ಅಪೊಸ್ತಲರ ಕೃತ್ಯಗಳು Chapter 10 KANIRV Bible Verse Images

ಅಪೊಸ್ತಲರ ಕೃತ್ಯಗಳು 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 10:1 (KANIRV)
Square Portrait Landscape 4K UHD
ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.

ಅಪೊಸ್ತಲರ ಕೃತ್ಯಗಳು 10:2 (KANIRV)
Square Portrait Landscape 4K UHD
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

ಅಪೊಸ್ತಲರ ಕೃತ್ಯಗಳು 10:3 (KANIRV)
Square Portrait Landscape 4K UHD
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.

ಅಪೊಸ್ತಲರ ಕೃತ್ಯಗಳು 10:4 (KANIRV)
Square Portrait Landscape 4K UHD
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.

ಅಪೊಸ್ತಲರ ಕೃತ್ಯಗಳು 10:5 (KANIRV)
Square Portrait Landscape 4K UHD
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು.

ಅಪೊಸ್ತಲರ ಕೃತ್ಯಗಳು 10:6 (KANIRV)
Square Portrait Landscape 4K UHD
ಅವನು ಚಮ್ಮಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರತೀರದ ಬಳಿಯಲ್ಲಿ ಇದೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 10:7 (KANIRV)
Square Portrait Landscape 4K UHD
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,

ಅಪೊಸ್ತಲರ ಕೃತ್ಯಗಳು 10:8 (KANIRV)
Square Portrait Landscape 4K UHD
ಅವರಿಗೆ ಈ ಸಂಗತಿಗಳನ್ನೆಲ್ಲಾ ವಿವರವಾಗಿ ಹೇಳಿ, ಅವರನ್ನು ಯೊಪ್ಪ ಎಂಬ ಪಟ್ಟಣಕ್ಕೆ ಕಳುಹಿಸಿದನು.

ಅಪೊಸ್ತಲರ ಕೃತ್ಯಗಳು 10:9 (KANIRV)
Square Portrait Landscape 4K UHD
ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.

ಅಪೊಸ್ತಲರ ಕೃತ್ಯಗಳು 10:10 (KANIRV)
Square Portrait Landscape 4K UHD
ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,

ಅಪೊಸ್ತಲರ ಕೃತ್ಯಗಳು 10:11 (KANIRV)
Square Portrait Landscape 4K UHD
ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.

ಅಪೊಸ್ತಲರ ಕೃತ್ಯಗಳು 10:12 (KANIRV)
Square Portrait Landscape 4K UHD
ಅದರೊಳಗೆ ಸಕಲ ವಿಧವಾದ ಪಶುಗಳೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳೂ ಇದ್ದವು.

ಅಪೊಸ್ತಲರ ಕೃತ್ಯಗಳು 10:13 (KANIRV)
Square Portrait Landscape 4K UHD
ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ಅವನಿಗೆ ಒಂದು ವಾಣಿ ಕೇಳಿಸಿತು.

ಅಪೊಸ್ತಲರ ಕೃತ್ಯಗಳು 10:14 (KANIRV)
Square Portrait Landscape 4K UHD
ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.

ಅಪೊಸ್ತಲರ ಕೃತ್ಯಗಳು 10:15 (KANIRV)
Square Portrait Landscape 4K UHD
ಅದಕ್ಕೆ; “ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದೆಂದು” ಪುನಃ ಎರಡನೆಯ ಸಾರಿ ಅವನಿಗೆ ವಾಣಿ ಕೇಳಿಸಿತು.

ಅಪೊಸ್ತಲರ ಕೃತ್ಯಗಳು 10:16 (KANIRV)
Square Portrait Landscape 4K UHD
ಹೀಗೆ ಮೂರು ಸಾರಿ ಆಯಿತು. ಆದ ಮೇಲೆ ಆ ವಸ್ತುವು ಆಕಾಶದೊಳಗೆ ಸೇರಿಕೊಂಡಿತು.

ಅಪೊಸ್ತಲರ ಕೃತ್ಯಗಳು 10:17 (KANIRV)
Square Portrait Landscape 4K UHD
ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;

ಅಪೊಸ್ತಲರ ಕೃತ್ಯಗಳು 10:18 (KANIRV)
Square Portrait Landscape 4K UHD
ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.

ಅಪೊಸ್ತಲರ ಕೃತ್ಯಗಳು 10:19 (KANIRV)
Square Portrait Landscape 4K UHD
ಪೇತ್ರನು ಆ ದರ್ಶನದ ಕುರಿತಾಗಿ ಯೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ; “ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;

ಅಪೊಸ್ತಲರ ಕೃತ್ಯಗಳು 10:20 (KANIRV)
Square Portrait Landscape 4K UHD
ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು; ನಾನೇ ಅವರನ್ನು ಕಳುಹಿಸಿದ್ದೇನೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 10:21 (KANIRV)
Square Portrait Landscape 4K UHD
ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು,

ಅಪೊಸ್ತಲರ ಕೃತ್ಯಗಳು 10:22 (KANIRV)
Square Portrait Landscape 4K UHD
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 10:23 (KANIRV)
Square Portrait Landscape 4K UHD
ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.

ಅಪೊಸ್ತಲರ ಕೃತ್ಯಗಳು 10:24 (KANIRV)
Square Portrait Landscape 4K UHD
ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 10:25 (KANIRV)
Square Portrait Landscape 4K UHD
ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.

ಅಪೊಸ್ತಲರ ಕೃತ್ಯಗಳು 10:26 (KANIRV)
Square Portrait Landscape 4K UHD
ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ,

ಅಪೊಸ್ತಲರ ಕೃತ್ಯಗಳು 10:27 (KANIRV)
Square Portrait Landscape 4K UHD
ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು.

ಅಪೊಸ್ತಲರ ಕೃತ್ಯಗಳು 10:28 (KANIRV)
Square Portrait Landscape 4K UHD
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.

ಅಪೊಸ್ತಲರ ಕೃತ್ಯಗಳು 10:29 (KANIRV)
Square Portrait Landscape 4K UHD
ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 10:30 (KANIRV)
Square Portrait Landscape 4K UHD
ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;

ಅಪೊಸ್ತಲರ ಕೃತ್ಯಗಳು 10:31 (KANIRV)
Square Portrait Landscape 4K UHD
ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.

ಅಪೊಸ್ತಲರ ಕೃತ್ಯಗಳು 10:32 (KANIRV)
Square Portrait Landscape 4K UHD
ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.

ಅಪೊಸ್ತಲರ ಕೃತ್ಯಗಳು 10:33 (KANIRV)
Square Portrait Landscape 4K UHD
ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

ಅಪೊಸ್ತಲರ ಕೃತ್ಯಗಳು 10:34 (KANIRV)
Square Portrait Landscape 4K UHD
ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,

ಅಪೊಸ್ತಲರ ಕೃತ್ಯಗಳು 10:35 (KANIRV)
Square Portrait Landscape 4K UHD
ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಅಪೊಸ್ತಲರ ಕೃತ್ಯಗಳು 10:36 (KANIRV)
Square Portrait Landscape 4K UHD
ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ಅಪೊಸ್ತಲರ ಕೃತ್ಯಗಳು 10:37 (KANIRV)
Square Portrait Landscape 4K UHD
ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.

ಅಪೊಸ್ತಲರ ಕೃತ್ಯಗಳು 10:38 (KANIRV)
Square Portrait Landscape 4K UHD
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಅಪೊಸ್ತಲರ ಕೃತ್ಯಗಳು 10:39 (KANIRV)
Square Portrait Landscape 4K UHD
ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ಅಪೊಸ್ತಲರ ಕೃತ್ಯಗಳು 10:40 (KANIRV)
Square Portrait Landscape 4K UHD
ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.

ಅಪೊಸ್ತಲರ ಕೃತ್ಯಗಳು 10:41 (KANIRV)
Square Portrait Landscape 4K UHD
ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.

ಅಪೊಸ್ತಲರ ಕೃತ್ಯಗಳು 10:42 (KANIRV)
Square Portrait Landscape 4K UHD
ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಅಪೊಸ್ತಲರ ಕೃತ್ಯಗಳು 10:43 (KANIRV)
Square Portrait Landscape 4K UHD
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

ಅಪೊಸ್ತಲರ ಕೃತ್ಯಗಳು 10:44 (KANIRV)
Square Portrait Landscape 4K UHD
ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು.

ಅಪೊಸ್ತಲರ ಕೃತ್ಯಗಳು 10:45 (KANIRV)
Square Portrait Landscape 4K UHD
ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ,

ಅಪೊಸ್ತಲರ ಕೃತ್ಯಗಳು 10:46 (KANIRV)
Square Portrait Landscape 4K UHD
ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.

ಅಪೊಸ್ತಲರ ಕೃತ್ಯಗಳು 10:47 (KANIRV)
Square Portrait Landscape 4K UHD
ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,

ಅಪೊಸ್ತಲರ ಕೃತ್ಯಗಳು 10:48 (KANIRV)
Square Portrait Landscape 4K UHD
ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು.

Available Bible Translations

American Standard Version (ASV)
Acts 10 (ASV) »
King James Version (KJV)
Acts 10 (KJV) »
GOD’S WORD® (GW)
Acts 10 (GW) »
Berean Bible (BSB)
Acts 10 (BSB) »
World English Bible (WEB)
Acts 10 (WEB) »
French Bible (LSG)
Actes 10 (LSG) »
Portuguese Bible (BSL)
Atos 10 (BSL) »
Spanish Bible (RVA)
Hechos 10 (RVA) »
Italian Bible (RIV)
Atti 10 (RIV) »
Chinese Simplified (CUVS)
使 徒 行 传 10 (CUVS) »
Chinese Traditional (CUVT)
使 徒 行 傳 10 (CUVT) »
Russian Bible (RUSV)
Деяния 10 (RUSV) »
Ukrainian Bible (UKR)
Дії 10 (UKR) »
Hungarian Bible (KAR)
Apostolok 10 (KAR) »
Bulgarian Bible (BULG)
Деяния 10 (BULG) »
Japanese Bible (JPN)
使徒行伝 10 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List