2 ಥೆಸಲೋನಿಕದವರಿಗೆ Chapter 3 KANIRV Bible Verse Images

2 ಥೆಸಲೋನಿಕದವರಿಗೆ 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share 2 ಥೆಸಲೋನಿಕದವರಿಗೆ 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


2 ಥೆಸಲೋನಿಕದವರಿಗೆ 3:1 (KANIRV)
Square Portrait Landscape 4K UHD
ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,

2 ಥೆಸಲೋನಿಕದವರಿಗೆ 3:2 (KANIRV)
Square Portrait Landscape 4K UHD
ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.

2 ಥೆಸಲೋನಿಕದವರಿಗೆ 3:3 (KANIRV)
Square Portrait Landscape 4K UHD
ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

2 ಥೆಸಲೋನಿಕದವರಿಗೆ 3:4 (KANIRV)
Square Portrait Landscape 4K UHD
ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.

2 ಥೆಸಲೋನಿಕದವರಿಗೆ 3:5 (KANIRV)
Square Portrait Landscape 4K UHD
ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.

2 ಥೆಸಲೋನಿಕದವರಿಗೆ 3:6 (KANIRV)
Square Portrait Landscape 4K UHD
ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.

2 ಥೆಸಲೋನಿಕದವರಿಗೆ 3:7 (KANIRV)
Square Portrait Landscape 4K UHD
ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.

2 ಥೆಸಲೋನಿಕದವರಿಗೆ 3:8 (KANIRV)
Square Portrait Landscape 4K UHD
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.

2 ಥೆಸಲೋನಿಕದವರಿಗೆ 3:9 (KANIRV)
Square Portrait Landscape 4K UHD
ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.

2 ಥೆಸಲೋನಿಕದವರಿಗೆ 3:10 (KANIRV)
Square Portrait Landscape 4K UHD
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.

2 ಥೆಸಲೋನಿಕದವರಿಗೆ 3:11 (KANIRV)
Square Portrait Landscape 4K UHD
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.

2 ಥೆಸಲೋನಿಕದವರಿಗೆ 3:12 (KANIRV)
Square Portrait Landscape 4K UHD
ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.

2 ಥೆಸಲೋನಿಕದವರಿಗೆ 3:13 (KANIRV)
Square Portrait Landscape 4K UHD
ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.

2 ಥೆಸಲೋನಿಕದವರಿಗೆ 3:14 (KANIRV)
Square Portrait Landscape 4K UHD
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.

2 ಥೆಸಲೋನಿಕದವರಿಗೆ 3:15 (KANIRV)
Square Portrait Landscape 4K UHD
ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.

2 ಥೆಸಲೋನಿಕದವರಿಗೆ 3:16 (KANIRV)
Square Portrait Landscape 4K UHD
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.

2 ಥೆಸಲೋನಿಕದವರಿಗೆ 3:17 (KANIRV)
Square Portrait Landscape 4K UHD
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.

2 ಥೆಸಲೋನಿಕದವರಿಗೆ 3:18 (KANIRV)
Square Portrait Landscape 4K UHD
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.

Available Bible Translations

American Standard Version (ASV)
2 Thessalonians 3 (ASV) »
King James Version (KJV)
2 Thessalonians 3 (KJV) »
GOD’S WORD® (GW)
2 Thessalonians 3 (GW) »
Berean Bible (BSB)
2 Thessalonians 3 (BSB) »
World English Bible (WEB)
2 Thessalonians 3 (WEB) »
German Bible (LUTH1912)
2 Thessalonicher 3 (LUTH1912) »
Portuguese Bible (BSL)
2 Tessalonicenses 3 (BSL) »
Vietnamese Bible (VIE)
2 Thê-sa-lô-ni-ca 3 (VIE) »
Spanish Bible (RVA)
2 Tesalonicenses 3 (RVA) »
Italian Bible (RIV)
2 Tessalonicesi 3 (RIV) »
Albanian Bible (ALB)
2 Thesalonikasve 3 (ALB) »
Ukrainian Bible (UKR)
2 солунян 3 (UKR) »
Hungarian Bible (KAR)
2 Thesszalonika 3 (KAR) »
Bulgarian Bible (BULG)
2 Солунци 3 (BULG) »
Norwegian Bible (NORSK)
2 Tessaloniker 3 (NORSK) »

2 ಥೆಸಲೋನಿಕದವರಿಗೆ (KANIRV) Chapter Selection

1 2 3

KANIRV Book Selection List