1 ಅರಸುಗಳು Chapter 15 KANIRV Bible Verse Images

1 ಅರಸುಗಳು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಅರಸುಗಳು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಅರಸುಗಳು 15:1 (KANIRV)
Square Portrait Landscape 4K UHD
ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.

1 ಅರಸುಗಳು 15:2 (KANIRV)
Square Portrait Landscape 4K UHD
ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.

1 ಅರಸುಗಳು 15:3 (KANIRV)
Square Portrait Landscape 4K UHD
ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.

1 ಅರಸುಗಳು 15:4 (KANIRV)
Square Portrait Landscape 4K UHD
ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.

1 ಅರಸುಗಳು 15:5 (KANIRV)
Square Portrait Landscape 4K UHD
ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.

1 ಅರಸುಗಳು 15:6 (KANIRV)
Square Portrait Landscape 4K UHD
ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

1 ಅರಸುಗಳು 15:7 (KANIRV)
Square Portrait Landscape 4K UHD
ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.

1 ಅರಸುಗಳು 15:8 (KANIRV)
Square Portrait Landscape 4K UHD
ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.

1 ಅರಸುಗಳು 15:9 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.

1 ಅರಸುಗಳು 15:10 (KANIRV)
Square Portrait Landscape 4K UHD
ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.

1 ಅರಸುಗಳು 15:11 (KANIRV)
Square Portrait Landscape 4K UHD
ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

1 ಅರಸುಗಳು 15:12 (KANIRV)
Square Portrait Landscape 4K UHD
ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.

1 ಅರಸುಗಳು 15:13 (KANIRV)
Square Portrait Landscape 4K UHD
ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.

1 ಅರಸುಗಳು 15:14 (KANIRV)
Square Portrait Landscape 4K UHD
ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.

1 ಅರಸುಗಳು 15:15 (KANIRV)
Square Portrait Landscape 4K UHD
ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.

1 ಅರಸುಗಳು 15:16 (KANIRV)
Square Portrait Landscape 4K UHD
ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು

1 ಅರಸುಗಳು 15:17 (KANIRV)
Square Portrait Landscape 4K UHD
ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.

1 ಅರಸುಗಳು 15:18 (KANIRV)
Square Portrait Landscape 4K UHD
ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.

1 ಅರಸುಗಳು 15:19 (KANIRV)
Square Portrait Landscape 4K UHD
ಆತನು ಅವನಿಗೆ “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು” ಎಂದು ಹೇಳಿದನು.

1 ಅರಸುಗಳು 15:20 (KANIRV)
Square Portrait Landscape 4K UHD
ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.

1 ಅರಸುಗಳು 15:21 (KANIRV)
Square Portrait Landscape 4K UHD
ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.

1 ಅರಸುಗಳು 15:22 (KANIRV)
Square Portrait Landscape 4K UHD
ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.

1 ಅರಸುಗಳು 15:23 (KANIRV)
Square Portrait Landscape 4K UHD
ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.

1 ಅರಸುಗಳು 15:24 (KANIRV)
Square Portrait Landscape 4K UHD
ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.

1 ಅರಸುಗಳು 15:25 (KANIRV)
Square Portrait Landscape 4K UHD
ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.

1 ಅರಸುಗಳು 15:26 (KANIRV)
Square Portrait Landscape 4K UHD
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

1 ಅರಸುಗಳು 15:27 (KANIRV)
Square Portrait Landscape 4K UHD
ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.

1 ಅರಸುಗಳು 15:28 (KANIRV)
Square Portrait Landscape 4K UHD
ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.

1 ಅರಸುಗಳು 15:29 (KANIRV)
Square Portrait Landscape 4K UHD
ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

1 ಅರಸುಗಳು 15:30 (KANIRV)
Square Portrait Landscape 4K UHD
ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.

1 ಅರಸುಗಳು 15:31 (KANIRV)
Square Portrait Landscape 4K UHD
ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.

1 ಅರಸುಗಳು 15:32 (KANIRV)
Square Portrait Landscape 4K UHD
ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

1 ಅರಸುಗಳು 15:33 (KANIRV)
Square Portrait Landscape 4K UHD
ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.

1 ಅರಸುಗಳು 15:34 (KANIRV)
Square Portrait Landscape 4K UHD
ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

Available Bible Translations

American Standard Version (ASV)
1 Kings 15 (ASV) »
King James Version (KJV)
1 Kings 15 (KJV) »
GOD’S WORD® (GW)
1 Kings 15 (GW) »
Berean Bible (BSB)
1 Kings 15 (BSB) »
World English Bible (WEB)
1 Kings 15 (WEB) »
French Bible (LSG)
1 Rois 15 (LSG) »
German Bible (LUTH1912)
1 Könige 15 (LUTH1912) »
Marathi Bible (MARIRV)
1 राजे 15 (MARIRV) »
Gujarati Bible (GUJIRV)
1 રાજાઓ 15 (GUJIRV) »
Hebrew Bible (HEB)
מלכים א 15 (HEB) »
Portuguese Bible (BSL)
1 Reis 15 (BSL) »
Vietnamese Bible (VIE)
1 Các Vua 15 (VIE) »
Spanish Bible (RVA)
1 Reyes 15 (RVA) »
Italian Bible (RIV)
1 Re 15 (RIV) »
Chinese Simplified (CUVS)
列 王 记 上 15 (CUVS) »
Chinese Traditional (CUVT)
列 王 紀 上 15 (CUVT) »
Albanian Bible (ALB)
1 Mbretërve 15 (ALB) »
Swedish Bible (SV1917)
1 Kungaboken 15 (SV1917) »
Russian Bible (RUSV)
3 Царств 15 (RUSV) »
Ukrainian Bible (UKR)
1 царів 15 (UKR) »
Hungarian Bible (KAR)
1 Királyok 15 (KAR) »
Bulgarian Bible (BULG)
3 Царе 15 (BULG) »
Japanese Bible (JPN)
列王紀上 15 (JPN) »
Norwegian Bible (NORSK)
1 Kongebok 15 (NORSK) »

1 ಅರಸುಗಳು (KANIRV) Chapter Selection

KANIRV Book Selection List