ಅಪೊಸ್ತಲರ ಕೃತ್ಯಗಳು Chapter 15 KANIRV Bible Verse Images

ಅಪೊಸ್ತಲರ ಕೃತ್ಯಗಳು 15 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 15 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 15:1 (KANIRV)
Square Portrait Landscape 4K UHD
ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಅಪೊಸ್ತಲರ ಕೃತ್ಯಗಳು 15:2 (KANIRV)
Square Portrait Landscape 4K UHD
ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಅಪೊಸ್ತಲರ ಕೃತ್ಯಗಳು 15:3 (KANIRV)
Square Portrait Landscape 4K UHD
ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಅಪೊಸ್ತಲರ ಕೃತ್ಯಗಳು 15:4 (KANIRV)
Square Portrait Landscape 4K UHD
ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

ಅಪೊಸ್ತಲರ ಕೃತ್ಯಗಳು 15:5 (KANIRV)
Square Portrait Landscape 4K UHD
ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.

ಅಪೊಸ್ತಲರ ಕೃತ್ಯಗಳು 15:6 (KANIRV)
Square Portrait Landscape 4K UHD
ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;

ಅಪೊಸ್ತಲರ ಕೃತ್ಯಗಳು 15:7 (KANIRV)
Square Portrait Landscape 4K UHD
“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

ಅಪೊಸ್ತಲರ ಕೃತ್ಯಗಳು 15:8 (KANIRV)
Square Portrait Landscape 4K UHD
ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.

ಅಪೊಸ್ತಲರ ಕೃತ್ಯಗಳು 15:9 (KANIRV)
Square Portrait Landscape 4K UHD
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅಪೊಸ್ತಲರ ಕೃತ್ಯಗಳು 15:10 (KANIRV)
Square Portrait Landscape 4K UHD
ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?

ಅಪೊಸ್ತಲರ ಕೃತ್ಯಗಳು 15:11 (KANIRV)
Square Portrait Landscape 4K UHD
ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 15:12 (KANIRV)
Square Portrait Landscape 4K UHD
ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.

ಅಪೊಸ್ತಲರ ಕೃತ್ಯಗಳು 15:13 (KANIRV)
Square Portrait Landscape 4K UHD
ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ;

ಅಪೊಸ್ತಲರ ಕೃತ್ಯಗಳು 15:14 (KANIRV)
Square Portrait Landscape 4K UHD
“ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಪೊಸ್ತಲರ ಕೃತ್ಯಗಳು 15:15 (KANIRV)
Square Portrait Landscape 4K UHD
ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗೆಂದರೆ;

ಅಪೊಸ್ತಲರ ಕೃತ್ಯಗಳು 15:16 (KANIRV)
Square Portrait Landscape 4K UHD
“‘ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಪುನಃ ಕಟ್ಟುವೆನು. ಪಾಳು ಬಿದ್ದದ್ದನ್ನು ಜೀರ್ಣೋದ್ಧಾರಮಾಡಿ ಸುಭದ್ರವಾಗಿ ನಿಲ್ಲಿಸುವೆನು.

ಅಪೊಸ್ತಲರ ಕೃತ್ಯಗಳು 15:17 (KANIRV)
Square Portrait Landscape 4K UHD
ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು

ಅಪೊಸ್ತಲರ ಕೃತ್ಯಗಳು 15:18 (KANIRV)
Square Portrait Landscape 4K UHD
ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.

ಅಪೊಸ್ತಲರ ಕೃತ್ಯಗಳು 15:19 (KANIRV)
Square Portrait Landscape 4K UHD
“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಪೊಸ್ತಲರ ಕೃತ್ಯಗಳು 15:20 (KANIRV)
Square Portrait Landscape 4K UHD
ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಅಪೊಸ್ತಲರ ಕೃತ್ಯಗಳು 15:21 (KANIRV)
Square Portrait Landscape 4K UHD
ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 15:22 (KANIRV)
Square Portrait Landscape 4K UHD
ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಅಪೊಸ್ತಲರ ಕೃತ್ಯಗಳು 15:23 (KANIRV)
Square Portrait Landscape 4K UHD
ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;

ಅಪೊಸ್ತಲರ ಕೃತ್ಯಗಳು 15:24 (KANIRV)
Square Portrait Landscape 4K UHD
“ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ಅಪೊಸ್ತಲರ ಕೃತ್ಯಗಳು 15:25 (KANIRV)
Square Portrait Landscape 4K UHD
ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,

ಅಪೊಸ್ತಲರ ಕೃತ್ಯಗಳು 15:26 (KANIRV)
Square Portrait Landscape 4K UHD
ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿ ಕೊಡುವುದು ಯುಕ್ತವೆಂದು ನಾವೆಲ್ಲರೂ ಒಮ್ಮನಸ್ಸಿನಿಂದ ತೀರ್ಮಾನಿಸಿದೆವು.

ಅಪೊಸ್ತಲರ ಕೃತ್ಯಗಳು 15:27 (KANIRV)
Square Portrait Landscape 4K UHD
ಆದುದರಿಂದ ಯೂದನನ್ನೂ, ಸೀಲನನ್ನೂ ಕಳುಹಿಸಿಕೊಡುತ್ತಿದ್ದೇವೆ. ಅವರು ನಾವು ಬರೆದಿರುವ ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.

ಅಪೊಸ್ತಲರ ಕೃತ್ಯಗಳು 15:28 (KANIRV)
Square Portrait Landscape 4K UHD
ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.

ಅಪೊಸ್ತಲರ ಕೃತ್ಯಗಳು 15:29 (KANIRV)
Square Portrait Landscape 4K UHD
ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”

ಅಪೊಸ್ತಲರ ಕೃತ್ಯಗಳು 15:30 (KANIRV)
Square Portrait Landscape 4K UHD
ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.

ಅಪೊಸ್ತಲರ ಕೃತ್ಯಗಳು 15:31 (KANIRV)
Square Portrait Landscape 4K UHD
ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.

ಅಪೊಸ್ತಲರ ಕೃತ್ಯಗಳು 15:32 (KANIRV)
Square Portrait Landscape 4K UHD
ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

ಅಪೊಸ್ತಲರ ಕೃತ್ಯಗಳು 15:33 (KANIRV)
Square Portrait Landscape 4K UHD
ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.

ಅಪೊಸ್ತಲರ ಕೃತ್ಯಗಳು 15:34 (KANIRV)
Square Portrait Landscape 4K UHD
ಆದರೆ ಸೀಲನಿಗೆ ಅಲ್ಲೇ ಇರುವುದು ಒಳ್ಳೆಯದೆಂದು ತೋಚಿತು.

ಅಪೊಸ್ತಲರ ಕೃತ್ಯಗಳು 15:35 (KANIRV)
Square Portrait Landscape 4K UHD
ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಪೊಸ್ತಲರ ಕೃತ್ಯಗಳು 15:36 (KANIRV)
Square Portrait Landscape 4K UHD
ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 15:37 (KANIRV)
Square Portrait Landscape 4K UHD
ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು

ಅಪೊಸ್ತಲರ ಕೃತ್ಯಗಳು 15:38 (KANIRV)
Square Portrait Landscape 4K UHD
ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

ಅಪೊಸ್ತಲರ ಕೃತ್ಯಗಳು 15:39 (KANIRV)
Square Portrait Landscape 4K UHD
ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

ಅಪೊಸ್ತಲರ ಕೃತ್ಯಗಳು 15:40 (KANIRV)
Square Portrait Landscape 4K UHD
ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ

ಅಪೊಸ್ತಲರ ಕೃತ್ಯಗಳು 15:41 (KANIRV)
Square Portrait Landscape 4K UHD
ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

Available Bible Translations

American Standard Version (ASV)
Acts 15 (ASV) »
King James Version (KJV)
Acts 15 (KJV) »
GOD’S WORD® (GW)
Acts 15 (GW) »
Berean Bible (BSB)
Acts 15 (BSB) »
World English Bible (WEB)
Acts 15 (WEB) »
French Bible (LSG)
Actes 15 (LSG) »
Portuguese Bible (BSL)
Atos 15 (BSL) »
Spanish Bible (RVA)
Hechos 15 (RVA) »
Italian Bible (RIV)
Atti 15 (RIV) »
Chinese Simplified (CUVS)
使 徒 行 传 15 (CUVS) »
Chinese Traditional (CUVT)
使 徒 行 傳 15 (CUVT) »
Russian Bible (RUSV)
Деяния 15 (RUSV) »
Ukrainian Bible (UKR)
Дії 15 (UKR) »
Hungarian Bible (KAR)
Apostolok 15 (KAR) »
Bulgarian Bible (BULG)
Деяния 15 (BULG) »
Japanese Bible (JPN)
使徒行伝 15 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List