2 ಪೂರ್ವಕಾಲವೃತ್ತಾಂತ Chapter 33 KANIRV Bible Verse Images

2 ಪೂರ್ವಕಾಲವೃತ್ತಾಂತ 33 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 33 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 33:1 (KANIRV)
Square Portrait Landscape 4K UHD
ಮನಸ್ಸೆಯು ಅರಸನಾದಾಗ ಅವನು ಹನ್ನೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಐವತ್ತೈದು ವರ್ಷಗಳ ಕಾಲ ಆಳಿದನು.

2 ಪೂರ್ವಕಾಲವೃತ್ತಾಂತ 33:2 (KANIRV)
Square Portrait Landscape 4K UHD
ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.

2 ಪೂರ್ವಕಾಲವೃತ್ತಾಂತ 33:3 (KANIRV)
Square Portrait Landscape 4K UHD
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.

2 ಪೂರ್ವಕಾಲವೃತ್ತಾಂತ 33:4 (KANIRV)
Square Portrait Landscape 4K UHD
ಯೆಹೋವನು ಯೆರೂಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ,

2 ಪೂರ್ವಕಾಲವೃತ್ತಾಂತ 33:5 (KANIRV)
Square Portrait Landscape 4K UHD
ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.

2 ಪೂರ್ವಕಾಲವೃತ್ತಾಂತ 33:6 (KANIRV)
Square Portrait Landscape 4K UHD
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

2 ಪೂರ್ವಕಾಲವೃತ್ತಾಂತ 33:7 (KANIRV)
Square Portrait Landscape 4K UHD
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.

2 ಪೂರ್ವಕಾಲವೃತ್ತಾಂತ 33:8 (KANIRV)
Square Portrait Landscape 4K UHD
ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪೂರ್ವಿಕರಿಗೆ ನೇಮಿಸಲ್ಟಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.

2 ಪೂರ್ವಕಾಲವೃತ್ತಾಂತ 33:9 (KANIRV)
Square Portrait Landscape 4K UHD
ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

2 ಪೂರ್ವಕಾಲವೃತ್ತಾಂತ 33:10 (KANIRV)
Square Portrait Landscape 4K UHD
ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.

2 ಪೂರ್ವಕಾಲವೃತ್ತಾಂತ 33:11 (KANIRV)
Square Portrait Landscape 4K UHD
ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

2 ಪೂರ್ವಕಾಲವೃತ್ತಾಂತ 33:12 (KANIRV)
Square Portrait Landscape 4K UHD
ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು

2 ಪೂರ್ವಕಾಲವೃತ್ತಾಂತ 33:13 (KANIRV)
Square Portrait Landscape 4K UHD
ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.

2 ಪೂರ್ವಕಾಲವೃತ್ತಾಂತ 33:14 (KANIRV)
Square Portrait Landscape 4K UHD
ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.

2 ಪೂರ್ವಕಾಲವೃತ್ತಾಂತ 33:15 (KANIRV)
Square Portrait Landscape 4K UHD
ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.

2 ಪೂರ್ವಕಾಲವೃತ್ತಾಂತ 33:16 (KANIRV)
Square Portrait Landscape 4K UHD
ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 33:17 (KANIRV)
Square Portrait Landscape 4K UHD
ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.

2 ಪೂರ್ವಕಾಲವೃತ್ತಾಂತ 33:18 (KANIRV)
Square Portrait Landscape 4K UHD
ಮನಸ್ಸೆಯ ಉಳಿದ ಚರಿತ್ರೆಯೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ದರ್ಶಕರು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳೂ ಇಸ್ರಾಯೇಲ್ ರಾಜರ ವೃತ್ತಾಂತಗಳಲ್ಲಿ ಬರೆಯಲ್ಪಟ್ಟಿವೆ.

2 ಪೂರ್ವಕಾಲವೃತ್ತಾಂತ 33:19 (KANIRV)
Square Portrait Landscape 4K UHD
ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.

2 ಪೂರ್ವಕಾಲವೃತ್ತಾಂತ 33:20 (KANIRV)
Square Portrait Landscape 4K UHD
ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.

2 ಪೂರ್ವಕಾಲವೃತ್ತಾಂತ 33:21 (KANIRV)
Square Portrait Landscape 4K UHD
ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು.

2 ಪೂರ್ವಕಾಲವೃತ್ತಾಂತ 33:22 (KANIRV)
Square Portrait Landscape 4K UHD
ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.

2 ಪೂರ್ವಕಾಲವೃತ್ತಾಂತ 33:23 (KANIRV)
Square Portrait Landscape 4K UHD
ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.

2 ಪೂರ್ವಕಾಲವೃತ್ತಾಂತ 33:24 (KANIRV)
Square Portrait Landscape 4K UHD
ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.

2 ಪೂರ್ವಕಾಲವೃತ್ತಾಂತ 33:25 (KANIRV)
Square Portrait Landscape 4K UHD
ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.

Available Bible Translations

American Standard Version (ASV)
2 Chronicles 33 (ASV) »
King James Version (KJV)
2 Chronicles 33 (KJV) »
GOD’S WORD® (GW)
2 Chronicles 33 (GW) »
Berean Bible (BSB)
2 Chronicles 33 (BSB) »
World English Bible (WEB)
2 Chronicles 33 (WEB) »
French Bible (LSG)
2 Chroniques 33 (LSG) »
German Bible (LUTH1912)
2 Chronik 33 (LUTH1912) »
Arabic Bible (AVD)
٢ أخبار 33 (AVD) »
Portuguese Bible (BSL)
2 Crônicas 33 (BSL) »
Vietnamese Bible (VIE)
2 Sử Ký 33 (VIE) »
Spanish Bible (RVA)
2 Crónicas 33 (RVA) »
Italian Bible (RIV)
2 Cronache 33 (RIV) »
Chinese Simplified (CUVS)
历 代 志 下 33 (CUVS) »
Chinese Traditional (CUVT)
歷 代 志 下 33 (CUVT) »
Albanian Bible (ALB)
2 Kronikave 33 (ALB) »
Swedish Bible (SV1917)
2 Krönikeboken 33 (SV1917) »
Ukrainian Bible (UKR)
2 хроніки 33 (UKR) »
Hungarian Bible (KAR)
2 Krónika 33 (KAR) »
Bulgarian Bible (BULG)
2 Летописи 33 (BULG) »
Japanese Bible (JPN)
歴代志下 33 (JPN) »
Norwegian Bible (NORSK)
2 Krønikebok 33 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List