1 ಅರಸುಗಳು Chapter 13 KANIRV Bible Verse Images

1 ಅರಸುಗಳು 13 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಅರಸುಗಳು 13 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಅರಸುಗಳು 13:1 (KANIRV)
Square Portrait Landscape 4K UHD
ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು

1 ಅರಸುಗಳು 13:2 (KANIRV)
Square Portrait Landscape 4K UHD
ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.

1 ಅರಸುಗಳು 13:3 (KANIRV)
Square Portrait Landscape 4K UHD
ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.

1 ಅರಸುಗಳು 13:4 (KANIRV)
Square Portrait Landscape 4K UHD
ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, “ಕೈಚಾಚಿ ಅವನನ್ನು ಹಿಡಿಯಿರಿ” ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.

1 ಅರಸುಗಳು 13:5 (KANIRV)
Square Portrait Landscape 4K UHD
ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.

1 ಅರಸುಗಳು 13:6 (KANIRV)
Square Portrait Landscape 4K UHD
ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.

1 ಅರಸುಗಳು 13:7 (KANIRV)
Square Portrait Landscape 4K UHD
ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.

1 ಅರಸುಗಳು 13:8 (KANIRV)
Square Portrait Landscape 4K UHD
ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

1 ಅರಸುಗಳು 13:9 (KANIRV)
Square Portrait Landscape 4K UHD
ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.

1 ಅರಸುಗಳು 13:10 (KANIRV)
Square Portrait Landscape 4K UHD
ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.

1 ಅರಸುಗಳು 13:11 (KANIRV)
Square Portrait Landscape 4K UHD
ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.

1 ಅರಸುಗಳು 13:12 (KANIRV)
Square Portrait Landscape 4K UHD
ತಂದೆಯು ಅವರನ್ನು, “ಅವನು ಯಾವ ದಾರಿಯಿಂದ ಹೋದನು?” ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ ದಾರಿಯನ್ನು ತೋರಿಸಿದರು.

1 ಅರಸುಗಳು 13:13 (KANIRV)
Square Portrait Landscape 4K UHD
ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ” ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.

1 ಅರಸುಗಳು 13:14 (KANIRV)
Square Portrait Landscape 4K UHD
ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, “ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.

1 ಅರಸುಗಳು 13:15 (KANIRV)
Square Portrait Landscape 4K UHD
ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.

1 ಅರಸುಗಳು 13:16 (KANIRV)
Square Portrait Landscape 4K UHD
ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.

1 ಅರಸುಗಳು 13:17 (KANIRV)
Square Portrait Landscape 4K UHD
ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.

1 ಅರಸುಗಳು 13:18 (KANIRV)
Square Portrait Landscape 4K UHD
ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.

1 ಅರಸುಗಳು 13:19 (KANIRV)
Square Portrait Landscape 4K UHD
ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.

1 ಅರಸುಗಳು 13:20 (KANIRV)
Square Portrait Landscape 4K UHD
ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.

1 ಅರಸುಗಳು 13:21 (KANIRV)
Square Portrait Landscape 4K UHD
ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,

1 ಅರಸುಗಳು 13:22 (KANIRV)
Square Portrait Landscape 4K UHD
ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.

1 ಅರಸುಗಳು 13:23 (KANIRV)
Square Portrait Landscape 4K UHD
ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.

1 ಅರಸುಗಳು 13:24 (KANIRV)
Square Portrait Landscape 4K UHD
ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.

1 ಅರಸುಗಳು 13:25 (KANIRV)
Square Portrait Landscape 4K UHD
ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.

1 ಅರಸುಗಳು 13:26 (KANIRV)
Square Portrait Landscape 4K UHD
ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, “ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು” ಎಂದು ಹೇಳಿದನು.

1 ಅರಸುಗಳು 13:27 (KANIRV)
Square Portrait Landscape 4K UHD
ಅವನು, “ಕತ್ತೆಗೆ ತಡಿಹಾಕಿರಿ” ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.

1 ಅರಸುಗಳು 13:28 (KANIRV)
Square Portrait Landscape 4K UHD
ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.

1 ಅರಸುಗಳು 13:29 (KANIRV)
Square Portrait Landscape 4K UHD
ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,

1 ಅರಸುಗಳು 13:30 (KANIRV)
Square Portrait Landscape 4K UHD
ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ!” ಎಂದು ಗೋಳಾಡಿದರು.

1 ಅರಸುಗಳು 13:31 (KANIRV)
Square Portrait Landscape 4K UHD
ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.

1 ಅರಸುಗಳು 13:32 (KANIRV)
Square Portrait Landscape 4K UHD
ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು.

1 ಅರಸುಗಳು 13:33 (KANIRV)
Square Portrait Landscape 4K UHD
ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.

1 ಅರಸುಗಳು 13:34 (KANIRV)
Square Portrait Landscape 4K UHD
ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.

Available Bible Translations

American Standard Version (ASV)
1 Kings 13 (ASV) »
King James Version (KJV)
1 Kings 13 (KJV) »
GOD’S WORD® (GW)
1 Kings 13 (GW) »
Berean Bible (BSB)
1 Kings 13 (BSB) »
World English Bible (WEB)
1 Kings 13 (WEB) »
French Bible (LSG)
1 Rois 13 (LSG) »
German Bible (LUTH1912)
1 Könige 13 (LUTH1912) »
Marathi Bible (MARIRV)
1 राजे 13 (MARIRV) »
Gujarati Bible (GUJIRV)
1 રાજાઓ 13 (GUJIRV) »
Hebrew Bible (HEB)
מלכים א 13 (HEB) »
Portuguese Bible (BSL)
1 Reis 13 (BSL) »
Vietnamese Bible (VIE)
1 Các Vua 13 (VIE) »
Spanish Bible (RVA)
1 Reyes 13 (RVA) »
Italian Bible (RIV)
1 Re 13 (RIV) »
Chinese Simplified (CUVS)
列 王 记 上 13 (CUVS) »
Chinese Traditional (CUVT)
列 王 紀 上 13 (CUVT) »
Albanian Bible (ALB)
1 Mbretërve 13 (ALB) »
Swedish Bible (SV1917)
1 Kungaboken 13 (SV1917) »
Russian Bible (RUSV)
3 Царств 13 (RUSV) »
Ukrainian Bible (UKR)
1 царів 13 (UKR) »
Hungarian Bible (KAR)
1 Királyok 13 (KAR) »
Bulgarian Bible (BULG)
3 Царе 13 (BULG) »
Japanese Bible (JPN)
列王紀上 13 (JPN) »
Norwegian Bible (NORSK)
1 Kongebok 13 (NORSK) »

1 ಅರಸುಗಳು (KANIRV) Chapter Selection

KANIRV Book Selection List