2 ಸಮುವೇಲನು Chapter 23 KANIRV Bible Verse Images

2 ಸಮುವೇಲನು 23 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಸಮುವೇಲನು 23 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಸಮುವೇಲನು 23:1 (KANIRV)
Square Portrait Landscape 4K UHD
ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:

2 ಸಮುವೇಲನು 23:2 (KANIRV)
Square Portrait Landscape 4K UHD
“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.

2 ಸಮುವೇಲನು 23:3 (KANIRV)
Square Portrait Landscape 4K UHD
ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,

2 ಸಮುವೇಲನು 23:4 (KANIRV)
Square Portrait Landscape 4K UHD
ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.

2 ಸಮುವೇಲನು 23:5 (KANIRV)
Square Portrait Landscape 4K UHD
ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?

2 ಸಮುವೇಲನು 23:6 (KANIRV)
Square Portrait Landscape 4K UHD
ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,

2 ಸಮುವೇಲನು 23:7 (KANIRV)
Square Portrait Landscape 4K UHD
ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”

2 ಸಮುವೇಲನು 23:8 (KANIRV)
Square Portrait Landscape 4K UHD
ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.

2 ಸಮುವೇಲನು 23:9 (KANIRV)
Square Portrait Landscape 4K UHD
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.

2 ಸಮುವೇಲನು 23:10 (KANIRV)
Square Portrait Landscape 4K UHD
ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.

2 ಸಮುವೇಲನು 23:11 (KANIRV)
Square Portrait Landscape 4K UHD
ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.

2 ಸಮುವೇಲನು 23:12 (KANIRV)
Square Portrait Landscape 4K UHD
ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.

2 ಸಮುವೇಲನು 23:13 (KANIRV)
Square Portrait Landscape 4K UHD
ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,

2 ಸಮುವೇಲನು 23:14 (KANIRV)
Square Portrait Landscape 4K UHD
ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.

2 ಸಮುವೇಲನು 23:15 (KANIRV)
Square Portrait Landscape 4K UHD
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.

2 ಸಮುವೇಲನು 23:16 (KANIRV)
Square Portrait Landscape 4K UHD
ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.

2 ಸಮುವೇಲನು 23:17 (KANIRV)
Square Portrait Landscape 4K UHD
ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.

2 ಸಮುವೇಲನು 23:18 (KANIRV)
Square Portrait Landscape 4K UHD
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.

2 ಸಮುವೇಲನು 23:19 (KANIRV)
Square Portrait Landscape 4K UHD
ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?

2 ಸಮುವೇಲನು 23:20 (KANIRV)
Square Portrait Landscape 4K UHD
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.

2 ಸಮುವೇಲನು 23:21 (KANIRV)
Square Portrait Landscape 4K UHD
ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.

2 ಸಮುವೇಲನು 23:22 (KANIRV)
Square Portrait Landscape 4K UHD
ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

2 ಸಮುವೇಲನು 23:23 (KANIRV)
Square Portrait Landscape 4K UHD
ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

2 ಸಮುವೇಲನು 23:24 (KANIRV)
Square Portrait Landscape 4K UHD
ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,

2 ಸಮುವೇಲನು 23:25 (KANIRV)
Square Portrait Landscape 4K UHD
ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.

2 ಸಮುವೇಲನು 23:26 (KANIRV)
Square Portrait Landscape 4K UHD
ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,

2 ಸಮುವೇಲನು 23:27 (KANIRV)
Square Portrait Landscape 4K UHD
ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,

2 ಸಮುವೇಲನು 23:28 (KANIRV)
Square Portrait Landscape 4K UHD
ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,

2 ಸಮುವೇಲನು 23:29 (KANIRV)
Square Portrait Landscape 4K UHD
ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,

2 ಸಮುವೇಲನು 23:30 (KANIRV)
Square Portrait Landscape 4K UHD
ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.

2 ಸಮುವೇಲನು 23:31 (KANIRV)
Square Portrait Landscape 4K UHD
ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,

2 ಸಮುವೇಲನು 23:32 (KANIRV)
Square Portrait Landscape 4K UHD
ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,

2 ಸಮುವೇಲನು 23:33 (KANIRV)
Square Portrait Landscape 4K UHD
ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,

2 ಸಮುವೇಲನು 23:34 (KANIRV)
Square Portrait Landscape 4K UHD
ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,

2 ಸಮುವೇಲನು 23:35 (KANIRV)
Square Portrait Landscape 4K UHD
ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,

2 ಸಮುವೇಲನು 23:36 (KANIRV)
Square Portrait Landscape 4K UHD
ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,

2 ಸಮುವೇಲನು 23:37 (KANIRV)
Square Portrait Landscape 4K UHD
ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ

2 ಸಮುವೇಲನು 23:38 (KANIRV)
Square Portrait Landscape 4K UHD
ಇತ್ರೀಯರಾದ ಈರಾ ಮತ್ತು ಗಾರೇಬರು,

2 ಸಮುವೇಲನು 23:39 (KANIRV)
Square Portrait Landscape 4K UHD
ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.

Available Bible Translations

American Standard Version (ASV)
2 Samuel 23 (ASV) »
King James Version (KJV)
2 Samuel 23 (KJV) »
GOD’S WORD® (GW)
2 Samuel 23 (GW) »
Berean Bible (BSB)
2 Samuel 23 (BSB) »
World English Bible (WEB)
2 Samuel 23 (WEB) »
French Bible (LSG)
2 Samuel 23 (LSG) »
German Bible (LUTH1912)
2 Samuel 23 (LUTH1912) »
Punjabi Bible (PANIRV)
2 ਸਮੂਏਲ 23 (PANIRV) »
Gujarati Bible (GUJIRV)
2 શમુએલ 23 (GUJIRV) »
Hebrew Bible (HEB)
שמואל ב 23 (HEB) »
Portuguese Bible (BSL)
2 Samuel 23 (BSL) »
Vietnamese Bible (VIE)
2 Sa-mu-ên 23 (VIE) »
Spanish Bible (RVA)
2 Samuel 23 (RVA) »
Italian Bible (RIV)
2 Samuele 23 (RIV) »
Chinese Simplified (CUVS)
撒 母 耳 记 下 23 (CUVS) »
Chinese Traditional (CUVT)
撒 母 耳 記 下 23 (CUVT) »
Albanian Bible (ALB)
2 Samuelit 23 (ALB) »
Swedish Bible (SV1917)
2 Samuelsboken 23 (SV1917) »
Russian Bible (RUSV)
2 Царств 23 (RUSV) »
Hungarian Bible (KAR)
2 Sámuel 23 (KAR) »
Bulgarian Bible (BULG)
2 Царе 23 (BULG) »
Norwegian Bible (NORSK)
2 Samuel 23 (NORSK) »

2 ಸಮುವೇಲನು (KANIRV) Chapter Selection

KANIRV Book Selection List