2 ಪೂರ್ವಕಾಲವೃತ್ತಾಂತ Chapter 20 KANIRV Bible Verse Images

2 ಪೂರ್ವಕಾಲವೃತ್ತಾಂತ 20 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 20 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 20:1 (KANIRV)
Square Portrait Landscape 4K UHD
ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

2 ಪೂರ್ವಕಾಲವೃತ್ತಾಂತ 20:2 (KANIRV)
Square Portrait Landscape 4K UHD
ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.

2 ಪೂರ್ವಕಾಲವೃತ್ತಾಂತ 20:3 (KANIRV)
Square Portrait Landscape 4K UHD
ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.

2 ಪೂರ್ವಕಾಲವೃತ್ತಾಂತ 20:4 (KANIRV)
Square Portrait Landscape 4K UHD
ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.

2 ಪೂರ್ವಕಾಲವೃತ್ತಾಂತ 20:5 (KANIRV)
Square Portrait Landscape 4K UHD
ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,

2 ಪೂರ್ವಕಾಲವೃತ್ತಾಂತ 20:6 (KANIRV)
Square Portrait Landscape 4K UHD
“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?

2 ಪೂರ್ವಕಾಲವೃತ್ತಾಂತ 20:7 (KANIRV)
Square Portrait Landscape 4K UHD
ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.

2 ಪೂರ್ವಕಾಲವೃತ್ತಾಂತ 20:8 (KANIRV)
Square Portrait Landscape 4K UHD
ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.

2 ಪೂರ್ವಕಾಲವೃತ್ತಾಂತ 20:9 (KANIRV)
Square Portrait Landscape 4K UHD
ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.

2 ಪೂರ್ವಕಾಲವೃತ್ತಾಂತ 20:10 (KANIRV)
Square Portrait Landscape 4K UHD
ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.

2 ಪೂರ್ವಕಾಲವೃತ್ತಾಂತ 20:11 (KANIRV)
Square Portrait Landscape 4K UHD
ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

2 ಪೂರ್ವಕಾಲವೃತ್ತಾಂತ 20:12 (KANIRV)
Square Portrait Landscape 4K UHD
ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.

2 ಪೂರ್ವಕಾಲವೃತ್ತಾಂತ 20:13 (KANIRV)
Square Portrait Landscape 4K UHD
ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.

2 ಪೂರ್ವಕಾಲವೃತ್ತಾಂತ 20:14 (KANIRV)
Square Portrait Landscape 4K UHD
ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

2 ಪೂರ್ವಕಾಲವೃತ್ತಾಂತ 20:15 (KANIRV)
Square Portrait Landscape 4K UHD
ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.

2 ಪೂರ್ವಕಾಲವೃತ್ತಾಂತ 20:16 (KANIRV)
Square Portrait Landscape 4K UHD
ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.

2 ಪೂರ್ವಕಾಲವೃತ್ತಾಂತ 20:17 (KANIRV)
Square Portrait Landscape 4K UHD
ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 20:18 (KANIRV)
Square Portrait Landscape 4K UHD
ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

2 ಪೂರ್ವಕಾಲವೃತ್ತಾಂತ 20:19 (KANIRV)
Square Portrait Landscape 4K UHD
ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.

2 ಪೂರ್ವಕಾಲವೃತ್ತಾಂತ 20:20 (KANIRV)
Square Portrait Landscape 4K UHD
ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 20:21 (KANIRV)
Square Portrait Landscape 4K UHD
ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 20:22 (KANIRV)
Square Portrait Landscape 4K UHD
ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.

2 ಪೂರ್ವಕಾಲವೃತ್ತಾಂತ 20:23 (KANIRV)
Square Portrait Landscape 4K UHD
ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

2 ಪೂರ್ವಕಾಲವೃತ್ತಾಂತ 20:24 (KANIRV)
Square Portrait Landscape 4K UHD
ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.

2 ಪೂರ್ವಕಾಲವೃತ್ತಾಂತ 20:25 (KANIRV)
Square Portrait Landscape 4K UHD
ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.

2 ಪೂರ್ವಕಾಲವೃತ್ತಾಂತ 20:26 (KANIRV)
Square Portrait Landscape 4K UHD
ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.

2 ಪೂರ್ವಕಾಲವೃತ್ತಾಂತ 20:27 (KANIRV)
Square Portrait Landscape 4K UHD
ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.

2 ಪೂರ್ವಕಾಲವೃತ್ತಾಂತ 20:28 (KANIRV)
Square Portrait Landscape 4K UHD
ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.

2 ಪೂರ್ವಕಾಲವೃತ್ತಾಂತ 20:29 (KANIRV)
Square Portrait Landscape 4K UHD
ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

2 ಪೂರ್ವಕಾಲವೃತ್ತಾಂತ 20:30 (KANIRV)
Square Portrait Landscape 4K UHD
ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.

2 ಪೂರ್ವಕಾಲವೃತ್ತಾಂತ 20:31 (KANIRV)
Square Portrait Landscape 4K UHD
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.

2 ಪೂರ್ವಕಾಲವೃತ್ತಾಂತ 20:32 (KANIRV)
Square Portrait Landscape 4K UHD
ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.

2 ಪೂರ್ವಕಾಲವೃತ್ತಾಂತ 20:33 (KANIRV)
Square Portrait Landscape 4K UHD
ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.

2 ಪೂರ್ವಕಾಲವೃತ್ತಾಂತ 20:34 (KANIRV)
Square Portrait Landscape 4K UHD
ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

2 ಪೂರ್ವಕಾಲವೃತ್ತಾಂತ 20:35 (KANIRV)
Square Portrait Landscape 4K UHD
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.

2 ಪೂರ್ವಕಾಲವೃತ್ತಾಂತ 20:36 (KANIRV)
Square Portrait Landscape 4K UHD
ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.

2 ಪೂರ್ವಕಾಲವೃತ್ತಾಂತ 20:37 (KANIRV)
Square Portrait Landscape 4K UHD
ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

Available Bible Translations

American Standard Version (ASV)
2 Chronicles 20 (ASV) »
King James Version (KJV)
2 Chronicles 20 (KJV) »
GOD’S WORD® (GW)
2 Chronicles 20 (GW) »
Berean Bible (BSB)
2 Chronicles 20 (BSB) »
World English Bible (WEB)
2 Chronicles 20 (WEB) »
French Bible (LSG)
2 Chroniques 20 (LSG) »
German Bible (LUTH1912)
2 Chronik 20 (LUTH1912) »
Arabic Bible (AVD)
٢ أخبار 20 (AVD) »
Portuguese Bible (BSL)
2 Crônicas 20 (BSL) »
Vietnamese Bible (VIE)
2 Sử Ký 20 (VIE) »
Spanish Bible (RVA)
2 Crónicas 20 (RVA) »
Italian Bible (RIV)
2 Cronache 20 (RIV) »
Chinese Simplified (CUVS)
历 代 志 下 20 (CUVS) »
Chinese Traditional (CUVT)
歷 代 志 下 20 (CUVT) »
Albanian Bible (ALB)
2 Kronikave 20 (ALB) »
Swedish Bible (SV1917)
2 Krönikeboken 20 (SV1917) »
Ukrainian Bible (UKR)
2 хроніки 20 (UKR) »
Hungarian Bible (KAR)
2 Krónika 20 (KAR) »
Bulgarian Bible (BULG)
2 Летописи 20 (BULG) »
Japanese Bible (JPN)
歴代志下 20 (JPN) »
Norwegian Bible (NORSK)
2 Krønikebok 20 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List