2 ಪೂರ್ವಕಾಲವೃತ್ತಾಂತ Chapter 34 KANIRV Bible Verse Images

2 ಪೂರ್ವಕಾಲವೃತ್ತಾಂತ 34 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಪೂರ್ವಕಾಲವೃತ್ತಾಂತ 34 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಪೂರ್ವಕಾಲವೃತ್ತಾಂತ 34:1 (KANIRV)
Square Portrait Landscape 4K UHD
ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.

2 ಪೂರ್ವಕಾಲವೃತ್ತಾಂತ 34:2 (KANIRV)
Square Portrait Landscape 4K UHD
ಅವನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲೇ ಯೆಹೋವನ ಚಿತ್ತಾನುಸಾರವಾಗಿ ನಡೆದನು.

2 ಪೂರ್ವಕಾಲವೃತ್ತಾಂತ 34:3 (KANIRV)
Square Portrait Landscape 4K UHD
ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.

2 ಪೂರ್ವಕಾಲವೃತ್ತಾಂತ 34:4 (KANIRV)
Square Portrait Landscape 4K UHD
ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.

2 ಪೂರ್ವಕಾಲವೃತ್ತಾಂತ 34:5 (KANIRV)
Square Portrait Landscape 4K UHD
ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.

2 ಪೂರ್ವಕಾಲವೃತ್ತಾಂತ 34:6 (KANIRV)
Square Portrait Landscape 4K UHD
ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ,

2 ಪೂರ್ವಕಾಲವೃತ್ತಾಂತ 34:7 (KANIRV)
Square Portrait Landscape 4K UHD
ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.

2 ಪೂರ್ವಕಾಲವೃತ್ತಾಂತ 34:8 (KANIRV)
Square Portrait Landscape 4K UHD
ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

2 ಪೂರ್ವಕಾಲವೃತ್ತಾಂತ 34:9 (KANIRV)
Square Portrait Landscape 4K UHD
ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ, ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ, ಯೆರೂಸಲೇಮಿನವರಿಂದಲೂ ಕೂಡಿಸಿದ್ದ ಹಣವನ್ನು

2 ಪೂರ್ವಕಾಲವೃತ್ತಾಂತ 34:10 (KANIRV)
Square Portrait Landscape 4K UHD
ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು

2 ಪೂರ್ವಕಾಲವೃತ್ತಾಂತ 34:11 (KANIRV)
Square Portrait Landscape 4K UHD
ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.

2 ಪೂರ್ವಕಾಲವೃತ್ತಾಂತ 34:12 (KANIRV)
Square Portrait Landscape 4K UHD
ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.

2 ಪೂರ್ವಕಾಲವೃತ್ತಾಂತ 34:13 (KANIRV)
Square Portrait Landscape 4K UHD
ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.

2 ಪೂರ್ವಕಾಲವೃತ್ತಾಂತ 34:14 (KANIRV)
Square Portrait Landscape 4K UHD
ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

2 ಪೂರ್ವಕಾಲವೃತ್ತಾಂತ 34:15 (KANIRV)
Square Portrait Landscape 4K UHD
ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.

2 ಪೂರ್ವಕಾಲವೃತ್ತಾಂತ 34:16 (KANIRV)
Square Portrait Landscape 4K UHD
ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.

2 ಪೂರ್ವಕಾಲವೃತ್ತಾಂತ 34:17 (KANIRV)
Square Portrait Landscape 4K UHD
ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಕೆಲಸ ಮಾಡಿಸುವವರಿಗೂ, ಮಾಡುವವರಿಗೂ ಒಪ್ಪಿಸಿದರು” ಎಂದು ತಿಳಿಸಿದನು.

2 ಪೂರ್ವಕಾಲವೃತ್ತಾಂತ 34:18 (KANIRV)
Square Portrait Landscape 4K UHD
ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.

2 ಪೂರ್ವಕಾಲವೃತ್ತಾಂತ 34:19 (KANIRV)
Square Portrait Landscape 4K UHD
ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.

2 ಪೂರ್ವಕಾಲವೃತ್ತಾಂತ 34:20 (KANIRV)
Square Portrait Landscape 4K UHD
ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಲೇಖಕನಾದ ಶಾಫಾನ್, ಅರಸನ ಸಹಕಾರಿಯಾದ ಅಸಾಯ ಎಂಬುವವರಿಗೆ ಅಜ್ಞಾಪಿಸಿದೇನೆಂದರೆ,

2 ಪೂರ್ವಕಾಲವೃತ್ತಾಂತ 34:21 (KANIRV)
Square Portrait Landscape 4K UHD
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.

2 ಪೂರ್ವಕಾಲವೃತ್ತಾಂತ 34:22 (KANIRV)
Square Portrait Landscape 4K UHD
ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

2 ಪೂರ್ವಕಾಲವೃತ್ತಾಂತ 34:23 (KANIRV)
Square Portrait Landscape 4K UHD
ಹುಲ್ದಳು ಅವರಿಗೆ, ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಮಾತುಗಳನ್ನು ತಿಳಿಸಿರಿ,

2 ಪೂರ್ವಕಾಲವೃತ್ತಾಂತ 34:24 (KANIRV)
Square Portrait Landscape 4K UHD
ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;

2 ಪೂರ್ವಕಾಲವೃತ್ತಾಂತ 34:25 (KANIRV)
Square Portrait Landscape 4K UHD
ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.

2 ಪೂರ್ವಕಾಲವೃತ್ತಾಂತ 34:26 (KANIRV)
Square Portrait Landscape 4K UHD
ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,

2 ಪೂರ್ವಕಾಲವೃತ್ತಾಂತ 34:27 (KANIRV)
Square Portrait Landscape 4K UHD
“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.

2 ಪೂರ್ವಕಾಲವೃತ್ತಾಂತ 34:28 (KANIRV)
Square Portrait Landscape 4K UHD
ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.

2 ಪೂರ್ವಕಾಲವೃತ್ತಾಂತ 34:29 (KANIRV)
Square Portrait Landscape 4K UHD
ಅನಂತರ ಅರಸನು ದೂತರ ಮುಖಾಂತರ ಯೆರೂಸಲೇಮಿನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಒಟ್ಟಾಗಿ ಸೇರಿಸಿದನು.

2 ಪೂರ್ವಕಾಲವೃತ್ತಾಂತ 34:30 (KANIRV)
Square Portrait Landscape 4K UHD
ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

2 ಪೂರ್ವಕಾಲವೃತ್ತಾಂತ 34:31 (KANIRV)
Square Portrait Landscape 4K UHD
ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.

2 ಪೂರ್ವಕಾಲವೃತ್ತಾಂತ 34:32 (KANIRV)
Square Portrait Landscape 4K UHD
ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.

2 ಪೂರ್ವಕಾಲವೃತ್ತಾಂತ 34:33 (KANIRV)
Square Portrait Landscape 4K UHD
ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.

Available Bible Translations

American Standard Version (ASV)
2 Chronicles 34 (ASV) »
King James Version (KJV)
2 Chronicles 34 (KJV) »
GOD’S WORD® (GW)
2 Chronicles 34 (GW) »
Berean Bible (BSB)
2 Chronicles 34 (BSB) »
World English Bible (WEB)
2 Chronicles 34 (WEB) »
French Bible (LSG)
2 Chroniques 34 (LSG) »
German Bible (LUTH1912)
2 Chronik 34 (LUTH1912) »
Arabic Bible (AVD)
٢ أخبار 34 (AVD) »
Portuguese Bible (BSL)
2 Crônicas 34 (BSL) »
Vietnamese Bible (VIE)
2 Sử Ký 34 (VIE) »
Spanish Bible (RVA)
2 Crónicas 34 (RVA) »
Italian Bible (RIV)
2 Cronache 34 (RIV) »
Chinese Simplified (CUVS)
历 代 志 下 34 (CUVS) »
Chinese Traditional (CUVT)
歷 代 志 下 34 (CUVT) »
Albanian Bible (ALB)
2 Kronikave 34 (ALB) »
Swedish Bible (SV1917)
2 Krönikeboken 34 (SV1917) »
Ukrainian Bible (UKR)
2 хроніки 34 (UKR) »
Hungarian Bible (KAR)
2 Krónika 34 (KAR) »
Bulgarian Bible (BULG)
2 Летописи 34 (BULG) »
Japanese Bible (JPN)
歴代志下 34 (JPN) »
Norwegian Bible (NORSK)
2 Krønikebok 34 (NORSK) »

2 ಪೂರ್ವಕಾಲವೃತ್ತಾಂತ (KANIRV) Chapter Selection

KANIRV Book Selection List