2 ಸಮುವೇಲನು Chapter 13 KANIRV Bible Verse Images

2 ಸಮುವೇಲನು 13 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಸಮುವೇಲನು 13 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಸಮುವೇಲನು 13:1 (KANIRV)
Square Portrait Landscape 4K UHD
ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.

2 ಸಮುವೇಲನು 13:2 (KANIRV)
Square Portrait Landscape 4K UHD
ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.

2 ಸಮುವೇಲನು 13:3 (KANIRV)
Square Portrait Landscape 4K UHD
ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.

2 ಸಮುವೇಲನು 13:4 (KANIRV)
Square Portrait Landscape 4K UHD
ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.

2 ಸಮುವೇಲನು 13:5 (KANIRV)
Square Portrait Landscape 4K UHD
ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.

2 ಸಮುವೇಲನು 13:6 (KANIRV)
Square Portrait Landscape 4K UHD
ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.

2 ಸಮುವೇಲನು 13:7 (KANIRV)
Square Portrait Landscape 4K UHD
ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.

2 ಸಮುವೇಲನು 13:8 (KANIRV)
Square Portrait Landscape 4K UHD
ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.

2 ಸಮುವೇಲನು 13:9 (KANIRV)
Square Portrait Landscape 4K UHD
ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.

2 ಸಮುವೇಲನು 13:10 (KANIRV)
Square Portrait Landscape 4K UHD
ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.

2 ಸಮುವೇಲನು 13:11 (KANIRV)
Square Portrait Landscape 4K UHD
ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.

2 ಸಮುವೇಲನು 13:12 (KANIRV)
Square Portrait Landscape 4K UHD
ಆಕೆಯು; “ಅಣ್ಣನೇ, ಬೇಡ, ನನ್ನನ್ನು ಅಪಮಾನಪಡಿಸಬೇಡ, ಇಸ್ರಾಯೇಲರಲ್ಲಿ ಇಂಥ ನೀಚಕಾರ್ಯವು ನಡೆಯಬಾರದು. ಇಂಥ ಅವಮಾನಕರವಾದ ಕೆಲಸವನ್ನು ಮಾಡಬೇಡ.

2 ಸಮುವೇಲನು 13:13 (KANIRV)
Square Portrait Landscape 4K UHD
ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.

2 ಸಮುವೇಲನು 13:14 (KANIRV)
Square Portrait Landscape 4K UHD
ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

2 ಸಮುವೇಲನು 13:15 (KANIRV)
Square Portrait Landscape 4K UHD
ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.

2 ಸಮುವೇಲನು 13:16 (KANIRV)
Square Portrait Landscape 4K UHD
ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು.

2 ಸಮುವೇಲನು 13:17 (KANIRV)
Square Portrait Landscape 4K UHD
ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು.

2 ಸಮುವೇಲನು 13:18 (KANIRV)
Square Portrait Landscape 4K UHD
ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.

2 ಸಮುವೇಲನು 13:19 (KANIRV)
Square Portrait Landscape 4K UHD
ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.

2 ಸಮುವೇಲನು 13:20 (KANIRV)
Square Portrait Landscape 4K UHD
ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.

2 ಸಮುವೇಲನು 13:21 (KANIRV)
Square Portrait Landscape 4K UHD
ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.

2 ಸಮುವೇಲನು 13:22 (KANIRV)
Square Portrait Landscape 4K UHD
ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.

2 ಸಮುವೇಲನು 13:23 (KANIRV)
Square Portrait Landscape 4K UHD
ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.

2 ಸಮುವೇಲನು 13:24 (KANIRV)
Square Portrait Landscape 4K UHD
ಅವನು ಅರಸನ ಬಳಿಗೆ ಹೋಗಿ ಅವನನ್ನು, “ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರೆಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಬರಲಿ” ಎಂದು ಬೇಡಿಕೊಂಡನು.

2 ಸಮುವೇಲನು 13:25 (KANIRV)
Square Portrait Landscape 4K UHD
ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.

2 ಸಮುವೇಲನು 13:26 (KANIRV)
Square Portrait Landscape 4K UHD
ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.

2 ಸಮುವೇಲನು 13:27 (KANIRV)
Square Portrait Landscape 4K UHD
ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.

2 ಸಮುವೇಲನು 13:28 (KANIRV)
Square Portrait Landscape 4K UHD
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

2 ಸಮುವೇಲನು 13:29 (KANIRV)
Square Portrait Landscape 4K UHD
ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.

2 ಸಮುವೇಲನು 13:30 (KANIRV)
Square Portrait Landscape 4K UHD
ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.

2 ಸಮುವೇಲನು 13:31 (KANIRV)
Square Portrait Landscape 4K UHD
ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.

2 ಸಮುವೇಲನು 13:32 (KANIRV)
Square Portrait Landscape 4K UHD
ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.

2 ಸಮುವೇಲನು 13:33 (KANIRV)
Square Portrait Landscape 4K UHD
ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.

2 ಸಮುವೇಲನು 13:34 (KANIRV)
Square Portrait Landscape 4K UHD
ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.

2 ಸಮುವೇಲನು 13:35 (KANIRV)
Square Portrait Landscape 4K UHD
ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ,

2 ಸಮುವೇಲನು 13:36 (KANIRV)
Square Portrait Landscape 4K UHD
ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.

2 ಸಮುವೇಲನು 13:37 (KANIRV)
Square Portrait Landscape 4K UHD
ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.

2 ಸಮುವೇಲನು 13:38 (KANIRV)
Square Portrait Landscape 4K UHD
ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

2 ಸಮುವೇಲನು 13:39 (KANIRV)
Square Portrait Landscape 4K UHD
ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.

Available Bible Translations

American Standard Version (ASV)
2 Samuel 13 (ASV) »
King James Version (KJV)
2 Samuel 13 (KJV) »
GOD’S WORD® (GW)
2 Samuel 13 (GW) »
Berean Bible (BSB)
2 Samuel 13 (BSB) »
World English Bible (WEB)
2 Samuel 13 (WEB) »
French Bible (LSG)
2 Samuel 13 (LSG) »
German Bible (LUTH1912)
2 Samuel 13 (LUTH1912) »
Punjabi Bible (PANIRV)
2 ਸਮੂਏਲ 13 (PANIRV) »
Gujarati Bible (GUJIRV)
2 શમુએલ 13 (GUJIRV) »
Hebrew Bible (HEB)
שמואל ב 13 (HEB) »
Portuguese Bible (BSL)
2 Samuel 13 (BSL) »
Vietnamese Bible (VIE)
2 Sa-mu-ên 13 (VIE) »
Spanish Bible (RVA)
2 Samuel 13 (RVA) »
Italian Bible (RIV)
2 Samuele 13 (RIV) »
Chinese Simplified (CUVS)
撒 母 耳 记 下 13 (CUVS) »
Chinese Traditional (CUVT)
撒 母 耳 記 下 13 (CUVT) »
Albanian Bible (ALB)
2 Samuelit 13 (ALB) »
Swedish Bible (SV1917)
2 Samuelsboken 13 (SV1917) »
Russian Bible (RUSV)
2 Царств 13 (RUSV) »
Hungarian Bible (KAR)
2 Sámuel 13 (KAR) »
Bulgarian Bible (BULG)
2 Царе 13 (BULG) »
Norwegian Bible (NORSK)
2 Samuel 13 (NORSK) »

2 ಸಮುವೇಲನು (KANIRV) Chapter Selection

KANIRV Book Selection List