1 ಕೊರಿಂಥದವರಿಗೆ Chapter 14 KANIRV Bible Verse Images

1 ಕೊರಿಂಥದವರಿಗೆ 14 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಕೊರಿಂಥದವರಿಗೆ 14 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಕೊರಿಂಥದವರಿಗೆ 14:1 (KANIRV)
Square Portrait Landscape 4K UHD
ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.

1 ಕೊರಿಂಥದವರಿಗೆ 14:2 (KANIRV)
Square Portrait Landscape 4K UHD
ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

1 ಕೊರಿಂಥದವರಿಗೆ 14:3 (KANIRV)
Square Portrait Landscape 4K UHD
ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.

1 ಕೊರಿಂಥದವರಿಗೆ 14:4 (KANIRV)
Square Portrait Landscape 4K UHD
ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮೀಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ.

1 ಕೊರಿಂಥದವರಿಗೆ 14:5 (KANIRV)
Square Portrait Landscape 4K UHD
ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.

1 ಕೊರಿಂಥದವರಿಗೆ 14:6 (KANIRV)
Square Portrait Landscape 4K UHD
ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

1 ಕೊರಿಂಥದವರಿಗೆ 14:7 (KANIRV)
Square Portrait Landscape 4K UHD
ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು?

1 ಕೊರಿಂಥದವರಿಗೆ 14:8 (KANIRV)
Square Portrait Landscape 4K UHD
ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?

1 ಕೊರಿಂಥದವರಿಗೆ 14:9 (KANIRV)
Square Portrait Landscape 4K UHD
ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.

1 ಕೊರಿಂಥದವರಿಗೆ 14:10 (KANIRV)
Square Portrait Landscape 4K UHD
ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ.

1 ಕೊರಿಂಥದವರಿಗೆ 14:11 (KANIRV)
Square Portrait Landscape 4K UHD
ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.

1 ಕೊರಿಂಥದವರಿಗೆ 14:12 (KANIRV)
Square Portrait Landscape 4K UHD
ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.

1 ಕೊರಿಂಥದವರಿಗೆ 14:13 (KANIRV)
Square Portrait Landscape 4K UHD
ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.

1 ಕೊರಿಂಥದವರಿಗೆ 14:14 (KANIRV)
Square Portrait Landscape 4K UHD
ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.

1 ಕೊರಿಂಥದವರಿಗೆ 14:15 (KANIRV)
Square Portrait Landscape 4K UHD
ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.

1 ಕೊರಿಂಥದವರಿಗೆ 14:16 (KANIRV)
Square Portrait Landscape 4K UHD
ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?

1 ಕೊರಿಂಥದವರಿಗೆ 14:17 (KANIRV)
Square Portrait Landscape 4K UHD
ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.

1 ಕೊರಿಂಥದವರಿಗೆ 14:18 (KANIRV)
Square Portrait Landscape 4K UHD
ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ.

1 ಕೊರಿಂಥದವರಿಗೆ 14:19 (KANIRV)
Square Portrait Landscape 4K UHD
ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.

1 ಕೊರಿಂಥದವರಿಗೆ 14:20 (KANIRV)
Square Portrait Landscape 4K UHD
ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

1 ಕೊರಿಂಥದವರಿಗೆ 14:21 (KANIRV)
Square Portrait Landscape 4K UHD
“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.

1 ಕೊರಿಂಥದವರಿಗೆ 14:22 (KANIRV)
Square Portrait Landscape 4K UHD
ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ.

1 ಕೊರಿಂಥದವರಿಗೆ 14:23 (KANIRV)
Square Portrait Landscape 4K UHD
ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ?

1 ಕೊರಿಂಥದವರಿಗೆ 14:24 (KANIRV)
Square Portrait Landscape 4K UHD
ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು,

1 ಕೊರಿಂಥದವರಿಗೆ 14:25 (KANIRV)
Square Portrait Landscape 4K UHD
ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.

1 ಕೊರಿಂಥದವರಿಗೆ 14:26 (KANIRV)
Square Portrait Landscape 4K UHD
ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.

1 ಕೊರಿಂಥದವರಿಗೆ 14:27 (KANIRV)
Square Portrait Landscape 4K UHD
ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;

1 ಕೊರಿಂಥದವರಿಗೆ 14:28 (KANIRV)
Square Portrait Landscape 4K UHD
ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ.

1 ಕೊರಿಂಥದವರಿಗೆ 14:29 (KANIRV)
Square Portrait Landscape 4K UHD
ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು ವಿವೇಚನೆಯಿಂದ ಕೇಳಲಿ.

1 ಕೊರಿಂಥದವರಿಗೆ 14:30 (KANIRV)
Square Portrait Landscape 4K UHD
ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ

1 ಕೊರಿಂಥದವರಿಗೆ 14:31 (KANIRV)
Square Portrait Landscape 4K UHD
ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.

1 ಕೊರಿಂಥದವರಿಗೆ 14:32 (KANIRV)
Square Portrait Landscape 4K UHD
ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.

1 ಕೊರಿಂಥದವರಿಗೆ 14:33 (KANIRV)
Square Portrait Landscape 4K UHD
ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.

1 ಕೊರಿಂಥದವರಿಗೆ 14:34 (KANIRV)
Square Portrait Landscape 4K UHD
ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.

1 ಕೊರಿಂಥದವರಿಗೆ 14:35 (KANIRV)
Square Portrait Landscape 4K UHD
ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು.

1 ಕೊರಿಂಥದವರಿಗೆ 14:36 (KANIRV)
Square Portrait Landscape 4K UHD
ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ?

1 ಕೊರಿಂಥದವರಿಗೆ 14:37 (KANIRV)
Square Portrait Landscape 4K UHD
ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.

1 ಕೊರಿಂಥದವರಿಗೆ 14:38 (KANIRV)
Square Portrait Landscape 4K UHD
ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.

1 ಕೊರಿಂಥದವರಿಗೆ 14:39 (KANIRV)
Square Portrait Landscape 4K UHD
ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.

1 ಕೊರಿಂಥದವರಿಗೆ 14:40 (KANIRV)
Square Portrait Landscape 4K UHD
ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

Available Bible Translations

American Standard Version (ASV)
1 Corinthians 14 (ASV) »
King James Version (KJV)
1 Corinthians 14 (KJV) »
GOD’S WORD® (GW)
1 Corinthians 14 (GW) »
Berean Bible (BSB)
1 Corinthians 14 (BSB) »
World English Bible (WEB)
1 Corinthians 14 (WEB) »
French Bible (LSG)
1 Corinthiens 14 (LSG) »
German Bible (LUTH1912)
1 Korinther 14 (LUTH1912) »
Portuguese Bible (BSL)
1 Coríntios 14 (BSL) »
Vietnamese Bible (VIE)
1 Cô-rinh-tô 14 (VIE) »
Spanish Bible (RVA)
1 Corintios 14 (RVA) »
Italian Bible (RIV)
1 Corinzi 14 (RIV) »
Chinese Simplified (CUVS)
哥 林 多 前 书 14 (CUVS) »
Chinese Traditional (CUVT)
歌 林 多 前 書 14 (CUVT) »
Albanian Bible (ALB)
1 Korintasve 14 (ALB) »
Ukrainian Bible (UKR)
1 коринтян 14 (UKR) »
Hungarian Bible (KAR)
1 Korinthus 14 (KAR) »
Norwegian Bible (NORSK)
1 Korinter 14 (NORSK) »

1 ಕೊರಿಂಥದವರಿಗೆ (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List