ಅಪೊಸ್ತಲರ ಕೃತ್ಯಗಳು Chapter 25 KANIRV Bible Verse Images

ಅಪೊಸ್ತಲರ ಕೃತ್ಯಗಳು 25 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 25 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 25:1 (KANIRV)
Square Portrait Landscape 4K UHD
ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.

ಅಪೊಸ್ತಲರ ಕೃತ್ಯಗಳು 25:2 (KANIRV)
Square Portrait Landscape 4K UHD
ಅಲ್ಲಿ ಮುಖ್ಯಯಾಜಕನೂ, ಯೆಹೂದ್ಯರಲ್ಲಿ ಪ್ರಮುಖರೂ, ಅವನಿಗೆ ಪೌಲನ ಮೇಲೆ ದೂರು ಹೇಳಿ,

ಅಪೊಸ್ತಲರ ಕೃತ್ಯಗಳು 25:3 (KANIRV)
Square Portrait Landscape 4K UHD
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.

ಅಪೊಸ್ತಲರ ಕೃತ್ಯಗಳು 25:4 (KANIRV)
Square Portrait Landscape 4K UHD
ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.

ಅಪೊಸ್ತಲರ ಕೃತ್ಯಗಳು 25:5 (KANIRV)
Square Portrait Landscape 4K UHD
ಆದಕಾರಣ ನಿಮ್ಮಲ್ಲಿ ಪ್ರಮುಖರು, ನನ್ನೊಂದಿಗೆ ಬಂದು ಆ ಮನುಷ್ಯನಲ್ಲಿ ಅಪವಾದ ಏನಾದರೂ ಇದ್ದರೆ ಅವನ ಮೇಲೆ ತಪ್ಪುಹೊರಿಸಲಿ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 25:6 (KANIRV)
Square Portrait Landscape 4K UHD
ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.

ಅಪೊಸ್ತಲರ ಕೃತ್ಯಗಳು 25:7 (KANIRV)
Square Portrait Landscape 4K UHD
ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,

ಅಪೊಸ್ತಲರ ಕೃತ್ಯಗಳು 25:8 (KANIRV)
Square Portrait Landscape 4K UHD
ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು.

ಅಪೊಸ್ತಲರ ಕೃತ್ಯಗಳು 25:9 (KANIRV)
Square Portrait Landscape 4K UHD
ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಅಪೊಸ್ತಲರ ಕೃತ್ಯಗಳು 25:10 (KANIRV)
Square Portrait Landscape 4K UHD
“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.

ಅಪೊಸ್ತಲರ ಕೃತ್ಯಗಳು 25:11 (KANIRV)
Square Portrait Landscape 4K UHD
ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

ಅಪೊಸ್ತಲರ ಕೃತ್ಯಗಳು 25:12 (KANIRV)
Square Portrait Landscape 4K UHD
ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 25:13 (KANIRV)
Square Portrait Landscape 4K UHD
ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.

ಅಪೊಸ್ತಲರ ಕೃತ್ಯಗಳು 25:14 (KANIRV)
Square Portrait Landscape 4K UHD
ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.

ಅಪೊಸ್ತಲರ ಕೃತ್ಯಗಳು 25:15 (KANIRV)
Square Portrait Landscape 4K UHD
ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು.

ಅಪೊಸ್ತಲರ ಕೃತ್ಯಗಳು 25:16 (KANIRV)
Square Portrait Landscape 4K UHD
“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.

ಅಪೊಸ್ತಲರ ಕೃತ್ಯಗಳು 25:17 (KANIRV)
Square Portrait Landscape 4K UHD
ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.

ಅಪೊಸ್ತಲರ ಕೃತ್ಯಗಳು 25:18 (KANIRV)
Square Portrait Landscape 4K UHD
ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ,

ಅಪೊಸ್ತಲರ ಕೃತ್ಯಗಳು 25:19 (KANIRV)
Square Portrait Landscape 4K UHD
ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.

ಅಪೊಸ್ತಲರ ಕೃತ್ಯಗಳು 25:20 (KANIRV)
Square Portrait Landscape 4K UHD
ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೆಂಬುದು ನನಗೆ ತೋಚದೆ; ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವುದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಿದೆ.

ಅಪೊಸ್ತಲರ ಕೃತ್ಯಗಳು 25:21 (KANIRV)
Square Portrait Landscape 4K UHD
ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 25:22 (KANIRV)
Square Portrait Landscape 4K UHD
ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.

ಅಪೊಸ್ತಲರ ಕೃತ್ಯಗಳು 25:23 (KANIRV)
Square Portrait Landscape 4K UHD
ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.

ಅಪೊಸ್ತಲರ ಕೃತ್ಯಗಳು 25:24 (KANIRV)
Square Portrait Landscape 4K UHD
ಆಗ ಫೆಸ್ತನು; “ಅಗ್ರಿಪ್ಪರಾಜನೇ, ನಮ್ಮ ಸಂಗಡ ಕೂಡಿಬಂದಿರುವ ಎಲ್ಲಾ ಜನರೇ, ಈ ಮನುಷ್ಯನನ್ನು ನೋಡುತ್ತೀರಲ್ಲಾ, ಇವನ ವಿಷಯದಲ್ಲಿ ಯೆಹೂದ್ಯರೆಲ್ಲರೂ, ಇವನು ಇನ್ನು ಮೇಲೆ ಬದುಕಬಾರದೆಂದು ಕೂಗುತ್ತಾ ಯೆರೂಸಲೇಮಿನಲ್ಲಿಯೂ, ಇಲ್ಲಿಯೂ ನನ್ನನ್ನು ಬೇಡಿಕೊಂಡರು.

ಅಪೊಸ್ತಲರ ಕೃತ್ಯಗಳು 25:25 (KANIRV)
Square Portrait Landscape 4K UHD
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.

ಅಪೊಸ್ತಲರ ಕೃತ್ಯಗಳು 25:26 (KANIRV)
Square Portrait Landscape 4K UHD
ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.

ಅಪೊಸ್ತಲರ ಕೃತ್ಯಗಳು 25:27 (KANIRV)
Square Portrait Landscape 4K UHD
ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

Available Bible Translations

American Standard Version (ASV)
Acts 25 (ASV) »
King James Version (KJV)
Acts 25 (KJV) »
GOD’S WORD® (GW)
Acts 25 (GW) »
Berean Bible (BSB)
Acts 25 (BSB) »
World English Bible (WEB)
Acts 25 (WEB) »
French Bible (LSG)
Actes 25 (LSG) »
Portuguese Bible (BSL)
Atos 25 (BSL) »
Spanish Bible (RVA)
Hechos 25 (RVA) »
Italian Bible (RIV)
Atti 25 (RIV) »
Chinese Simplified (CUVS)
使 徒 行 传 25 (CUVS) »
Chinese Traditional (CUVT)
使 徒 行 傳 25 (CUVT) »
Russian Bible (RUSV)
Деяния 25 (RUSV) »
Ukrainian Bible (UKR)
Дії 25 (UKR) »
Hungarian Bible (KAR)
Apostolok 25 (KAR) »
Bulgarian Bible (BULG)
Деяния 25 (BULG) »
Japanese Bible (JPN)
使徒行伝 25 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List