ಅಪೊಸ್ತಲರ ಕೃತ್ಯಗಳು Chapter 24 KANIRV Bible Verse Images

ಅಪೊಸ್ತಲರ ಕೃತ್ಯಗಳು 24 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 24 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 24:1 (KANIRV)
Square Portrait Landscape 4K UHD
ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.

ಅಪೊಸ್ತಲರ ಕೃತ್ಯಗಳು 24:2 (KANIRV)
Square Portrait Landscape 4K UHD
ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ

ಅಪೊಸ್ತಲರ ಕೃತ್ಯಗಳು 24:3 (KANIRV)
Square Portrait Landscape 4K UHD
ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.

ಅಪೊಸ್ತಲರ ಕೃತ್ಯಗಳು 24:4 (KANIRV)
Square Portrait Landscape 4K UHD
ಆದರೆ ನಿನ್ನನ್ನು ಹೆಚ್ಚಾಗಿ ಬೇಸರಗೊಳಿಸುವುದಕ್ಕೆ ಮನಸ್ಸಿಲ್ಲದೆ ನಾವು ಸಂಕ್ಷಿಪ್ತವಾಗಿ ಹೇಳುವ ಮಾತುಗಳನ್ನು ದಯೆಯಿಂದ ಕೇಳಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತೇನೆ.

ಅಪೊಸ್ತಲರ ಕೃತ್ಯಗಳು 24:5 (KANIRV)
Square Portrait Landscape 4K UHD
“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’

ಅಪೊಸ್ತಲರ ಕೃತ್ಯಗಳು 24:6 (KANIRV)
Square Portrait Landscape 4K UHD
ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.

ಅಪೊಸ್ತಲರ ಕೃತ್ಯಗಳು 24:7 (KANIRV)
Square Portrait Landscape 4K UHD
(ಆದರೆ ಸಹಸ್ರಾಧಿಪತಿಯಾದ ಲೂಸ್ಯನು ಮಧ್ಯೆ ಬಂದು ಬಲವಂತಮಾಡಿ, ಅವನನ್ನು ನಮ್ಮ ಕೈಯಿಂದ ಬಿಡಿಸಿಕೊಂಡು ಹೋದನು.)

ಅಪೊಸ್ತಲರ ಕೃತ್ಯಗಳು 24:8 (KANIRV)
Square Portrait Landscape 4K UHD
ಇವನನ್ನು ನೀನೇ ವಿಚಾರಿಸಿದರೆ, ನಾವು ಇವನ ಮೇಲೆ ಹೊರಿಸುವ ಈ ತಪ್ಪುಗಳೆಲ್ಲಾ ನಿಜವೋ, ಸುಳ್ಳೋ ಎಂದು ಇವನಿಂದಲೇ ತಿಳಿದುಕೊಳ್ಳಬಹುದು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 24:9 (KANIRV)
Square Portrait Landscape 4K UHD
ಆಗ ಯೆಹೂದ್ಯರು ಈ ಸಂಗತಿಗಳು ನಿಜವಾಗಿವೆ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವವರೊಂದಿಗೆ ಸೇರಿಕೊಂಡರು.

ಅಪೊಸ್ತಲರ ಕೃತ್ಯಗಳು 24:10 (KANIRV)
Square Portrait Landscape 4K UHD
ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.

ಅಪೊಸ್ತಲರ ಕೃತ್ಯಗಳು 24:11 (KANIRV)
Square Portrait Landscape 4K UHD
ನಾನು ದೇವಾರಾಧನೆಮಾಡುವುದಕ್ಕೆ, ಯೆರೂಸಲೇಮಿಗೆ ಹೋಗಿ, ಹನ್ನೆರಡು ದಿನಗಳು ಮಾತ್ರವಾಗಿದೆಯೆಂದು ನೀನು ತಿಳಿದುಕೊಳ್ಳಬಹುದು.

ಅಪೊಸ್ತಲರ ಕೃತ್ಯಗಳು 24:12 (KANIRV)
Square Portrait Landscape 4K UHD
ಅಲ್ಲಿ ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ನಾನು ಯಾರ ಸಂಗಡಲಾದರೂ ವಾದಿಸುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಲಿಲ್ಲ.

ಅಪೊಸ್ತಲರ ಕೃತ್ಯಗಳು 24:13 (KANIRV)
Square Portrait Landscape 4K UHD
ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.

ಅಪೊಸ್ತಲರ ಕೃತ್ಯಗಳು 24:14 (KANIRV)
Square Portrait Landscape 4K UHD
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.

ಅಪೊಸ್ತಲರ ಕೃತ್ಯಗಳು 24:15 (KANIRV)
Square Portrait Landscape 4K UHD
ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಪೊಸ್ತಲರ ಕೃತ್ಯಗಳು 24:16 (KANIRV)
Square Portrait Landscape 4K UHD
ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.

ಅಪೊಸ್ತಲರ ಕೃತ್ಯಗಳು 24:17 (KANIRV)
Square Portrait Landscape 4K UHD
“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.

ಅಪೊಸ್ತಲರ ಕೃತ್ಯಗಳು 24:18 (KANIRV)
Square Portrait Landscape 4K UHD
ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.

ಅಪೊಸ್ತಲರ ಕೃತ್ಯಗಳು 24:19 (KANIRV)
Square Portrait Landscape 4K UHD
ನನ್ನ ವಿರುದ್ಧ ಅವರಿಗೆ ಏನಾದರೂ ಇದ್ದರೆ, ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.

ಅಪೊಸ್ತಲರ ಕೃತ್ಯಗಳು 24:20 (KANIRV)
Square Portrait Landscape 4K UHD
ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.

ಅಪೊಸ್ತಲರ ಕೃತ್ಯಗಳು 24:21 (KANIRV)
Square Portrait Landscape 4K UHD
ನಾನು ಇವರ ನಡುವೆ ನಿಂತು; ‘ಪುನರುತ್ಥಾನದ ವಿಷಯದಲ್ಲಿ, ಈಹೊತ್ತು ನಿಮ್ಮಿಂದ ನನಗೆ ವಿಚಾರಣೆಯಾಗುತ್ತದೆ’ ಎಂದು ಕೂಗಿ ಹೇಳಿದರ ಬಗ್ಗೆ ಹೇಳಬಹುದೇ ಹೊರತು ಬೇರೆ ಏನನ್ನೂ ಹೇಳಲಾರರು” ಅಂದನು.

ಅಪೊಸ್ತಲರ ಕೃತ್ಯಗಳು 24:22 (KANIRV)
Square Portrait Landscape 4K UHD
ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.

ಅಪೊಸ್ತಲರ ಕೃತ್ಯಗಳು 24:23 (KANIRV)
Square Portrait Landscape 4K UHD
ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

ಅಪೊಸ್ತಲರ ಕೃತ್ಯಗಳು 24:24 (KANIRV)
Square Portrait Landscape 4K UHD
ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.

ಅಪೊಸ್ತಲರ ಕೃತ್ಯಗಳು 24:25 (KANIRV)
Square Portrait Landscape 4K UHD
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 24:26 (KANIRV)
Square Portrait Landscape 4K UHD
ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 24:27 (KANIRV)
Square Portrait Landscape 4K UHD
ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.

Available Bible Translations

American Standard Version (ASV)
Acts 24 (ASV) »
King James Version (KJV)
Acts 24 (KJV) »
GOD’S WORD® (GW)
Acts 24 (GW) »
Berean Bible (BSB)
Acts 24 (BSB) »
World English Bible (WEB)
Acts 24 (WEB) »
French Bible (LSG)
Actes 24 (LSG) »
Portuguese Bible (BSL)
Atos 24 (BSL) »
Spanish Bible (RVA)
Hechos 24 (RVA) »
Italian Bible (RIV)
Atti 24 (RIV) »
Chinese Simplified (CUVS)
使 徒 行 传 24 (CUVS) »
Chinese Traditional (CUVT)
使 徒 行 傳 24 (CUVT) »
Russian Bible (RUSV)
Деяния 24 (RUSV) »
Ukrainian Bible (UKR)
Дії 24 (UKR) »
Hungarian Bible (KAR)
Apostolok 24 (KAR) »
Bulgarian Bible (BULG)
Деяния 24 (BULG) »
Japanese Bible (JPN)
使徒行伝 24 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List