ಅಪೊಸ್ತಲರ ಕೃತ್ಯಗಳು Chapter 27 KANIRV Bible Verse Images

ಅಪೊಸ್ತಲರ ಕೃತ್ಯಗಳು 27 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 27 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 27:1 (KANIRV)
Square Portrait Landscape 4K UHD
ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಪೊಸ್ತಲರ ಕೃತ್ಯಗಳು 27:2 (KANIRV)
Square Portrait Landscape 4K UHD
ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.

ಅಪೊಸ್ತಲರ ಕೃತ್ಯಗಳು 27:3 (KANIRV)
Square Portrait Landscape 4K UHD
ಮರುದಿನ ಸೀದೋನಿಗೆ ತಲುಪಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ, ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವುದಕ್ಕೆ ಅನುಮತಿಕೊಟ್ಟನು.

ಅಪೊಸ್ತಲರ ಕೃತ್ಯಗಳು 27:4 (KANIRV)
Square Portrait Landscape 4K UHD
ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,

ಅಪೊಸ್ತಲರ ಕೃತ್ಯಗಳು 27:5 (KANIRV)
Square Portrait Landscape 4K UHD
ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.

ಅಪೊಸ್ತಲರ ಕೃತ್ಯಗಳು 27:6 (KANIRV)
Square Portrait Landscape 4K UHD
ಅಲ್ಲಿ ಅಲೆಕ್ಸಾಂದ್ರಿಯದಿಂದ ಬಂದು ಇತಾಲ್ಯದೇಶಕ್ಕೆ ಹೋಗುತ್ತಿದ್ದ ಒಂದು ಹಡಗನ್ನು ಶತಾಧಿಪತಿಯು ಕಂಡು ನಮ್ಮನ್ನು ಅದರೊಳಗೆ ಹತ್ತಿಸಿದನು.

ಅಪೊಸ್ತಲರ ಕೃತ್ಯಗಳು 27:7 (KANIRV)
Square Portrait Landscape 4K UHD
ಅನೇಕ ದಿನಗಳ ಕಾಲ ನಿಧಾನವಾಗಿ ಸಾಗುತ್ತಾ ಎಷ್ಟೋ ಪ್ರಯಾಸದಿಂದ ಕ್ನೀದಕ್ಕೆ ಸಮೀಪವಾಗಿ ಬಂದಾಗ ಗಾಳಿಯು ನಮ್ಮನ್ನು ಅಲ್ಲಿಗೆ ಮುಟ್ಟಗೊಡಿಸದೆ ಇದ್ದುದರಿಂದ ಕ್ರೇತ ದ್ವೀಪದ ಮರೆಯಲ್ಲಿ ಸಾಗಿ ಸಲ್ಮೋನೆಗೆ ಸಮೀಪವಾಗಿ ಬಂದು,

ಅಪೊಸ್ತಲರ ಕೃತ್ಯಗಳು 27:8 (KANIRV)
Square Portrait Landscape 4K UHD
ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.

ಅಪೊಸ್ತಲರ ಕೃತ್ಯಗಳು 27:9 (KANIRV)
Square Portrait Landscape 4K UHD
ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;

ಅಪೊಸ್ತಲರ ಕೃತ್ಯಗಳು 27:10 (KANIRV)
Square Portrait Landscape 4K UHD
“ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.

ಅಪೊಸ್ತಲರ ಕೃತ್ಯಗಳು 27:11 (KANIRV)
Square Portrait Landscape 4K UHD
ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಅಪೊಸ್ತಲರ ಕೃತ್ಯಗಳು 27:12 (KANIRV)
Square Portrait Landscape 4K UHD
ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

ಅಪೊಸ್ತಲರ ಕೃತ್ಯಗಳು 27:13 (KANIRV)
Square Portrait Landscape 4K UHD
ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಪೊಸ್ತಲರ ಕೃತ್ಯಗಳು 27:14 (KANIRV)
Square Portrait Landscape 4K UHD
ಸ್ವಲ್ಪ ಹೊತ್ತಿನಮೇಲೆ ಆ ದ್ವೀಪದ ಮೇಲೆ ಈಶಾನ್ಯ ಮಾರುತ ಎಂಬ ಉರಕಲೋನ್ ಗಾಳಿಯು ಅಪ್ಪಳಿಸಿತು.

ಅಪೊಸ್ತಲರ ಕೃತ್ಯಗಳು 27:15 (KANIRV)
Square Portrait Landscape 4K UHD
ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.

ಅಪೊಸ್ತಲರ ಕೃತ್ಯಗಳು 27:16 (KANIRV)
Square Portrait Landscape 4K UHD
ಕ್ಲೌಡ ಎಂಬ ಒಂದು ಪುಟ್ಟ ದ್ವೀಪದ ಸಮೀಪಕ್ಕೆ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳುವುದು ಸಾಧ್ಯವಾಯಿತು.

ಅಪೊಸ್ತಲರ ಕೃತ್ಯಗಳು 27:17 (KANIRV)
Square Portrait Landscape 4K UHD
ಅದನ್ನು ಮೇಲಕ್ಕೆ ಎತ್ತಿದ ನಂತರ ಹಗ್ಗಗಳನ್ನು ತೆಗೆದುಕೊಂಡು ಹಡಗಿನ ಕೆಳಭಾಗವನ್ನು ಬಿಗಿದರು. ಆ ಮೇಲೆ ಸುರ್ತಿಸ್ ಎಂಬ ಮರಳುದಿಬ್ಬಕ್ಕೆ ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.

ಅಪೊಸ್ತಲರ ಕೃತ್ಯಗಳು 27:18 (KANIRV)
Square Portrait Landscape 4K UHD
ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.

ಅಪೊಸ್ತಲರ ಕೃತ್ಯಗಳು 27:19 (KANIRV)
Square Portrait Landscape 4K UHD
ಮೂರನೆಯ ದಿನದಲ್ಲಿ ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.

ಅಪೊಸ್ತಲರ ಕೃತ್ಯಗಳು 27:20 (KANIRV)
Square Portrait Landscape 4K UHD
ಅನೇಕ ದಿನಗಳ ತನಕ ಸೂರ್ಯನಾಗಲಿ, ನಕ್ಷತ್ರಗಳಾಗಲಿ ನಮಗೆ ಕಾಣಿಸದೆ, ದೊಡ್ಡ ಬಿರುಗಾಳಿ ಮಳೆ ನಮ್ಮ ಮೇಲೆ ಹೊಡೆದುದರಿಂದ ತಪ್ಪಿಸಿಕೊಂಡೇವೆಂಬ ಎಲ್ಲಾ ನಿರೀಕ್ಷೆಯು ವಿಫಲವಾಯಿತು.

ಅಪೊಸ್ತಲರ ಕೃತ್ಯಗಳು 27:21 (KANIRV)
Square Portrait Landscape 4K UHD
ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

ಅಪೊಸ್ತಲರ ಕೃತ್ಯಗಳು 27:22 (KANIRV)
Square Portrait Landscape 4K UHD
ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.

ಅಪೊಸ್ತಲರ ಕೃತ್ಯಗಳು 27:23 (KANIRV)
Square Portrait Landscape 4K UHD
ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು;

ಅಪೊಸ್ತಲರ ಕೃತ್ಯಗಳು 27:24 (KANIRV)
Square Portrait Landscape 4K UHD
‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ಅಪೊಸ್ತಲರ ಕೃತ್ಯಗಳು 27:25 (KANIRV)
Square Portrait Landscape 4K UHD
ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.

ಅಪೊಸ್ತಲರ ಕೃತ್ಯಗಳು 27:26 (KANIRV)
Square Portrait Landscape 4K UHD
ಆದರೆ, ನಾವು ಯಾವುದೋ ಒಂದು ದ್ವೀಪದ ದಡವನ್ನು ತಾಕಬೇಕಾಗಿದೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 27:27 (KANIRV)
Square Portrait Landscape 4K UHD
ಹದಿನಾಲ್ಕನೆಯ ರಾತ್ರಿಯಲ್ಲಿ ನಾವು ಆದ್ರಿಯ ಸಮುದ್ರದಲ್ಲಿ ಅತ್ತ ಇತ್ತ ಬಡಿಸಿಕೊಂಡು ಹೋಗುತ್ತಿರುವಾಗ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶದ ಹತ್ತಿರ ಬಂದೆವೆಂದು ನೆನಸಿ,

ಅಪೊಸ್ತಲರ ಕೃತ್ಯಗಳು 27:28 (KANIRV)
Square Portrait Landscape 4K UHD
ಅಳತೆ ಮಾಪನವನ್ನು ಇಳಿಸಿ ಇಪ್ಪತ್ತು ಮಾರುದ್ದವೆಂದು ಕಂಡರು. ಸ್ವಲ್ಪ ಹೊತ್ತಿನ ಮೇಲೆ ಅವರು ತಿರುಗಿ ಮಾಪನದ ಗುಂಡನ್ನು ಇಳಿಸಿ ನೋಡಲಾಗಿ ಹದಿನೈದು ಮಾರುದ್ದವೆಂದು ಕಂಡರು.

ಅಪೊಸ್ತಲರ ಕೃತ್ಯಗಳು 27:29 (KANIRV)
Square Portrait Landscape 4K UHD
ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.

ಅಪೊಸ್ತಲರ ಕೃತ್ಯಗಳು 27:30 (KANIRV)
Square Portrait Landscape 4K UHD
ಆದರೆ, ನಾವಿಕರು ಮುಂಭಾಗದಲ್ಲಿ ಲಂಗರುಗಳನ್ನು ಹಾಕಬೇಕೆಂಬ ಸುಳ್ಳುಕಾರಣ ಕೊಟ್ಟು ದೋಣಿಯನ್ನು ಸಮುದ್ರದಲ್ಲಿ ಇಳಿಸಿ ಹಡಗನ್ನು ಬಿಟ್ಟು ತಪ್ಪಿಸಿಕೊಂಡು ಹೋಗುವುದಕ್ಕೆ ಪ್ರಯತ್ನಿಸುತ್ತಿರುವಾಗ,

ಅಪೊಸ್ತಲರ ಕೃತ್ಯಗಳು 27:31 (KANIRV)
Square Portrait Landscape 4K UHD
ಪೌಲನು ಶತಾಧಿಪತಿಗೂ, ಸಿಪಾಯಿಗಳಿಗೂ; “ಇವರು ಹಡಗಿನಲ್ಲಿ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯುವುದಿಲ್ಲವೆಂದು” ಹೇಳಿದನು.

ಅಪೊಸ್ತಲರ ಕೃತ್ಯಗಳು 27:32 (KANIRV)
Square Portrait Landscape 4K UHD
ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.

ಅಪೊಸ್ತಲರ ಕೃತ್ಯಗಳು 27:33 (KANIRV)
Square Portrait Landscape 4K UHD
ಬೆಳಗಾಗುತ್ತಿರುವಷ್ಟರಲ್ಲಿ ಪೌಲನು ಏನಾದರೂ ಆಹಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರನ್ನು ಬೇಡಿಕೊಳ್ಳುತ್ತಾ; “ಇಂದಿಗೆ ನೀವು ಹದಿನಾಲ್ಕು ದಿನದಿಂದ ಕಾದುಕೊಂಡು ಆಹಾರವನ್ನು ತೆಗೆದುಕೊಳ್ಳದೆ, ಹಸಿದುಕೊಂಡು ಇದ್ದೀರಿ.

ಅಪೊಸ್ತಲರ ಕೃತ್ಯಗಳು 27:34 (KANIRV)
Square Portrait Landscape 4K UHD
ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,

ಅಪೊಸ್ತಲರ ಕೃತ್ಯಗಳು 27:35 (KANIRV)
Square Portrait Landscape 4K UHD
ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.

ಅಪೊಸ್ತಲರ ಕೃತ್ಯಗಳು 27:36 (KANIRV)
Square Portrait Landscape 4K UHD
ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.

ಅಪೊಸ್ತಲರ ಕೃತ್ಯಗಳು 27:37 (KANIRV)
Square Portrait Landscape 4K UHD
ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.

ಅಪೊಸ್ತಲರ ಕೃತ್ಯಗಳು 27:38 (KANIRV)
Square Portrait Landscape 4K UHD
ಸಾಕಾದಷ್ಟು ತಿಂದ ಮೇಲೆ, ಮಿಕ್ಕ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ, ಹಡಗನ್ನು ಹಗುರ ಮಾಡಿದರು.

ಅಪೊಸ್ತಲರ ಕೃತ್ಯಗಳು 27:39 (KANIRV)
Square Portrait Landscape 4K UHD
ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.

ಅಪೊಸ್ತಲರ ಕೃತ್ಯಗಳು 27:40 (KANIRV)
Square Portrait Landscape 4K UHD
ಅವರು ಲಂಗರುಗಳನ್ನು ಸರಿಸಿ ಸಮುದ್ರದಲ್ಲೇ ಬಿಟ್ಟು, ಚುಕ್ಕಾಣಿಗಳ ಕಟ್ಟುಗಳನ್ನು ಬಿಚ್ಚಿ, ದೊಡ್ಡ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ಆ ದಡಕ್ಕೆ ನಡಿಸುತ್ತಿದ್ದರು.

ಅಪೊಸ್ತಲರ ಕೃತ್ಯಗಳು 27:41 (KANIRV)
Square Portrait Landscape 4K UHD
ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.

ಅಪೊಸ್ತಲರ ಕೃತ್ಯಗಳು 27:42 (KANIRV)
Square Portrait Landscape 4K UHD
ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.

ಅಪೊಸ್ತಲರ ಕೃತ್ಯಗಳು 27:43 (KANIRV)
Square Portrait Landscape 4K UHD
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,

ಅಪೊಸ್ತಲರ ಕೃತ್ಯಗಳು 27:44 (KANIRV)
Square Portrait Landscape 4K UHD
ಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ, ಕೆಲವರು ಹಡಗಿನ ತುಂಡುಗಳ ಮೇಲೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಈ ರೀತಿಯಿಂದ ಎಲ್ಲರೂ ಸುರಕ್ಷಿತವಾಗಿ ತೀರವನ್ನು ತಲುಪಿದರು.

Available Bible Translations

American Standard Version (ASV)
Acts 27 (ASV) »
King James Version (KJV)
Acts 27 (KJV) »
GOD’S WORD® (GW)
Acts 27 (GW) »
Berean Bible (BSB)
Acts 27 (BSB) »
World English Bible (WEB)
Acts 27 (WEB) »
French Bible (LSG)
Actes 27 (LSG) »
Portuguese Bible (BSL)
Atos 27 (BSL) »
Spanish Bible (RVA)
Hechos 27 (RVA) »
Italian Bible (RIV)
Atti 27 (RIV) »
Chinese Simplified (CUVS)
使 徒 行 传 27 (CUVS) »
Chinese Traditional (CUVT)
使 徒 行 傳 27 (CUVT) »
Russian Bible (RUSV)
Деяния 27 (RUSV) »
Ukrainian Bible (UKR)
Дії 27 (UKR) »
Hungarian Bible (KAR)
Apostolok 27 (KAR) »
Bulgarian Bible (BULG)
Деяния 27 (BULG) »
Japanese Bible (JPN)
使徒行伝 27 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List