1 ಕೊರಿಂಥದವರಿಗೆ Chapter 10 KANIRV Bible Verse Images

1 ಕೊರಿಂಥದವರಿಗೆ 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಕೊರಿಂಥದವರಿಗೆ 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಕೊರಿಂಥದವರಿಗೆ 10:1 (KANIRV)
Square Portrait Landscape 4K UHD
ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

1 ಕೊರಿಂಥದವರಿಗೆ 10:2 (KANIRV)
Square Portrait Landscape 4K UHD
ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.

1 ಕೊರಿಂಥದವರಿಗೆ 10:3 (KANIRV)
Square Portrait Landscape 4K UHD
ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.

1 ಕೊರಿಂಥದವರಿಗೆ 10:4 (KANIRV)
Square Portrait Landscape 4K UHD
ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

1 ಕೊರಿಂಥದವರಿಗೆ 10:5 (KANIRV)
Square Portrait Landscape 4K UHD
ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

1 ಕೊರಿಂಥದವರಿಗೆ 10:6 (KANIRV)
Square Portrait Landscape 4K UHD
ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

1 ಕೊರಿಂಥದವರಿಗೆ 10:7 (KANIRV)
Square Portrait Landscape 4K UHD
ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.

1 ಕೊರಿಂಥದವರಿಗೆ 10:8 (KANIRV)
Square Portrait Landscape 4K UHD
ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ.

1 ಕೊರಿಂಥದವರಿಗೆ 10:9 (KANIRV)
Square Portrait Landscape 4K UHD
ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.

1 ಕೊರಿಂಥದವರಿಗೆ 10:10 (KANIRV)
Square Portrait Landscape 4K UHD
ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

1 ಕೊರಿಂಥದವರಿಗೆ 10:11 (KANIRV)
Square Portrait Landscape 4K UHD
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.

1 ಕೊರಿಂಥದವರಿಗೆ 10:12 (KANIRV)
Square Portrait Landscape 4K UHD
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

1 ಕೊರಿಂಥದವರಿಗೆ 10:13 (KANIRV)
Square Portrait Landscape 4K UHD
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

1 ಕೊರಿಂಥದವರಿಗೆ 10:14 (KANIRV)
Square Portrait Landscape 4K UHD
ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.

1 ಕೊರಿಂಥದವರಿಗೆ 10:15 (KANIRV)
Square Portrait Landscape 4K UHD
ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.

1 ಕೊರಿಂಥದವರಿಗೆ 10:16 (KANIRV)
Square Portrait Landscape 4K UHD
ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

1 ಕೊರಿಂಥದವರಿಗೆ 10:17 (KANIRV)
Square Portrait Landscape 4K UHD
ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.

1 ಕೊರಿಂಥದವರಿಗೆ 10:18 (KANIRV)
Square Portrait Landscape 4K UHD
ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

1 ಕೊರಿಂಥದವರಿಗೆ 10:19 (KANIRV)
Square Portrait Landscape 4K UHD
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,

1 ಕೊರಿಂಥದವರಿಗೆ 10:20 (KANIRV)
Square Portrait Landscape 4K UHD
ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.

1 ಕೊರಿಂಥದವರಿಗೆ 10:21 (KANIRV)
Square Portrait Landscape 4K UHD
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.

1 ಕೊರಿಂಥದವರಿಗೆ 10:22 (KANIRV)
Square Portrait Landscape 4K UHD
ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?

1 ಕೊರಿಂಥದವರಿಗೆ 10:23 (KANIRV)
Square Portrait Landscape 4K UHD
“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.

1 ಕೊರಿಂಥದವರಿಗೆ 10:24 (KANIRV)
Square Portrait Landscape 4K UHD
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.

1 ಕೊರಿಂಥದವರಿಗೆ 10:25 (KANIRV)
Square Portrait Landscape 4K UHD
ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.

1 ಕೊರಿಂಥದವರಿಗೆ 10:26 (KANIRV)
Square Portrait Landscape 4K UHD
“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”

1 ಕೊರಿಂಥದವರಿಗೆ 10:27 (KANIRV)
Square Portrait Landscape 4K UHD
ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

1 ಕೊರಿಂಥದವರಿಗೆ 10:28 (KANIRV)
Square Portrait Landscape 4K UHD
ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.

1 ಕೊರಿಂಥದವರಿಗೆ 10:29 (KANIRV)
Square Portrait Landscape 4K UHD
ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

1 ಕೊರಿಂಥದವರಿಗೆ 10:30 (KANIRV)
Square Portrait Landscape 4K UHD
ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

1 ಕೊರಿಂಥದವರಿಗೆ 10:31 (KANIRV)
Square Portrait Landscape 4K UHD
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.

1 ಕೊರಿಂಥದವರಿಗೆ 10:32 (KANIRV)
Square Portrait Landscape 4K UHD
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

1 ಕೊರಿಂಥದವರಿಗೆ 10:33 (KANIRV)
Square Portrait Landscape 4K UHD
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.

Available Bible Translations

American Standard Version (ASV)
1 Corinthians 10 (ASV) »
King James Version (KJV)
1 Corinthians 10 (KJV) »
GOD’S WORD® (GW)
1 Corinthians 10 (GW) »
Berean Bible (BSB)
1 Corinthians 10 (BSB) »
World English Bible (WEB)
1 Corinthians 10 (WEB) »
French Bible (LSG)
1 Corinthiens 10 (LSG) »
German Bible (LUTH1912)
1 Korinther 10 (LUTH1912) »
Portuguese Bible (BSL)
1 Coríntios 10 (BSL) »
Vietnamese Bible (VIE)
1 Cô-rinh-tô 10 (VIE) »
Spanish Bible (RVA)
1 Corintios 10 (RVA) »
Italian Bible (RIV)
1 Corinzi 10 (RIV) »
Chinese Simplified (CUVS)
哥 林 多 前 书 10 (CUVS) »
Chinese Traditional (CUVT)
歌 林 多 前 書 10 (CUVT) »
Albanian Bible (ALB)
1 Korintasve 10 (ALB) »
Ukrainian Bible (UKR)
1 коринтян 10 (UKR) »
Hungarian Bible (KAR)
1 Korinthus 10 (KAR) »
Norwegian Bible (NORSK)
1 Korinter 10 (NORSK) »

1 ಕೊರಿಂಥದವರಿಗೆ (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List