1 ಸಮುವೇಲನು Chapter 8 KANIRV Bible Verse Images

1 ಸಮುವೇಲನು 8 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 1 ಸಮುವೇಲನು 8 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


1 ಸಮುವೇಲನು 8:1 (KANIRV)
Square Portrait Landscape 4K UHD
ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.

1 ಸಮುವೇಲನು 8:2 (KANIRV)
Square Portrait Landscape 4K UHD
ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು.

1 ಸಮುವೇಲನು 8:3 (KANIRV)
Square Portrait Landscape 4K UHD
ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.

1 ಸಮುವೇಲನು 8:4 (KANIRV)
Square Portrait Landscape 4K UHD
ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು

1 ಸಮುವೇಲನು 8:5 (KANIRV)
Square Portrait Landscape 4K UHD
ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.

1 ಸಮುವೇಲನು 8:6 (KANIRV)
Square Portrait Landscape 4K UHD
ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.

1 ಸಮುವೇಲನು 8:7 (KANIRV)
Square Portrait Landscape 4K UHD
ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

1 ಸಮುವೇಲನು 8:8 (KANIRV)
Square Portrait Landscape 4K UHD
ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ.

1 ಸಮುವೇಲನು 8:9 (KANIRV)
Square Portrait Landscape 4K UHD
ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.

1 ಸಮುವೇಲನು 8:10 (KANIRV)
Square Portrait Landscape 4K UHD
ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ,

1 ಸಮುವೇಲನು 8:11 (KANIRV)
Square Portrait Landscape 4K UHD
“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.

1 ಸಮುವೇಲನು 8:12 (KANIRV)
Square Portrait Landscape 4K UHD
ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.

1 ಸಮುವೇಲನು 8:13 (KANIRV)
Square Portrait Landscape 4K UHD
ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು.

1 ಸಮುವೇಲನು 8:14 (KANIRV)
Square Portrait Landscape 4K UHD
ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.

1 ಸಮುವೇಲನು 8:15 (KANIRV)
Square Portrait Landscape 4K UHD
ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.

1 ಸಮುವೇಲನು 8:16 (KANIRV)
Square Portrait Landscape 4K UHD
ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.

1 ಸಮುವೇಲನು 8:17 (KANIRV)
Square Portrait Landscape 4K UHD
ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.

1 ಸಮುವೇಲನು 8:18 (KANIRV)
Square Portrait Landscape 4K UHD
ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.

1 ಸಮುವೇಲನು 8:19 (KANIRV)
Square Portrait Landscape 4K UHD
ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;

1 ಸಮುವೇಲನು 8:20 (KANIRV)
Square Portrait Landscape 4K UHD
ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು.

1 ಸಮುವೇಲನು 8:21 (KANIRV)
Square Portrait Landscape 4K UHD
ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ

1 ಸಮುವೇಲನು 8:22 (KANIRV)
Square Portrait Landscape 4K UHD
ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.

Available Bible Translations

American Standard Version (ASV)
1 Samuel 8 (ASV) »
King James Version (KJV)
1 Samuel 8 (KJV) »
GOD’S WORD® (GW)
1 Samuel 8 (GW) »
Berean Bible (BSB)
1 Samuel 8 (BSB) »
World English Bible (WEB)
1 Samuel 8 (WEB) »
French Bible (LSG)
1 Samuel 8 (LSG) »
German Bible (LUTH1912)
1 Samuel 8 (LUTH1912) »
Punjabi Bible (PANIRV)
1 ਸਮੂਏਲ 8 (PANIRV) »
Gujarati Bible (GUJIRV)
1 શમુએલ 8 (GUJIRV) »
Hebrew Bible (HEB)
שמואל א 8 (HEB) »
Portuguese Bible (BSL)
1 Samuel 8 (BSL) »
Vietnamese Bible (VIE)
1 Sa-mu-ên 8 (VIE) »
Spanish Bible (RVA)
1 Samuel 8 (RVA) »
Italian Bible (RIV)
1 Samuele 8 (RIV) »
Chinese Simplified (CUVS)
撒 母 耳 记 上 8 (CUVS) »
Chinese Traditional (CUVT)
撒 母 耳 記 上 8 (CUVT) »
Albanian Bible (ALB)
1 Samuelit 8 (ALB) »
Swedish Bible (SV1917)
1 Samuelsboken 8 (SV1917) »
Russian Bible (RUSV)
1 Царств 8 (RUSV) »
Hungarian Bible (KAR)
1 Sámuel 8 (KAR) »
Bulgarian Bible (BULG)
1 Царе 8 (BULG) »
Japanese Bible (JPN)
サムエル記上 8 (JPN) »
Norwegian Bible (NORSK)
1 Samuel 8 (NORSK) »

1 ಸಮುವೇಲನು (KANIRV) Chapter Selection

KANIRV Book Selection List