ಧರ್ಮೋಪದೇಶಕಾಂಡ Chapter 24 KANIRV Bible Verse Images

ಧರ್ಮೋಪದೇಶಕಾಂಡ 24 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 24 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 24:1 (KANIRV)
Square Portrait Landscape 4K UHD
ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.

ಧರ್ಮೋಪದೇಶಕಾಂಡ 24:2 (KANIRV)
Square Portrait Landscape 4K UHD
ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.

ಧರ್ಮೋಪದೇಶಕಾಂಡ 24:3 (KANIRV)
Square Portrait Landscape 4K UHD
ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,

ಧರ್ಮೋಪದೇಶಕಾಂಡ 24:4 (KANIRV)
Square Portrait Landscape 4K UHD
ಆಗ ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡನು ಅವಳನ್ನು ಪುನಃ ತನ್ನ ಹೆಂಡತಿಯಾಗಿ ಸ್ವೀಕರಿಸಬಾರದು; ಅವಳು ಅಶುದ್ಧಳಾದಳು; ಅವಳನ್ನು ಪುನಃ ಸ್ವೀಕರಿಸುವುದು ಯೆಹೋವನಿಗೆ ಅಸಹ್ಯ ಕಾರ್ಯ. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶಕ್ಕೆ ದೋಷವುಂಟಾಗುವಂತೆ ಅವಕಾಶಕೊಡಬಾರದು.

ಧರ್ಮೋಪದೇಶಕಾಂಡ 24:5 (KANIRV)
Square Portrait Landscape 4K UHD
ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನೂ ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದ ವರೆಗೂ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.

ಧರ್ಮೋಪದೇಶಕಾಂಡ 24:6 (KANIRV)
Square Portrait Landscape 4K UHD
ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.

ಧರ್ಮೋಪದೇಶಕಾಂಡ 24:7 (KANIRV)
Square Portrait Landscape 4K UHD
ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.

ಧರ್ಮೋಪದೇಶಕಾಂಡ 24:8 (KANIRV)
Square Portrait Landscape 4K UHD
ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಧರ್ಮೋಪದೇಶಕಾಂಡ 24:9 (KANIRV)
Square Portrait Landscape 4K UHD
ನೀವು ಐಗುಪ್ತದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಯೆಹೋವನು ಮಿರ್ಯಾಮಳಿಗೆ ಮಾಡಿದ್ದನ್ನು ನೆನಪುಮಾಡಿಕೊಳ್ಳಿರಿ.

ಧರ್ಮೋಪದೇಶಕಾಂಡ 24:10 (KANIRV)
Square Portrait Landscape 4K UHD
ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.

ಧರ್ಮೋಪದೇಶಕಾಂಡ 24:11 (KANIRV)
Square Portrait Landscape 4K UHD
ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.

ಧರ್ಮೋಪದೇಶಕಾಂಡ 24:12 (KANIRV)
Square Portrait Landscape 4K UHD
ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.

ಧರ್ಮೋಪದೇಶಕಾಂಡ 24:13 (KANIRV)
Square Portrait Landscape 4K UHD
ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

ಧರ್ಮೋಪದೇಶಕಾಂಡ 24:14 (KANIRV)
Square Portrait Landscape 4K UHD
ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ

ಧರ್ಮೋಪದೇಶಕಾಂಡ 24:15 (KANIRV)
Square Portrait Landscape 4K UHD
ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.

ಧರ್ಮೋಪದೇಶಕಾಂಡ 24:16 (KANIRV)
Square Portrait Landscape 4K UHD
ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.

ಧರ್ಮೋಪದೇಶಕಾಂಡ 24:17 (KANIRV)
Square Portrait Landscape 4K UHD
ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.

ಧರ್ಮೋಪದೇಶಕಾಂಡ 24:18 (KANIRV)
Square Portrait Landscape 4K UHD
ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬುವುದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.

ಧರ್ಮೋಪದೇಶಕಾಂಡ 24:19 (KANIRV)
Square Portrait Landscape 4K UHD
ನೀವು ಪೈರುಗಳನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರುವುದಕ್ಕೆ ಹಿಂದಕ್ಕೆ ಹೋಗಬಾರದು; ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಧರ್ಮೋಪದೇಶಕಾಂಡ 24:20 (KANIRV)
Square Portrait Landscape 4K UHD
ಎಣ್ಣೆಯಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.

ಧರ್ಮೋಪದೇಶಕಾಂಡ 24:21 (KANIRV)
Square Portrait Landscape 4K UHD
ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.

ಧರ್ಮೋಪದೇಶಕಾಂಡ 24:22 (KANIRV)
Square Portrait Landscape 4K UHD
ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.

Available Bible Translations

American Standard Version
Deuteronomy 24 (ASV) »
King James Version
Deuteronomy 24 (KJV) »
GOD’S WORD® (GW)
Deuteronomy 24 (GW) »
World English Bible
Deuteronomy 24 (WEB) »
Louis Segond 1910
Deutéronome 24 (LSG) »
इंडियन रिवाइज्ड वर्जन - हिंदी
व्यवस्थाविवरण 24 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਸਤਸਨਾ 24 (PANIRV) »
ভারতীয় সংশোধিত সংস্করণ - বাংলা
দ্বিতীয় বিৱৰণ 24 (BENIRV) »
இந்தியன் ரீவைஸ்டு வேர்ஷன் - தமிழ்
உபாகமம் 24 (TAMIRV) »
इंडियन रिवाइज्ड वर्जन - मराठी
अनुवाद 24 (MARIRV) »
ఇండియన్ రేవిజ్డ్ వెర్షన్ - తెలుగు
ద్వితీయోపదేశ కాండము 24 (TELIRV) »
ઇન્ડિયન રિવાયઝ્ડ વર્ઝન - ગુજરાતી
પુનર્નિયમ 24 (GUJIRV) »
الكتاب المقدس باللغة العربية، فان دايك
اَلتَّثْنِيَة 24 (AVD) »
תנ ך עברי מודרני
דברים 24 (HEB) »
Bíblia Sagrada Português
Deuteronômio 24 (BSL) »
Kinh Thánh: Tiếng Việt
Phục Truyền Luật Lệ 24 (VIE) »
Reina Valera Antigua
Deuteronomio 24 (RVA) »
圣 经 简体中文和合本
申 命 记 24 (CUVS) »
聖 經 繁體中文和合本
申 命 記 24 (CUVT) »
Svenska Bibeln 1917
5 Mosebok 24 (SV1917) »
Библия на русском
Второзаконие 24 (RUSV) »
Українська Біблія
Повторення Закону 24 (UKR) »
Szent Biblia - Magyar
5 Mózes 24 (KAR) »
Българска Библия
Второзаконие 24 (BULG) »
聖書 日本語
申命記 24 (JPN) »
Biblia Takatifu
Torati 24 (SWHULB) »
De Heilige Schrift
Deuteronomium 24 (NLD) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List