1 ಕೊರಿಂಥದವರಿಗೆ Chapter 16 KANIRV Bible Verse Images

1 ಕೊರಿಂಥದವರಿಗೆ 16 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಕೊರಿಂಥದವರಿಗೆ 16 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಕೊರಿಂಥದವರಿಗೆ 16:1 (KANIRV)
Square Portrait Landscape 4K UHD
ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.

1 ಕೊರಿಂಥದವರಿಗೆ 16:2 (KANIRV)
Square Portrait Landscape 4K UHD
ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

1 ಕೊರಿಂಥದವರಿಗೆ 16:3 (KANIRV)
Square Portrait Landscape 4K UHD
ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.

1 ಕೊರಿಂಥದವರಿಗೆ 16:4 (KANIRV)
Square Portrait Landscape 4K UHD
ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.

1 ಕೊರಿಂಥದವರಿಗೆ 16:5 (KANIRV)
Square Portrait Landscape 4K UHD
ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.

1 ಕೊರಿಂಥದವರಿಗೆ 16:6 (KANIRV)
Square Portrait Landscape 4K UHD
ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.

1 ಕೊರಿಂಥದವರಿಗೆ 16:7 (KANIRV)
Square Portrait Landscape 4K UHD
ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.

1 ಕೊರಿಂಥದವರಿಗೆ 16:8 (KANIRV)
Square Portrait Landscape 4K UHD
ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;

1 ಕೊರಿಂಥದವರಿಗೆ 16:9 (KANIRV)
Square Portrait Landscape 4K UHD
ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.

1 ಕೊರಿಂಥದವರಿಗೆ 16:10 (KANIRV)
Square Portrait Landscape 4K UHD
ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.

1 ಕೊರಿಂಥದವರಿಗೆ 16:11 (KANIRV)
Square Portrait Landscape 4K UHD
ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.

1 ಕೊರಿಂಥದವರಿಗೆ 16:12 (KANIRV)
Square Portrait Landscape 4K UHD
ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.

1 ಕೊರಿಂಥದವರಿಗೆ 16:13 (KANIRV)
Square Portrait Landscape 4K UHD
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.

1 ಕೊರಿಂಥದವರಿಗೆ 16:14 (KANIRV)
Square Portrait Landscape 4K UHD
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.

1 ಕೊರಿಂಥದವರಿಗೆ 16:15 (KANIRV)
Square Portrait Landscape 4K UHD
ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.

1 ಕೊರಿಂಥದವರಿಗೆ 16:16 (KANIRV)
Square Portrait Landscape 4K UHD
ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.

1 ಕೊರಿಂಥದವರಿಗೆ 16:17 (KANIRV)
Square Portrait Landscape 4K UHD
ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.

1 ಕೊರಿಂಥದವರಿಗೆ 16:18 (KANIRV)
Square Portrait Landscape 4K UHD
ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.

1 ಕೊರಿಂಥದವರಿಗೆ 16:19 (KANIRV)
Square Portrait Landscape 4K UHD
ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.

1 ಕೊರಿಂಥದವರಿಗೆ 16:20 (KANIRV)
Square Portrait Landscape 4K UHD
ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

1 ಕೊರಿಂಥದವರಿಗೆ 16:21 (KANIRV)
Square Portrait Landscape 4K UHD
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.

1 ಕೊರಿಂಥದವರಿಗೆ 16:22 (KANIRV)
Square Portrait Landscape 4K UHD
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!

1 ಕೊರಿಂಥದವರಿಗೆ 16:23 (KANIRV)
Square Portrait Landscape 4K UHD
ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ

1 ಕೊರಿಂಥದವರಿಗೆ 16:24 (KANIRV)
Square Portrait Landscape 4K UHD
ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.

Available Bible Translations

American Standard Version (ASV)
1 Corinthians 16 (ASV) »
King James Version (KJV)
1 Corinthians 16 (KJV) »
GOD’S WORD® (GW)
1 Corinthians 16 (GW) »
Berean Bible (BSB)
1 Corinthians 16 (BSB) »
World English Bible (WEB)
1 Corinthians 16 (WEB) »
French Bible (LSG)
1 Corinthiens 16 (LSG) »
German Bible (LUTH1912)
1 Korinther 16 (LUTH1912) »
Portuguese Bible (BSL)
1 Coríntios 16 (BSL) »
Vietnamese Bible (VIE)
1 Cô-rinh-tô 16 (VIE) »
Spanish Bible (RVA)
1 Corintios 16 (RVA) »
Italian Bible (RIV)
1 Corinzi 16 (RIV) »
Chinese Simplified (CUVS)
哥 林 多 前 书 16 (CUVS) »
Chinese Traditional (CUVT)
歌 林 多 前 書 16 (CUVT) »
Albanian Bible (ALB)
1 Korintasve 16 (ALB) »
Ukrainian Bible (UKR)
1 коринтян 16 (UKR) »
Hungarian Bible (KAR)
1 Korinthus 16 (KAR) »
Norwegian Bible (NORSK)
1 Korinter 16 (NORSK) »

1 ಕೊರಿಂಥದವರಿಗೆ (KANIRV) Chapter Selection

1 2 3 4 5 6 7 8 9 10 11 12 13 14 15 16

KANIRV Book Selection List