ಕೊಲೊಸ್ಸೆಯವರಿಗೆ Chapter 2 KANIRV Bible Verse Images

ಕೊಲೊಸ್ಸೆಯವರಿಗೆ 2 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಕೊಲೊಸ್ಸೆಯವರಿಗೆ 2 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಕೊಲೊಸ್ಸೆಯವರಿಗೆ 2:1 (KANIRV)
Square Portrait Landscape 4K UHD
ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,

ಕೊಲೊಸ್ಸೆಯವರಿಗೆ 2:2 (KANIRV)
Square Portrait Landscape 4K UHD
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.

ಕೊಲೊಸ್ಸೆಯವರಿಗೆ 2:3 (KANIRV)
Square Portrait Landscape 4K UHD
ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.

ಕೊಲೊಸ್ಸೆಯವರಿಗೆ 2:4 (KANIRV)
Square Portrait Landscape 4K UHD
ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.

ಕೊಲೊಸ್ಸೆಯವರಿಗೆ 2:5 (KANIRV)
Square Portrait Landscape 4K UHD
ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ಕೊಲೊಸ್ಸೆಯವರಿಗೆ 2:6 (KANIRV)
Square Portrait Landscape 4K UHD
ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

ಕೊಲೊಸ್ಸೆಯವರಿಗೆ 2:7 (KANIRV)
Square Portrait Landscape 4K UHD
ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

ಕೊಲೊಸ್ಸೆಯವರಿಗೆ 2:8 (KANIRV)
Square Portrait Landscape 4K UHD
ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ಕೊಲೊಸ್ಸೆಯವರಿಗೆ 2:9 (KANIRV)
Square Portrait Landscape 4K UHD
ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,

ಕೊಲೊಸ್ಸೆಯವರಿಗೆ 2:10 (KANIRV)
Square Portrait Landscape 4K UHD
ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

ಕೊಲೊಸ್ಸೆಯವರಿಗೆ 2:11 (KANIRV)
Square Portrait Landscape 4K UHD
ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

ಕೊಲೊಸ್ಸೆಯವರಿಗೆ 2:12 (KANIRV)
Square Portrait Landscape 4K UHD
ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

ಕೊಲೊಸ್ಸೆಯವರಿಗೆ 2:13 (KANIRV)
Square Portrait Landscape 4K UHD
ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.

ಕೊಲೊಸ್ಸೆಯವರಿಗೆ 2:14 (KANIRV)
Square Portrait Landscape 4K UHD
ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

ಕೊಲೊಸ್ಸೆಯವರಿಗೆ 2:15 (KANIRV)
Square Portrait Landscape 4K UHD
ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

ಕೊಲೊಸ್ಸೆಯವರಿಗೆ 2:16 (KANIRV)
Square Portrait Landscape 4K UHD
ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.

ಕೊಲೊಸ್ಸೆಯವರಿಗೆ 2:17 (KANIRV)
Square Portrait Landscape 4K UHD
ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.

ಕೊಲೊಸ್ಸೆಯವರಿಗೆ 2:18 (KANIRV)
Square Portrait Landscape 4K UHD
ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.

ಕೊಲೊಸ್ಸೆಯವರಿಗೆ 2:19 (KANIRV)
Square Portrait Landscape 4K UHD
ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

ಕೊಲೊಸ್ಸೆಯವರಿಗೆ 2:20 (KANIRV)
Square Portrait Landscape 4K UHD
ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,

ಕೊಲೊಸ್ಸೆಯವರಿಗೆ 2:21 (KANIRV)
Square Portrait Landscape 4K UHD
“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.

ಕೊಲೊಸ್ಸೆಯವರಿಗೆ 2:22 (KANIRV)
Square Portrait Landscape 4K UHD
“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.

ಕೊಲೊಸ್ಸೆಯವರಿಗೆ 2:23 (KANIRV)
Square Portrait Landscape 4K UHD
ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

Available Bible Translations

American Standard Version (ASV)
Colossians 2 (ASV) »
King James Version (KJV)
Colossians 2 (KJV) »
GOD’S WORD® (GW)
Colossians 2 (GW) »
Berean Bible (BSB)
Colossians 2 (BSB) »
World English Bible (WEB)
Colossians 2 (WEB) »
French Bible (LSG)
Colossiens 2 (LSG) »
German Bible (LUTH1912)
Kolosser 2 (LUTH1912) »
Portuguese Bible (BSL)
Colossenses 2 (BSL) »
Vietnamese Bible (VIE)
Cô-lô-se 2 (VIE) »
Spanish Bible (RVA)
Colosenses 2 (RVA) »
Italian Bible (RIV)
Colossesi 2 (RIV) »
Chinese Simplified (CUVS)
歌 罗 西 书 2 (CUVS) »
Chinese Traditional (CUVT)
歌 羅 西 書 2 (CUVT) »
Albanian Bible (ALB)
Kolosianëve 2 (ALB) »
Swedish Bible (SV1917)
Kolosserbrevet 2 (SV1917) »
Ukrainian Bible (UKR)
колоссян 2 (UKR) »
Hungarian Bible (KAR)
Kolossé 2 (KAR) »
Bulgarian Bible (BULG)
Колосяни 2 (BULG) »
Norwegian Bible (NORSK)
Kolosserne 2 (NORSK) »

ಕೊಲೊಸ್ಸೆಯವರಿಗೆ (KANIRV) Chapter Selection

1 2 3 4

KANIRV Book Selection List