ಅಪೊಸ್ತಲರ ಕೃತ್ಯಗಳು Chapter 3 KANIRV Bible Verse Images

ಅಪೊಸ್ತಲರ ಕೃತ್ಯಗಳು 3 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 3 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 3:1 (KANIRV)
Square Portrait Landscape 4K UHD
ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.

ಅಪೊಸ್ತಲರ ಕೃತ್ಯಗಳು 3:2 (KANIRV)
Square Portrait Landscape 4K UHD
ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.

ಅಪೊಸ್ತಲರ ಕೃತ್ಯಗಳು 3:3 (KANIRV)
Square Portrait Landscape 4K UHD
ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.

ಅಪೊಸ್ತಲರ ಕೃತ್ಯಗಳು 3:4 (KANIRV)
Square Portrait Landscape 4K UHD
ಪೇತ್ರ, ಯೋಹಾನರಿಬ್ಬರೂ ಅವನನ್ನು ದೃಷ್ಟಿಸಿ ನೋಡಿದರು. ಪೇತ್ರನು ಅವನಿಗೆ “ನಮ್ಮನ್ನು ನೋಡು” ಅಂದನು.

ಅಪೊಸ್ತಲರ ಕೃತ್ಯಗಳು 3:5 (KANIRV)
Square Portrait Landscape 4K UHD
ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.

ಅಪೊಸ್ತಲರ ಕೃತ್ಯಗಳು 3:6 (KANIRV)
Square Portrait Landscape 4K UHD
ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,

ಅಪೊಸ್ತಲರ ಕೃತ್ಯಗಳು 3:7 (KANIRV)
Square Portrait Landscape 4K UHD
ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು.

ಅಪೊಸ್ತಲರ ಕೃತ್ಯಗಳು 3:8 (KANIRV)
Square Portrait Landscape 4K UHD
ಅವನು ಹಾರಿ ನಿಂತು ನಡೆದಾಡಿದನು; ನಡೆಯುತ್ತಾ, ಕುಣಿಯುತ್ತಾ ದೇವರನ್ನು ಕೊಂಡಾಡುತ್ತಾ ಅವರ ಜೊತೆಯಲ್ಲಿ ದೇವಾಲಯದೊಳಗೆ ಹೋದನು.

ಅಪೊಸ್ತಲರ ಕೃತ್ಯಗಳು 3:9 (KANIRV)
Square Portrait Landscape 4K UHD
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;

ಅಪೊಸ್ತಲರ ಕೃತ್ಯಗಳು 3:10 (KANIRV)
Square Portrait Landscape 4K UHD
ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು.

ಅಪೊಸ್ತಲರ ಕೃತ್ಯಗಳು 3:11 (KANIRV)
Square Portrait Landscape 4K UHD
ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.

ಅಪೊಸ್ತಲರ ಕೃತ್ಯಗಳು 3:12 (KANIRV)
Square Portrait Landscape 4K UHD
ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಪೊಸ್ತಲರ ಕೃತ್ಯಗಳು 3:13 (KANIRV)
Square Portrait Landscape 4K UHD
ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.

ಅಪೊಸ್ತಲರ ಕೃತ್ಯಗಳು 3:14 (KANIRV)
Square Portrait Landscape 4K UHD
ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

ಅಪೊಸ್ತಲರ ಕೃತ್ಯಗಳು 3:15 (KANIRV)
Square Portrait Landscape 4K UHD
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.

ಅಪೊಸ್ತಲರ ಕೃತ್ಯಗಳು 3:16 (KANIRV)
Square Portrait Landscape 4K UHD
ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ಅಪೊಸ್ತಲರ ಕೃತ್ಯಗಳು 3:17 (KANIRV)
Square Portrait Landscape 4K UHD
“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.

ಅಪೊಸ್ತಲರ ಕೃತ್ಯಗಳು 3:18 (KANIRV)
Square Portrait Landscape 4K UHD
ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.

ಅಪೊಸ್ತಲರ ಕೃತ್ಯಗಳು 3:19 (KANIRV)
Square Portrait Landscape 4K UHD
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

ಅಪೊಸ್ತಲರ ಕೃತ್ಯಗಳು 3:20 (KANIRV)
Square Portrait Landscape 4K UHD
ಪುನರುಜ್ಜೀವನದ ಕಾಲಗಳು ಒದಗಿ ಆತನು ನಿಮಗೆ ನೇಮಕವಾಗಿರುವ ಕ್ರಿಸ್ತನಾದ ಯೇಸುವನ್ನು ಕಳುಹಿಸಿಕೊಡುವನು.

ಅಪೊಸ್ತಲರ ಕೃತ್ಯಗಳು 3:21 (KANIRV)
Square Portrait Landscape 4K UHD
ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.

ಅಪೊಸ್ತಲರ ಕೃತ್ಯಗಳು 3:22 (KANIRV)
Square Portrait Landscape 4K UHD
ಮೋಶೆಯು ಹೇಳಿದ್ದೇನಂದರೆ, ‘ದೇವರಾಗಿರುವ ಕರ್ತನು ನನ್ನ ಹಾಗೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಎಬ್ಬಿಸುವನು; ಆತನು ಹೇಳುವ ಎಲ್ಲಾ ಮಾತುಗಳಿಗೆ ನೀವು ಕಿವಿಗೊಡಬೇಕು.

ಅಪೊಸ್ತಲರ ಕೃತ್ಯಗಳು 3:23 (KANIRV)
Square Portrait Landscape 4K UHD
ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.

ಅಪೊಸ್ತಲರ ಕೃತ್ಯಗಳು 3:24 (KANIRV)
Square Portrait Landscape 4K UHD
ಇದಲ್ಲದೆ ಸಮುವೇಲನೂ, ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳನ್ನು ಕುರಿತು ತಿಳಿಸಿರುವರು.

ಅಪೊಸ್ತಲರ ಕೃತ್ಯಗಳು 3:25 (KANIRV)
Square Portrait Landscape 4K UHD
ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.

ಅಪೊಸ್ತಲರ ಕೃತ್ಯಗಳು 3:26 (KANIRV)
Square Portrait Landscape 4K UHD
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

Available Bible Translations

American Standard Version (ASV)
Acts 3 (ASV) »
King James Version (KJV)
Acts 3 (KJV) »
GOD’S WORD® (GW)
Acts 3 (GW) »
Berean Bible (BSB)
Acts 3 (BSB) »
World English Bible (WEB)
Acts 3 (WEB) »
French Bible (LSG)
Actes 3 (LSG) »
German Bible (LUTH1912)
Apostelgeschichte 3 (LUTH1912) »
Portuguese Bible (BSL)
Atos 3 (BSL) »
Spanish Bible (RVA)
Hechos 3 (RVA) »
Italian Bible (RIV)
Atti 3 (RIV) »
Chinese Simplified (CUVS)
使 徒 行 传 3 (CUVS) »
Chinese Traditional (CUVT)
使 徒 行 傳 3 (CUVT) »
Albanian Bible (ALB)
Veprat e Apostujve 3 (ALB) »
Russian Bible (RUSV)
Деяния 3 (RUSV) »
Ukrainian Bible (UKR)
Дії 3 (UKR) »
Hungarian Bible (KAR)
Apostolok 3 (KAR) »
Bulgarian Bible (BULG)
Деяния 3 (BULG) »
Japanese Bible (JPN)
使徒行伝 3 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List