2 ಪೂರ್ವಕಾಲವೃತ್ತಾಂತ Chapter 15 KANIRV Bible Verse Images

2 ಪೂರ್ವಕಾಲವೃತ್ತಾಂತ 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 15:1 (KANIRV)
Square Portrait Landscape 4K UHD
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.

2 ಪೂರ್ವಕಾಲವೃತ್ತಾಂತ 15:2 (KANIRV)
Square Portrait Landscape 4K UHD
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.

2 ಪೂರ್ವಕಾಲವೃತ್ತಾಂತ 15:3 (KANIRV)
Square Portrait Landscape 4K UHD
ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.

2 ಪೂರ್ವಕಾಲವೃತ್ತಾಂತ 15:4 (KANIRV)
Square Portrait Landscape 4K UHD
ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.

2 ಪೂರ್ವಕಾಲವೃತ್ತಾಂತ 15:5 (KANIRV)
Square Portrait Landscape 4K UHD
ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.

2 ಪೂರ್ವಕಾಲವೃತ್ತಾಂತ 15:6 (KANIRV)
Square Portrait Landscape 4K UHD
ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು.

2 ಪೂರ್ವಕಾಲವೃತ್ತಾಂತ 15:7 (KANIRV)
Square Portrait Landscape 4K UHD
ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 15:8 (KANIRV)
Square Portrait Landscape 4K UHD
ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

2 ಪೂರ್ವಕಾಲವೃತ್ತಾಂತ 15:9 (KANIRV)
Square Portrait Landscape 4K UHD
ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.

2 ಪೂರ್ವಕಾಲವೃತ್ತಾಂತ 15:10 (KANIRV)
Square Portrait Landscape 4K UHD
ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು.

2 ಪೂರ್ವಕಾಲವೃತ್ತಾಂತ 15:11 (KANIRV)
Square Portrait Landscape 4K UHD
ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು.

2 ಪೂರ್ವಕಾಲವೃತ್ತಾಂತ 15:12 (KANIRV)
Square Portrait Landscape 4K UHD
ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು.

2 ಪೂರ್ವಕಾಲವೃತ್ತಾಂತ 15:13 (KANIRV)
Square Portrait Landscape 4K UHD
ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು

2 ಪೂರ್ವಕಾಲವೃತ್ತಾಂತ 15:14 (KANIRV)
Square Portrait Landscape 4K UHD
ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.

2 ಪೂರ್ವಕಾಲವೃತ್ತಾಂತ 15:15 (KANIRV)
Square Portrait Landscape 4K UHD
ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.

2 ಪೂರ್ವಕಾಲವೃತ್ತಾಂತ 15:16 (KANIRV)
Square Portrait Landscape 4K UHD
ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.

2 ಪೂರ್ವಕಾಲವೃತ್ತಾಂತ 15:17 (KANIRV)
Square Portrait Landscape 4K UHD
ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.

2 ಪೂರ್ವಕಾಲವೃತ್ತಾಂತ 15:18 (KANIRV)
Square Portrait Landscape 4K UHD
ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.

2 ಪೂರ್ವಕಾಲವೃತ್ತಾಂತ 15:19 (KANIRV)
Square Portrait Landscape 4K UHD
ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.

Available Bible Translations

American Standard Version (ASV)
2 Chronicles 15 (ASV) »
King James Version (KJV)
2 Chronicles 15 (KJV) »
GOD’S WORD® (GW)
2 Chronicles 15 (GW) »
Berean Bible (BSB)
2 Chronicles 15 (BSB) »
World English Bible (WEB)
2 Chronicles 15 (WEB) »
French Bible (LSG)
2 Chroniques 15 (LSG) »
German Bible (LUTH1912)
2 Chronik 15 (LUTH1912) »
Arabic Bible (AVD)
٢ أخبار 15 (AVD) »
Portuguese Bible (BSL)
2 Crônicas 15 (BSL) »
Vietnamese Bible (VIE)
2 Sử Ký 15 (VIE) »
Spanish Bible (RVA)
2 Crónicas 15 (RVA) »
Italian Bible (RIV)
2 Cronache 15 (RIV) »
Chinese Simplified (CUVS)
历 代 志 下 15 (CUVS) »
Chinese Traditional (CUVT)
歷 代 志 下 15 (CUVT) »
Albanian Bible (ALB)
2 Kronikave 15 (ALB) »
Swedish Bible (SV1917)
2 Krönikeboken 15 (SV1917) »
Ukrainian Bible (UKR)
2 хроніки 15 (UKR) »
Hungarian Bible (KAR)
2 Krónika 15 (KAR) »
Bulgarian Bible (BULG)
2 Летописи 15 (BULG) »
Japanese Bible (JPN)
歴代志下 15 (JPN) »
Norwegian Bible (NORSK)
2 Krønikebok 15 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List