ಧರ್ಮೋಪದೇಶಕಾಂಡ Chapter 2 KANIRV Bible Verse Images

ಧರ್ಮೋಪದೇಶಕಾಂಡ 2 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 2 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 2:1 (KANIRV)
Square Portrait Landscape 4K UHD
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.

ಧರ್ಮೋಪದೇಶಕಾಂಡ 2:3 (KANIRV)
Square Portrait Landscape 4K UHD
“ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.

ಧರ್ಮೋಪದೇಶಕಾಂಡ 2:4 (KANIRV)
Square Portrait Landscape 4K UHD
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಧರ್ಮೋಪದೇಶಕಾಂಡ 2:5 (KANIRV)
Square Portrait Landscape 4K UHD
ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.

ಧರ್ಮೋಪದೇಶಕಾಂಡ 2:6 (KANIRV)
Square Portrait Landscape 4K UHD
ನೀವು ಅಲ್ಲಿ ಹಣವನ್ನು ಕೊಟ್ಟು ಆಹಾರಪದಾರ್ಥಗಳನ್ನು ತಿನ್ನಬೇಕು; ನೀರನ್ನು ಕೊಂಡುಕೊಂಡು ಕುಡಿಯಬೇಕು.

ಧರ್ಮೋಪದೇಶಕಾಂಡ 2:7 (KANIRV)
Square Portrait Landscape 4K UHD
ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.

ಧರ್ಮೋಪದೇಶಕಾಂಡ 2:8 (KANIRV)
Square Portrait Landscape 4K UHD
ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.

ಧರ್ಮೋಪದೇಶಕಾಂಡ 2:9 (KANIRV)
Square Portrait Landscape 4K UHD
ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.

ಧರ್ಮೋಪದೇಶಕಾಂಡ 2:10 (KANIRV)
Square Portrait Landscape 4K UHD
ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.

ಧರ್ಮೋಪದೇಶಕಾಂಡ 2:11 (KANIRV)
Square Portrait Landscape 4K UHD
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.

ಧರ್ಮೋಪದೇಶಕಾಂಡ 2:12 (KANIRV)
Square Portrait Landscape 4K UHD
ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.

ಧರ್ಮೋಪದೇಶಕಾಂಡ 2:13 (KANIRV)
Square Portrait Landscape 4K UHD
ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.

ಧರ್ಮೋಪದೇಶಕಾಂಡ 2:14 (KANIRV)
Square Portrait Landscape 4K UHD
ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.

ಧರ್ಮೋಪದೇಶಕಾಂಡ 2:15 (KANIRV)
Square Portrait Landscape 4K UHD
ಯೆಹೋವನ ಹಸ್ತವು ಅವರಿಗೆ ವಿರುದ್ಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.

ಧರ್ಮೋಪದೇಶಕಾಂಡ 2:16 (KANIRV)
Square Portrait Landscape 4K UHD
ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.

ಧರ್ಮೋಪದೇಶಕಾಂಡ 2:17 (KANIRV)
Square Portrait Landscape 4K UHD
ಆಗ ಯೆಹೋವನು ನನ್ನೊಂದಿಗೆ ಮಾತನಾಡಿ ನನಗೆ,

ಧರ್ಮೋಪದೇಶಕಾಂಡ 2:18 (KANIRV)
Square Portrait Landscape 4K UHD
“ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಧರ್ಮೋಪದೇಶಕಾಂಡ 2:19 (KANIRV)
Square Portrait Landscape 4K UHD
ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”

ಧರ್ಮೋಪದೇಶಕಾಂಡ 2:20 (KANIRV)
Square Portrait Landscape 4K UHD
ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.

ಧರ್ಮೋಪದೇಶಕಾಂಡ 2:21 (KANIRV)
Square Portrait Landscape 4K UHD
ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.

ಧರ್ಮೋಪದೇಶಕಾಂಡ 2:22 (KANIRV)
Square Portrait Landscape 4K UHD
ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,

ಧರ್ಮೋಪದೇಶಕಾಂಡ 2:23 (KANIRV)
Square Portrait Landscape 4K UHD
ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ನಾಡಿನಿಂದ ಹೊರಗೆ ಹೋಗುವಂತೆ ಮಾಡಿದನು. ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರಲ್ಲಿ ವಾಸಮಾಡ ತೊಡಗಿದರು.

ಧರ್ಮೋಪದೇಶಕಾಂಡ 2:24 (KANIRV)
Square Portrait Landscape 4K UHD
“ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.

ಧರ್ಮೋಪದೇಶಕಾಂಡ 2:25 (KANIRV)
Square Portrait Landscape 4K UHD
ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.

ಧರ್ಮೋಪದೇಶಕಾಂಡ 2:26 (KANIRV)
Square Portrait Landscape 4K UHD
ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಧರ್ಮೋಪದೇಶಕಾಂಡ 2:27 (KANIRV)
Square Portrait Landscape 4K UHD
“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.

ಧರ್ಮೋಪದೇಶಕಾಂಡ 2:28 (KANIRV)
Square Portrait Landscape 4K UHD
ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ.

ಧರ್ಮೋಪದೇಶಕಾಂಡ 2:29 (KANIRV)
Square Portrait Landscape 4K UHD
ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.

ಧರ್ಮೋಪದೇಶಕಾಂಡ 2:30 (KANIRV)
Square Portrait Landscape 4K UHD
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.

ಧರ್ಮೋಪದೇಶಕಾಂಡ 2:31 (KANIRV)
Square Portrait Landscape 4K UHD
ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.

ಧರ್ಮೋಪದೇಶಕಾಂಡ 2:32 (KANIRV)
Square Portrait Landscape 4K UHD
ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಜಿಗೆ ಹೊರಟುಬಂದನು.

ಧರ್ಮೋಪದೇಶಕಾಂಡ 2:33 (KANIRV)
Square Portrait Landscape 4K UHD
ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.

ಧರ್ಮೋಪದೇಶಕಾಂಡ 2:34 (KANIRV)
Square Portrait Landscape 4K UHD
ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.

ಧರ್ಮೋಪದೇಶಕಾಂಡ 2:35 (KANIRV)
Square Portrait Landscape 4K UHD
ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು ಊರುಗಳನ್ನು ಸೂರೆಮಾಡಿಬಿಟ್ಟೆವು.

ಧರ್ಮೋಪದೇಶಕಾಂಡ 2:36 (KANIRV)
Square Portrait Landscape 4K UHD
ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.

ಧರ್ಮೋಪದೇಶಕಾಂಡ 2:37 (KANIRV)
Square Portrait Landscape 4K UHD
ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.

Available Bible Translations

American Standard Version (ASV)
Deuteronomy 2 (ASV) »
King James Version (KJV)
Deuteronomy 2 (KJV) »
GOD’S WORD® (GW)
Deuteronomy 2 (GW) »
Berean Bible (BSB)
Deuteronomy 2 (BSB) »
World English Bible (WEB)
Deuteronomy 2 (WEB) »
French Bible (LSG)
Deutéronome 2 (LSG) »
German Bible (LUTH1912)
Deuteronomium 2 (LUTH1912) »
Punjabi Bible (PANIRV)
ਅਸਤਸਨਾ 2 (PANIRV) »
Marathi Bible (MARIRV)
अनुवाद 2 (MARIRV) »
Hebrew Bible (HEB)
דברים 2 (HEB) »
Portuguese Bible (BSL)
Deuteronômio 2 (BSL) »
Spanish Bible (RVA)
Deuteronomio 2 (RVA) »
Italian Bible (RIV)
Deuteronomio 2 (RIV) »
Chinese Simplified (CUVS)
申 命 记 2 (CUVS) »
Chinese Traditional (CUVT)
申 命 記 2 (CUVT) »
Swedish Bible (SV1917)
5 Mosebok 2 (SV1917) »
Hungarian Bible (KAR)
5 Mózes 2 (KAR) »
Japanese Bible (JPN)
申命記 2 (JPN) »
Norwegian Bible (NORSK)
5 Mosebok 2 (NORSK) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List