ಧರ್ಮೋಪದೇಶಕಾಂಡ Chapter 23 KANIRV Bible Verse Images

ಧರ್ಮೋಪದೇಶಕಾಂಡ 23 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 23 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 23:1 (KANIRV)
Square Portrait Landscape 4K UHD
ಬೀಜಹೊಡಿಸಿಕೊಂಡವರು ಅಥವಾ ರಹಸ್ಯಾಂಗವನ್ನು ಛೇದಿಸಿಕೊಂಡವರು ಯೆಹೋವನ ಸಭೆಯಲ್ಲಿ ಸೇರಬಾರದು.

ಧರ್ಮೋಪದೇಶಕಾಂಡ 23:2 (KANIRV)
Square Portrait Landscape 4K UHD
ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲೆಯವರಾದರೂ ಅವರು ಯೆಹೋವನ ಸಭೆಗೆ ಸೇರಬಾರದು.

ಧರ್ಮೋಪದೇಶಕಾಂಡ 23:3 (KANIRV)
Square Portrait Landscape 4K UHD
ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.

ಧರ್ಮೋಪದೇಶಕಾಂಡ 23:4 (KANIRV)
Square Portrait Landscape 4K UHD
ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.

ಧರ್ಮೋಪದೇಶಕಾಂಡ 23:5 (KANIRV)
Square Portrait Landscape 4K UHD
ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.

ಧರ್ಮೋಪದೇಶಕಾಂಡ 23:6 (KANIRV)
Square Portrait Landscape 4K UHD
ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಧರ್ಮೋಪದೇಶಕಾಂಡ 23:7 (KANIRV)
Square Portrait Landscape 4K UHD
ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

ಧರ್ಮೋಪದೇಶಕಾಂಡ 23:8 (KANIRV)
Square Portrait Landscape 4K UHD
ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಯೆಹೋವನ ಸಭೆಗೆ ಸೇರಬಹುದು.

ಧರ್ಮೋಪದೇಶಕಾಂಡ 23:9 (KANIRV)
Square Portrait Landscape 4K UHD
ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.

ಧರ್ಮೋಪದೇಶಕಾಂಡ 23:10 (KANIRV)
Square Portrait Landscape 4K UHD
ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರೂ ಅಶುದ್ಧನಾದರೆ, ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.

ಧರ್ಮೋಪದೇಶಕಾಂಡ 23:11 (KANIRV)
Square Portrait Landscape 4K UHD
ಅವನು ಸಂಜೆಯ ವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.

ಧರ್ಮೋಪದೇಶಕಾಂಡ 23:12 (KANIRV)
Square Portrait Landscape 4K UHD
ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.

ಧರ್ಮೋಪದೇಶಕಾಂಡ 23:13 (KANIRV)
Square Portrait Landscape 4K UHD
ಯುದ್ಧದ ಸಾಮಾನುಗಳಲ್ಲದೆ ನಿಮ್ಮ ಬಳಿಯಲ್ಲಿ ಸಲಿಕೆ ಇರಬೇಕು; ನೀವು ಬಹಿರ್ಭೂಮಿಗೆ ಹೋದಾಗ ಆ ಸಲಿಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.

ಧರ್ಮೋಪದೇಶಕಾಂಡ 23:14 (KANIRV)
Square Portrait Landscape 4K UHD
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.

ಧರ್ಮೋಪದೇಶಕಾಂಡ 23:15 (KANIRV)
Square Portrait Landscape 4K UHD
ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.

ಧರ್ಮೋಪದೇಶಕಾಂಡ 23:16 (KANIRV)
Square Portrait Landscape 4K UHD
ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನಿರ್ಬಂಧಪಡಿಸಬಾರದು ಹಾಗೂ ನೀವು ಅವನನ್ನು ಮತ್ತೆ ಶೋಷಣೆಗೆ ಗುರಿಮಾಡಬಾರದು.

ಧರ್ಮೋಪದೇಶಕಾಂಡ 23:17 (KANIRV)
Square Portrait Landscape 4K UHD
ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.

ಧರ್ಮೋಪದೇಶಕಾಂಡ 23:18 (KANIRV)
Square Portrait Landscape 4K UHD
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.

ಧರ್ಮೋಪದೇಶಕಾಂಡ 23:19 (KANIRV)
Square Portrait Landscape 4K UHD
ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.

ಧರ್ಮೋಪದೇಶಕಾಂಡ 23:20 (KANIRV)
Square Portrait Landscape 4K UHD
ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಧರ್ಮೋಪದೇಶಕಾಂಡ 23:21 (KANIRV)
Square Portrait Landscape 4K UHD
ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.

ಧರ್ಮೋಪದೇಶಕಾಂಡ 23:22 (KANIRV)
Square Portrait Landscape 4K UHD
ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;

ಧರ್ಮೋಪದೇಶಕಾಂಡ 23:23 (KANIRV)
Square Portrait Landscape 4K UHD
ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.

ಧರ್ಮೋಪದೇಶಕಾಂಡ 23:24 (KANIRV)
Square Portrait Landscape 4K UHD
ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.

ಧರ್ಮೋಪದೇಶಕಾಂಡ 23:25 (KANIRV)
Square Portrait Landscape 4K UHD
ಮತ್ತೊಬ್ಬನ ಪೈರಿನಲ್ಲಿ ಹೋಗುತ್ತಿರುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದೇ ಹೊರತು ಆ ಪೈರಿಗೆ ಕುಡುಗೋಲು ಹಾಕಬಾರದು.

Available Bible Translations

American Standard Version (ASV)
Deuteronomy 23 (ASV) »
King James Version (KJV)
Deuteronomy 23 (KJV) »
GOD’S WORD® (GW)
Deuteronomy 23 (GW) »
Berean Bible (BSB)
Deuteronomy 23 (BSB) »
World English Bible (WEB)
Deuteronomy 23 (WEB) »
French Bible (LSG)
Deutéronome 23 (LSG) »
German Bible (LUTH1912)
Deuteronomium 23 (LUTH1912) »
Hebrew Bible (HEB)
דברים 23 (HEB) »
Portuguese Bible (BSL)
Deuteronômio 23 (BSL) »
Spanish Bible (RVA)
Deuteronomio 23 (RVA) »
Italian Bible (RIV)
Deuteronomio 23 (RIV) »
Chinese Simplified (CUVS)
申 命 记 23 (CUVS) »
Chinese Traditional (CUVT)
申 命 記 23 (CUVT) »
Swedish Bible (SV1917)
5 Mosebok 23 (SV1917) »
Hungarian Bible (KAR)
5 Mózes 23 (KAR) »
Japanese Bible (JPN)
申命記 23 (JPN) »
Norwegian Bible (NORSK)
5 Mosebok 23 (NORSK) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List