ಅಪೊಸ್ತಲರ ಕೃತ್ಯಗಳು Chapter 8 KANIRV Bible Verse Images

ಅಪೊಸ್ತಲರ ಕೃತ್ಯಗಳು 8 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಅಪೊಸ್ತಲರ ಕೃತ್ಯಗಳು 8 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಅಪೊಸ್ತಲರ ಕೃತ್ಯಗಳು 8:1 (KANIRV)
Square Portrait Landscape 4K UHD
ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.

ಅಪೊಸ್ತಲರ ಕೃತ್ಯಗಳು 8:2 (KANIRV)
Square Portrait Landscape 4K UHD
ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.

ಅಪೊಸ್ತಲರ ಕೃತ್ಯಗಳು 8:3 (KANIRV)
Square Portrait Landscape 4K UHD
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 8:4 (KANIRV)
Square Portrait Landscape 4K UHD
ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.

ಅಪೊಸ್ತಲರ ಕೃತ್ಯಗಳು 8:5 (KANIRV)
Square Portrait Landscape 4K UHD
ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.

ಅಪೊಸ್ತಲರ ಕೃತ್ಯಗಳು 8:6 (KANIRV)
Square Portrait Landscape 4K UHD
ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.

ಅಪೊಸ್ತಲರ ಕೃತ್ಯಗಳು 8:7 (KANIRV)
Square Portrait Landscape 4K UHD
ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.

ಅಪೊಸ್ತಲರ ಕೃತ್ಯಗಳು 8:8 (KANIRV)
Square Portrait Landscape 4K UHD
ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.

ಅಪೊಸ್ತಲರ ಕೃತ್ಯಗಳು 8:9 (KANIRV)
Square Portrait Landscape 4K UHD
ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.

ಅಪೊಸ್ತಲರ ಕೃತ್ಯಗಳು 8:10 (KANIRV)
Square Portrait Landscape 4K UHD
ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.

ಅಪೊಸ್ತಲರ ಕೃತ್ಯಗಳು 8:11 (KANIRV)
Square Portrait Landscape 4K UHD
ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.

ಅಪೊಸ್ತಲರ ಕೃತ್ಯಗಳು 8:12 (KANIRV)
Square Portrait Landscape 4K UHD
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಪೊಸ್ತಲರ ಕೃತ್ಯಗಳು 8:13 (KANIRV)
Square Portrait Landscape 4K UHD
ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.

ಅಪೊಸ್ತಲರ ಕೃತ್ಯಗಳು 8:14 (KANIRV)
Square Portrait Landscape 4K UHD
ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.

ಅಪೊಸ್ತಲರ ಕೃತ್ಯಗಳು 8:15 (KANIRV)
Square Portrait Landscape 4K UHD
ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.

ಅಪೊಸ್ತಲರ ಕೃತ್ಯಗಳು 8:16 (KANIRV)
Square Portrait Landscape 4K UHD
ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು

ಅಪೊಸ್ತಲರ ಕೃತ್ಯಗಳು 8:17 (KANIRV)
Square Portrait Landscape 4K UHD
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.

ಅಪೊಸ್ತಲರ ಕೃತ್ಯಗಳು 8:18 (KANIRV)
Square Portrait Landscape 4K UHD
ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,

ಅಪೊಸ್ತಲರ ಕೃತ್ಯಗಳು 8:19 (KANIRV)
Square Portrait Landscape 4K UHD
“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.

ಅಪೊಸ್ತಲರ ಕೃತ್ಯಗಳು 8:20 (KANIRV)
Square Portrait Landscape 4K UHD
ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಅಪೊಸ್ತಲರ ಕೃತ್ಯಗಳು 8:21 (KANIRV)
Square Portrait Landscape 4K UHD
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

ಅಪೊಸ್ತಲರ ಕೃತ್ಯಗಳು 8:22 (KANIRV)
Square Portrait Landscape 4K UHD
ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.

ಅಪೊಸ್ತಲರ ಕೃತ್ಯಗಳು 8:23 (KANIRV)
Square Portrait Landscape 4K UHD
ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು

ಅಪೊಸ್ತಲರ ಕೃತ್ಯಗಳು 8:24 (KANIRV)
Square Portrait Landscape 4K UHD
ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 8:25 (KANIRV)
Square Portrait Landscape 4K UHD
ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅಪೊಸ್ತಲರ ಕೃತ್ಯಗಳು 8:26 (KANIRV)
Square Portrait Landscape 4K UHD
ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 8:27 (KANIRV)
Square Portrait Landscape 4K UHD
ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.

ಅಪೊಸ್ತಲರ ಕೃತ್ಯಗಳು 8:28 (KANIRV)
Square Portrait Landscape 4K UHD
ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

ಅಪೊಸ್ತಲರ ಕೃತ್ಯಗಳು 8:29 (KANIRV)
Square Portrait Landscape 4K UHD
ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.

ಅಪೊಸ್ತಲರ ಕೃತ್ಯಗಳು 8:30 (KANIRV)
Square Portrait Landscape 4K UHD
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಅಪೊಸ್ತಲರ ಕೃತ್ಯಗಳು 8:31 (KANIRV)
Square Portrait Landscape 4K UHD
ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.

ಅಪೊಸ್ತಲರ ಕೃತ್ಯಗಳು 8:32 (KANIRV)
Square Portrait Landscape 4K UHD
ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.

ಅಪೊಸ್ತಲರ ಕೃತ್ಯಗಳು 8:33 (KANIRV)
Square Portrait Landscape 4K UHD
ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.

ಅಪೊಸ್ತಲರ ಕೃತ್ಯಗಳು 8:34 (KANIRV)
Square Portrait Landscape 4K UHD
ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು

ಅಪೊಸ್ತಲರ ಕೃತ್ಯಗಳು 8:35 (KANIRV)
Square Portrait Landscape 4K UHD
ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

ಅಪೊಸ್ತಲರ ಕೃತ್ಯಗಳು 8:36 (KANIRV)
Square Portrait Landscape 4K UHD
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.

ಅಪೊಸ್ತಲರ ಕೃತ್ಯಗಳು 8:37 (KANIRV)
Square Portrait Landscape 4K UHD
ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;

ಅಪೊಸ್ತಲರ ಕೃತ್ಯಗಳು 8:38 (KANIRV)
Square Portrait Landscape 4K UHD
ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.

ಅಪೊಸ್ತಲರ ಕೃತ್ಯಗಳು 8:39 (KANIRV)
Square Portrait Landscape 4K UHD
ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಪೊಸ್ತಲರ ಕೃತ್ಯಗಳು 8:40 (KANIRV)
Square Portrait Landscape 4K UHD
ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

Available Bible Translations

American Standard Version (ASV)
Acts 8 (ASV) »
King James Version (KJV)
Acts 8 (KJV) »
GOD’S WORD® (GW)
Acts 8 (GW) »
Berean Bible (BSB)
Acts 8 (BSB) »
World English Bible (WEB)
Acts 8 (WEB) »
French Bible (LSG)
Actes 8 (LSG) »
German Bible (LUTH1912)
Apostelgeschichte 8 (LUTH1912) »
Portuguese Bible (BSL)
Atos 8 (BSL) »
Spanish Bible (RVA)
Hechos 8 (RVA) »
Italian Bible (RIV)
Atti 8 (RIV) »
Chinese Simplified (CUVS)
使 徒 行 传 8 (CUVS) »
Chinese Traditional (CUVT)
使 徒 行 傳 8 (CUVT) »
Albanian Bible (ALB)
Veprat e Apostujve 8 (ALB) »
Russian Bible (RUSV)
Деяния 8 (RUSV) »
Ukrainian Bible (UKR)
Дії 8 (UKR) »
Hungarian Bible (KAR)
Apostolok 8 (KAR) »
Bulgarian Bible (BULG)
Деяния 8 (BULG) »
Japanese Bible (JPN)
使徒行伝 8 (JPN) »

ಅಪೊಸ್ತಲರ ಕೃತ್ಯಗಳು (KANIRV) Chapter Selection

KANIRV Book Selection List