ಧರ್ಮೋಪದೇಶಕಾಂಡ Chapter 22 KANIRV Bible Verse Images

ಧರ್ಮೋಪದೇಶಕಾಂಡ 22 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 22 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 22:1 (KANIRV)
Square Portrait Landscape 4K UHD
ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.

ಧರ್ಮೋಪದೇಶಕಾಂಡ 22:2 (KANIRV)
Square Portrait Landscape 4K UHD
ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.

ಧರ್ಮೋಪದೇಶಕಾಂಡ 22:3 (KANIRV)
Square Portrait Landscape 4K UHD
ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.

ಧರ್ಮೋಪದೇಶಕಾಂಡ 22:4 (KANIRV)
Square Portrait Landscape 4K UHD
ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.

ಧರ್ಮೋಪದೇಶಕಾಂಡ 22:5 (KANIRV)
Square Portrait Landscape 4K UHD
ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.

ಧರ್ಮೋಪದೇಶಕಾಂಡ 22:6 (KANIRV)
Square Portrait Landscape 4K UHD
ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.

ಧರ್ಮೋಪದೇಶಕಾಂಡ 22:7 (KANIRV)
Square Portrait Landscape 4K UHD
ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.

ಧರ್ಮೋಪದೇಶಕಾಂಡ 22:8 (KANIRV)
Square Portrait Landscape 4K UHD
ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.

ಧರ್ಮೋಪದೇಶಕಾಂಡ 22:9 (KANIRV)
Square Portrait Landscape 4K UHD
ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.

ಧರ್ಮೋಪದೇಶಕಾಂಡ 22:10 (KANIRV)
Square Portrait Landscape 4K UHD
ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.

ಧರ್ಮೋಪದೇಶಕಾಂಡ 22:11 (KANIRV)
Square Portrait Landscape 4K UHD
ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಧರ್ಮೋಪದೇಶಕಾಂಡ 22:12 (KANIRV)
Square Portrait Landscape 4K UHD
ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.

ಧರ್ಮೋಪದೇಶಕಾಂಡ 22:13 (KANIRV)
Square Portrait Landscape 4K UHD
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,

ಧರ್ಮೋಪದೇಶಕಾಂಡ 22:14 (KANIRV)
Square Portrait Landscape 4K UHD
“ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,

ಧರ್ಮೋಪದೇಶಕಾಂಡ 22:15 (KANIRV)
Square Portrait Landscape 4K UHD
ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.

ಧರ್ಮೋಪದೇಶಕಾಂಡ 22:16 (KANIRV)
Square Portrait Landscape 4K UHD
ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ

ಧರ್ಮೋಪದೇಶಕಾಂಡ 22:17 (KANIRV)
Square Portrait Landscape 4K UHD
ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.

ಧರ್ಮೋಪದೇಶಕಾಂಡ 22:18 (KANIRV)
Square Portrait Landscape 4K UHD
ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.

ಧರ್ಮೋಪದೇಶಕಾಂಡ 22:19 (KANIRV)
Square Portrait Landscape 4K UHD
ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಧರ್ಮೋಪದೇಶಕಾಂಡ 22:20 (KANIRV)
Square Portrait Landscape 4K UHD
ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,

ಧರ್ಮೋಪದೇಶಕಾಂಡ 22:21 (KANIRV)
Square Portrait Landscape 4K UHD
ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.

ಧರ್ಮೋಪದೇಶಕಾಂಡ 22:22 (KANIRV)
Square Portrait Landscape 4K UHD
ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 22:23 (KANIRV)
Square Portrait Landscape 4K UHD
ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,

ಧರ್ಮೋಪದೇಶಕಾಂಡ 22:24 (KANIRV)
Square Portrait Landscape 4K UHD
ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಧರ್ಮೋಪದೇಶಕಾಂಡ 22:25 (KANIRV)
Square Portrait Landscape 4K UHD
ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.

ಧರ್ಮೋಪದೇಶಕಾಂಡ 22:26 (KANIRV)
Square Portrait Landscape 4K UHD
ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.

ಧರ್ಮೋಪದೇಶಕಾಂಡ 22:27 (KANIRV)
Square Portrait Landscape 4K UHD
ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.

ಧರ್ಮೋಪದೇಶಕಾಂಡ 22:28 (KANIRV)
Square Portrait Landscape 4K UHD
ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,

ಧರ್ಮೋಪದೇಶಕಾಂಡ 22:29 (KANIRV)
Square Portrait Landscape 4K UHD
ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಧರ್ಮೋಪದೇಶಕಾಂಡ 22:30 (KANIRV)
Square Portrait Landscape 4K UHD
ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.

Available Bible Translations

American Standard Version (ASV)
Deuteronomy 22 (ASV) »
King James Version (KJV)
Deuteronomy 22 (KJV) »
GOD’S WORD® (GW)
Deuteronomy 22 (GW) »
Berean Bible (BSB)
Deuteronomy 22 (BSB) »
World English Bible (WEB)
Deuteronomy 22 (WEB) »
French Bible (LSG)
Deutéronome 22 (LSG) »
German Bible (LUTH1912)
Deuteronomium 22 (LUTH1912) »
Hebrew Bible (HEB)
דברים 22 (HEB) »
Portuguese Bible (BSL)
Deuteronômio 22 (BSL) »
Spanish Bible (RVA)
Deuteronomio 22 (RVA) »
Italian Bible (RIV)
Deuteronomio 22 (RIV) »
Chinese Simplified (CUVS)
申 命 记 22 (CUVS) »
Chinese Traditional (CUVT)
申 命 記 22 (CUVT) »
Swedish Bible (SV1917)
5 Mosebok 22 (SV1917) »
Hungarian Bible (KAR)
5 Mózes 22 (KAR) »
Japanese Bible (JPN)
申命記 22 (JPN) »
Norwegian Bible (NORSK)
5 Mosebok 22 (NORSK) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List