ತಾಂತ 27 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 27 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 27:1 (KANIRV)
Square Portrait Landscape 4K UHD
ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.

1 ಪೂರ್ವಕಾಲವೃತ್ತಾಂತ 27:2 (KANIRV)
Square Portrait Landscape 4K UHD
ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.

1 ಪೂರ್ವಕಾಲವೃತ್ತಾಂತ 27:3 (KANIRV)
Square Portrait Landscape 4K UHD
ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:4 (KANIRV)
Square Portrait Landscape 4K UHD
ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:5 (KANIRV)
Square Portrait Landscape 4K UHD
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.

1 ಪೂರ್ವಕಾಲವೃತ್ತಾಂತ 27:6 (KANIRV)
Square Portrait Landscape 4K UHD
ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.

1 ಪೂರ್ವಕಾಲವೃತ್ತಾಂತ 27:7 (KANIRV)
Square Portrait Landscape 4K UHD
ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:8 (KANIRV)
Square Portrait Landscape 4K UHD
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:9 (KANIRV)
Square Portrait Landscape 4K UHD
ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:10 (KANIRV)
Square Portrait Landscape 4K UHD
ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:11 (KANIRV)
Square Portrait Landscape 4K UHD
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:12 (KANIRV)
Square Portrait Landscape 4K UHD
ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:13 (KANIRV)
Square Portrait Landscape 4K UHD
ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:14 (KANIRV)
Square Portrait Landscape 4K UHD
ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:15 (KANIRV)
Square Portrait Landscape 4K UHD
ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.

1 ಪೂರ್ವಕಾಲವೃತ್ತಾಂತ 27:16 (KANIRV)
Square Portrait Landscape 4K UHD
ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;

1 ಪೂರ್ವಕಾಲವೃತ್ತಾಂತ 27:17 (KANIRV)
Square Portrait Landscape 4K UHD
ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;

1 ಪೂರ್ವಕಾಲವೃತ್ತಾಂತ 27:18 (KANIRV)
Square Portrait Landscape 4K UHD
ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;

1 ಪೂರ್ವಕಾಲವೃತ್ತಾಂತ 27:19 (KANIRV)
Square Portrait Landscape 4K UHD
ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;

1 ಪೂರ್ವಕಾಲವೃತ್ತಾಂತ 27:20 (KANIRV)
Square Portrait Landscape 4K UHD
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;

1 ಪೂರ್ವಕಾಲವೃತ್ತಾಂತ 27:21 (KANIRV)
Square Portrait Landscape 4K UHD
ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;

1 ಪೂರ್ವಕಾಲವೃತ್ತಾಂತ 27:22 (KANIRV)
Square Portrait Landscape 4K UHD
ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.

1 ಪೂರ್ವಕಾಲವೃತ್ತಾಂತ 27:23 (KANIRV)
Square Portrait Landscape 4K UHD
ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.

1 ಪೂರ್ವಕಾಲವೃತ್ತಾಂತ 27:24 (KANIRV)
Square Portrait Landscape 4K UHD
ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.

1 ಪೂರ್ವಕಾಲವೃತ್ತಾಂತ 27:25 (KANIRV)
Square Portrait Landscape 4K UHD
ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,

1 ಪೂರ್ವಕಾಲವೃತ್ತಾಂತ 27:26 (KANIRV)
Square Portrait Landscape 4K UHD
ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,

1 ಪೂರ್ವಕಾಲವೃತ್ತಾಂತ 27:27 (KANIRV)
Square Portrait Landscape 4K UHD
ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,

1 ಪೂರ್ವಕಾಲವೃತ್ತಾಂತ 27:28 (KANIRV)
Square Portrait Landscape 4K UHD
ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

1 ಪೂರ್ವಕಾಲವೃತ್ತಾಂತ 27:29 (KANIRV)
Square Portrait Landscape 4K UHD
ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,

1 ಪೂರ್ವಕಾಲವೃತ್ತಾಂತ 27:30 (KANIRV)
Square Portrait Landscape 4K UHD
ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,

1 ಪೂರ್ವಕಾಲವೃತ್ತಾಂತ 27:31 (KANIRV)
Square Portrait Landscape 4K UHD
ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.

1 ಪೂರ್ವಕಾಲವೃತ್ತಾಂತ 27:32 (KANIRV)
Square Portrait Landscape 4K UHD
ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.

1 ಪೂರ್ವಕಾಲವೃತ್ತಾಂತ 27:33 (KANIRV)
Square Portrait Landscape 4K UHD
ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು.

1 ಪೂರ್ವಕಾಲವೃತ್ತಾಂತ 27:34 (KANIRV)
Square Portrait Landscape 4K UHD
ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.

Available Bible Translations

American Standard Version (ASV)
1 Chronicles 27 (ASV) »
King James Version (KJV)
1 Chronicles 27 (KJV) »
GOD’S WORD® (GW)
1 Chronicles 27 (GW) »
Berean Bible (BSB)
1 Chronicles 27 (BSB) »
World English Bible (WEB)
1 Chronicles 27 (WEB) »
French Bible (LSG)
1 Chroniques 27 (LSG) »
German Bible (LUTH1912)
1 Chronik 27 (LUTH1912) »
Arabic Bible (AVD)
١ أخبار 27 (AVD) »
Portuguese Bible (BSL)
1 Crônicas 27 (BSL) »
Vietnamese Bible (VIE)
1 Sử Ký 27 (VIE) »
Spanish Bible (RVA)
1 Crónicas 27 (RVA) »
Italian Bible (RIV)
1 Cronache 27 (RIV) »
Chinese Simplified (CUVS)
历 代 志 上 27 (CUVS) »
Chinese Traditional (CUVT)
歷 代 志 上 27 (CUVT) »
Albanian Bible (ALB)
1 Kronikave 27 (ALB) »
Swedish Bible (SV1917)
1 Krönikeboken 27 (SV1917) »
Ukrainian Bible (UKR)
1 хроніки 27 (UKR) »
Hungarian Bible (KAR)
1 Krónika 27 (KAR) »
Bulgarian Bible (BULG)
1 Летописи 27 (BULG) »
Japanese Bible (JPN)
歴代志上 27 (JPN) »
Norwegian Bible (NORSK)
1 Krønikebok 27 (NORSK) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List