1 ಪೂರ್ವಕಾಲವೃತ್ತಾಂತ Chapter 5 KANIRV Bible Verse Images

1 ಪೂರ್ವಕಾಲವೃತ್ತಾಂತ 5 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಪೂರ್ವಕಾಲವೃತ್ತಾಂತ 5 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಪೂರ್ವಕಾಲವೃತ್ತಾಂತ 5:1 (KANIRV)
Square Portrait Landscape 4K UHD
ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.

1 ಪೂರ್ವಕಾಲವೃತ್ತಾಂತ 5:2 (KANIRV)
Square Portrait Landscape 4K UHD
ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

1 ಪೂರ್ವಕಾಲವೃತ್ತಾಂತ 5:3 (KANIRV)
Square Portrait Landscape 4K UHD
ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.

1 ಪೂರ್ವಕಾಲವೃತ್ತಾಂತ 5:4 (KANIRV)
Square Portrait Landscape 4K UHD
ಯೋವೇಲನ ವಂಶಾವಳಿ: ಇವನ ಮಗ ಶೆಮಾಯ; ಶೆಮಾಯನ ಮಗ ಗೋಗ್.

1 ಪೂರ್ವಕಾಲವೃತ್ತಾಂತ 5:5 (KANIRV)
Square Portrait Landscape 4K UHD
ಗೋಗನ ಮಗ ಶಿಮ್ಮೀ; ಇವನ ಮಗ ಮೀಕ. ಮೀಕನ ಮಗ ರೆವಾಯ, ಇವನ ಮಗ ಬಾಳ್.

1 ಪೂರ್ವಕಾಲವೃತ್ತಾಂತ 5:6 (KANIRV)
Square Portrait Landscape 4K UHD
ಬಾಳನ ಮಗ ಬೇರ. ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ ಫಿಲ್ನೇಸರನು ಸೆರೆಯೊಯ್ದನು.

1 ಪೂರ್ವಕಾಲವೃತ್ತಾಂತ 5:7 (KANIRV)
Square Portrait Landscape 4K UHD
ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.

1 ಪೂರ್ವಕಾಲವೃತ್ತಾಂತ 5:8 (KANIRV)
Square Portrait Landscape 4K UHD
ಬೆಳನು ಅಜಾಜನ ಮಗ. ಅಜಾಜನು ಶೆಮಯನ ಮಗ. ಶೆಮಯನು ಯೋವೇಲನ ಮಗ. ಯೋವೇಲ್ಯರು ಅರೋಯೇರಿನಿಂದ ನೆಬೋ ಮತ್ತು ಬಾಳ್ಮೆಯೋನ್ ಎಂಬ ಸ್ಥಳಗಳವರೆಗೂ ವಾಸಿಸುತ್ತಿದ್ದರು.

1 ಪೂರ್ವಕಾಲವೃತ್ತಾಂತ 5:9 (KANIRV)
Square Portrait Landscape 4K UHD
ಪೂರ್ವ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ. ಇವರಿಗೆ ಗಿಲ್ಯಾದ್ ದೇಶದಲ್ಲಿ ಅನೇಕ ದನ ಕುರಿಹಿಂಡುಗಳಿದ್ದವು.

1 ಪೂರ್ವಕಾಲವೃತ್ತಾಂತ 5:10 (KANIRV)
Square Portrait Landscape 4K UHD
ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.

1 ಪೂರ್ವಕಾಲವೃತ್ತಾಂತ 5:11 (KANIRV)
Square Portrait Landscape 4K UHD
ರೂಬೇನ್ಯರ ಎದುರಿನಲ್ಲಿ ಬಾಷಾನ್ ಸೀಮೆಯ ಸಲ್ಕದವರೆಗೂ ವಾಸಿಸುತ್ತಿದ್ದವರು ಗಾದ್ ಕುಲದವರು:

1 ಪೂರ್ವಕಾಲವೃತ್ತಾಂತ 5:12 (KANIRV)
Square Portrait Landscape 4K UHD
ಪ್ರಧಾನನಾದ ಯೋವೇಲ್, ಎರಡನೆಯವನಾದ ಶಾಫಾಮ್, ಯನ್ನೈ, ಬಾಷಾನಿನಲ್ಲಿರುವ ಶಾಫಾಟ್ ಇವರೂ ನಾಯಕರಾಗಿದ್ದರು.

1 ಪೂರ್ವಕಾಲವೃತ್ತಾಂತ 5:13 (KANIRV)
Square Portrait Landscape 4K UHD
ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.

1 ಪೂರ್ವಕಾಲವೃತ್ತಾಂತ 5:14 (KANIRV)
Square Portrait Landscape 4K UHD
ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.

1 ಪೂರ್ವಕಾಲವೃತ್ತಾಂತ 5:15 (KANIRV)
Square Portrait Landscape 4K UHD
ಅಹೀಬೂಜನು ಅಬ್ದೀಯೇಲನ ಮಗ. ಅಬ್ದೀಯೇಲನು ಗೂನೀಯನ ಮಗ. ಇವನು ಇವರ ಗೋತ್ರದ ಮೂಲಪುರುಷನು.

1 ಪೂರ್ವಕಾಲವೃತ್ತಾಂತ 5:16 (KANIRV)
Square Portrait Landscape 4K UHD
ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.

1 ಪೂರ್ವಕಾಲವೃತ್ತಾಂತ 5:17 (KANIRV)
Square Portrait Landscape 4K UHD
ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು.

1 ಪೂರ್ವಕಾಲವೃತ್ತಾಂತ 5:18 (KANIRV)
Square Portrait Landscape 4K UHD
ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.

1 ಪೂರ್ವಕಾಲವೃತ್ತಾಂತ 5:19 (KANIRV)
Square Portrait Landscape 4K UHD
ಅವರು ಹೋಗಿ ಹಗ್ರೀಯ, ಯೆಟೂರ್, ನಾಫೀಷ್ ಮತ್ತು ನೋದಾಬ್ ಇವರೊಡನೆಯೂ ಯುದ್ಧಮಾಡಿದರು.

1 ಪೂರ್ವಕಾಲವೃತ್ತಾಂತ 5:20 (KANIRV)
Square Portrait Landscape 4K UHD
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

1 ಪೂರ್ವಕಾಲವೃತ್ತಾಂತ 5:21 (KANIRV)
Square Portrait Landscape 4K UHD
ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.

1 ಪೂರ್ವಕಾಲವೃತ್ತಾಂತ 5:22 (KANIRV)
Square Portrait Landscape 4K UHD
ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.

1 ಪೂರ್ವಕಾಲವೃತ್ತಾಂತ 5:23 (KANIRV)
Square Portrait Landscape 4K UHD
ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.

1 ಪೂರ್ವಕಾಲವೃತ್ತಾಂತ 5:24 (KANIRV)
Square Portrait Landscape 4K UHD
ಇವರ ಗೋತ್ರಗಳ ಪ್ರಧಾನ ಪುರುಷರು ಏಫೆರ್, ಇಷ್ಷೀ, ಎಲೀಯೇಲ್, ಅಜ್ರೀಯೇಲ್, ಯೆರೆಮೀಯ, ಹೋದವ್ಯ ಮತ್ತು ಯೆಹ್ತೀಯೇಲ್. ಇವರು ರಣವೀರರೂ ಪ್ರಖ್ಯಾತಿ ಹೊಂದಿದವರು ಗೋತ್ರಪ್ರಧಾನರೂ ಆಗಿದ್ದರು.

1 ಪೂರ್ವಕಾಲವೃತ್ತಾಂತ 5:25 (KANIRV)
Square Portrait Landscape 4K UHD
ಅವರು ತಮ್ಮ ಪೂರ್ವಿಕರ ದೇವರಿಗೆ ದ್ರೋಹಿಗಳಾಗಿದರು. ಯೆಹೋವನು ತಮ್ಮ ಮುಂದೆಯೇ ಸಂಹರಿಸಿದ ಆ ದೇಶದ ನಿವಾಸಿಗಳ ದೇವರುಗಳನ್ನು ಆರಾಧಿಸತೊಡಗಿದರು.

1 ಪೂರ್ವಕಾಲವೃತ್ತಾಂತ 5:26 (KANIRV)
Square Portrait Landscape 4K UHD
ಆದುದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ, ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಹಿಡಿದು ಕರೆದೊಯ್ದರು. ಅವರು ಇಂದಿನವರೆಗೂ ಅಲ್ಲಿಯೇ ನೆಲೆಸುವಂತೆ ದೇವರು ಮಾಡಿದ್ದಾನೆ .

Available Bible Translations

American Standard Version (ASV)
1 Chronicles 5 (ASV) »
King James Version (KJV)
1 Chronicles 5 (KJV) »
GOD’S WORD® (GW)
1 Chronicles 5 (GW) »
Berean Bible (BSB)
1 Chronicles 5 (BSB) »
World English Bible (WEB)
1 Chronicles 5 (WEB) »
French Bible (LSG)
1 Chroniques 5 (LSG) »
German Bible (LUTH1912)
1 Chronik 5 (LUTH1912) »
Arabic Bible (AVD)
١ أخبار 5 (AVD) »
Portuguese Bible (BSL)
1 Crônicas 5 (BSL) »
Vietnamese Bible (VIE)
1 Sử Ký 5 (VIE) »
Spanish Bible (RVA)
1 Crónicas 5 (RVA) »
Italian Bible (RIV)
1 Cronache 5 (RIV) »
Chinese Simplified (CUVS)
历 代 志 上 5 (CUVS) »
Chinese Traditional (CUVT)
歷 代 志 上 5 (CUVT) »
Albanian Bible (ALB)
1 Kronikave 5 (ALB) »
Swedish Bible (SV1917)
1 Krönikeboken 5 (SV1917) »
Ukrainian Bible (UKR)
1 хроніки 5 (UKR) »
Hungarian Bible (KAR)
1 Krónika 5 (KAR) »
Bulgarian Bible (BULG)
1 Летописи 5 (BULG) »
Japanese Bible (JPN)
歴代志上 5 (JPN) »
Norwegian Bible (NORSK)
1 Krønikebok 5 (NORSK) »

1 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List