ಅಪೊಸ್ತಲರ ಕೃತ್ಯಗಳು Chapter 23 KANIRV Bible Verse Images

ಅಪೊಸ್ತಲರ ಕೃತ್ಯಗಳು 23 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 23 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 23:1 (KANIRV)
Square Portrait Landscape 4K UHD
ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.

ಅಪೊಸ್ತಲರ ಕೃತ್ಯಗಳು 23:2 (KANIRV)
Square Portrait Landscape 4K UHD
ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;

ಅಪೊಸ್ತಲರ ಕೃತ್ಯಗಳು 23:3 (KANIRV)
Square Portrait Landscape 4K UHD
“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.

ಅಪೊಸ್ತಲರ ಕೃತ್ಯಗಳು 23:4 (KANIRV)
Square Portrait Landscape 4K UHD
ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು,

ಅಪೊಸ್ತಲರ ಕೃತ್ಯಗಳು 23:5 (KANIRV)
Square Portrait Landscape 4K UHD
ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.

ಅಪೊಸ್ತಲರ ಕೃತ್ಯಗಳು 23:6 (KANIRV)
Square Portrait Landscape 4K UHD
ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.

ಅಪೊಸ್ತಲರ ಕೃತ್ಯಗಳು 23:7 (KANIRV)
Square Portrait Landscape 4K UHD
ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.

ಅಪೊಸ್ತಲರ ಕೃತ್ಯಗಳು 23:8 (KANIRV)
Square Portrait Landscape 4K UHD
ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.

ಅಪೊಸ್ತಲರ ಕೃತ್ಯಗಳು 23:9 (KANIRV)
Square Portrait Landscape 4K UHD
ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.

ಅಪೊಸ್ತಲರ ಕೃತ್ಯಗಳು 23:10 (KANIRV)
Square Portrait Landscape 4K UHD
ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.

ಅಪೊಸ್ತಲರ ಕೃತ್ಯಗಳು 23:11 (KANIRV)
Square Portrait Landscape 4K UHD
ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.

ಅಪೊಸ್ತಲರ ಕೃತ್ಯಗಳು 23:12 (KANIRV)
Square Portrait Landscape 4K UHD
ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.

ಅಪೊಸ್ತಲರ ಕೃತ್ಯಗಳು 23:13 (KANIRV)
Square Portrait Landscape 4K UHD
ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.

ಅಪೊಸ್ತಲರ ಕೃತ್ಯಗಳು 23:14 (KANIRV)
Square Portrait Landscape 4K UHD
ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.

ಅಪೊಸ್ತಲರ ಕೃತ್ಯಗಳು 23:15 (KANIRV)
Square Portrait Landscape 4K UHD
ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.

ಅಪೊಸ್ತಲರ ಕೃತ್ಯಗಳು 23:16 (KANIRV)
Square Portrait Landscape 4K UHD
ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.

ಅಪೊಸ್ತಲರ ಕೃತ್ಯಗಳು 23:17 (KANIRV)
Square Portrait Landscape 4K UHD
ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 23:18 (KANIRV)
Square Portrait Landscape 4K UHD
ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,

ಅಪೊಸ್ತಲರ ಕೃತ್ಯಗಳು 23:19 (KANIRV)
Square Portrait Landscape 4K UHD
ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 23:20 (KANIRV)
Square Portrait Landscape 4K UHD
ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಪೊಸ್ತಲರ ಕೃತ್ಯಗಳು 23:21 (KANIRV)
Square Portrait Landscape 4K UHD
ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.

ಅಪೊಸ್ತಲರ ಕೃತ್ಯಗಳು 23:22 (KANIRV)
Square Portrait Landscape 4K UHD
ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.

ಅಪೊಸ್ತಲರ ಕೃತ್ಯಗಳು 23:23 (KANIRV)
Square Portrait Landscape 4K UHD
ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

ಅಪೊಸ್ತಲರ ಕೃತ್ಯಗಳು 23:24 (KANIRV)
Square Portrait Landscape 4K UHD
ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಅಪೊಸ್ತಲರ ಕೃತ್ಯಗಳು 23:25 (KANIRV)
Square Portrait Landscape 4K UHD
ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;

ಅಪೊಸ್ತಲರ ಕೃತ್ಯಗಳು 23:26 (KANIRV)
Square Portrait Landscape 4K UHD
“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.

ಅಪೊಸ್ತಲರ ಕೃತ್ಯಗಳು 23:27 (KANIRV)
Square Portrait Landscape 4K UHD
ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.

ಅಪೊಸ್ತಲರ ಕೃತ್ಯಗಳು 23:28 (KANIRV)
Square Portrait Landscape 4K UHD
ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

ಅಪೊಸ್ತಲರ ಕೃತ್ಯಗಳು 23:29 (KANIRV)
Square Portrait Landscape 4K UHD
ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.

ಅಪೊಸ್ತಲರ ಕೃತ್ಯಗಳು 23:30 (KANIRV)
Square Portrait Landscape 4K UHD
ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.

ಅಪೊಸ್ತಲರ ಕೃತ್ಯಗಳು 23:31 (KANIRV)
Square Portrait Landscape 4K UHD
ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.

ಅಪೊಸ್ತಲರ ಕೃತ್ಯಗಳು 23:32 (KANIRV)
Square Portrait Landscape 4K UHD
ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.

ಅಪೊಸ್ತಲರ ಕೃತ್ಯಗಳು 23:33 (KANIRV)
Square Portrait Landscape 4K UHD
ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

ಅಪೊಸ್ತಲರ ಕೃತ್ಯಗಳು 23:34 (KANIRV)
Square Portrait Landscape 4K UHD
ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;

ಅಪೊಸ್ತಲರ ಕೃತ್ಯಗಳು 23:35 (KANIRV)
Square Portrait Landscape 4K UHD
“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

Available Bible Translations

American Standard Version (ASV)
Acts 23 (ASV) »
King James Version (KJV)
Acts 23 (KJV) »
GOD’S WORD® (GW)
Acts 23 (GW) »
Berean Bible (BSB)
Acts 23 (BSB) »
World English Bible (WEB)
Acts 23 (WEB) »
French Bible (LSG)
Actes 23 (LSG) »
Portuguese Bible (BSL)
Atos 23 (BSL) »
Spanish Bible (RVA)
Hechos 23 (RVA) »
Italian Bible (RIV)
Atti 23 (RIV) »
Chinese Simplified (CUVS)
使 徒 行 传 23 (CUVS) »
Chinese Traditional (CUVT)
使 徒 行 傳 23 (CUVT) »
Russian Bible (RUSV)
Деяния 23 (RUSV) »
Ukrainian Bible (UKR)
Дії 23 (UKR) »
Hungarian Bible (KAR)
Apostolok 23 (KAR) »
Bulgarian Bible (BULG)
Деяния 23 (BULG) »
Japanese Bible (JPN)
使徒行伝 23 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List