ಧರ್ಮೋಪದೇಶಕಾಂಡ Chapter 27 KANIRV Bible Verse Images

ಧರ್ಮೋಪದೇಶಕಾಂಡ 27 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಧರ್ಮೋಪದೇಶಕಾಂಡ 27 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಧರ್ಮೋಪದೇಶಕಾಂಡ 27:1 (KANIRV)
Square Portrait Landscape 4K UHD
ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

ಧರ್ಮೋಪದೇಶಕಾಂಡ 27:2 (KANIRV)
Square Portrait Landscape 4K UHD
ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಧರ್ಮೋಪದೇಶಕಾಂಡ 27:3 (KANIRV)
Square Portrait Landscape 4K UHD
ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.

ಧರ್ಮೋಪದೇಶಕಾಂಡ 27:4 (KANIRV)
Square Portrait Landscape 4K UHD
ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

ಧರ್ಮೋಪದೇಶಕಾಂಡ 27:5 (KANIRV)
Square Portrait Landscape 4K UHD
“ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು.

ಧರ್ಮೋಪದೇಶಕಾಂಡ 27:6 (KANIRV)
Square Portrait Landscape 4K UHD
ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.

ಧರ್ಮೋಪದೇಶಕಾಂಡ 27:7 (KANIRV)
Square Portrait Landscape 4K UHD
ಅಲ್ಲಿ ಸರ್ವಾಂಗಹೋಮಗಳನ್ನೂ ಮತ್ತು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಸಹಭೋಜನಮಾಡಿ, ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.

ಧರ್ಮೋಪದೇಶಕಾಂಡ 27:8 (KANIRV)
Square Portrait Landscape 4K UHD
ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.

ಧರ್ಮೋಪದೇಶಕಾಂಡ 27:9 (KANIRV)
Square Portrait Landscape 4K UHD
ಮೋಶೆ, ಯಾಜಕರು ಮತ್ತು ಲೇವಿಯರೊಡನೆ ಇಸ್ರಾಯೇಲರೆಲ್ಲರಿಗೆ, “ಇಸ್ರಾಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ, ನೀವು ಈಗ ನಿಮ್ಮ ದೇವರಾದ ಯೆಹೋವನ ಜನರಾಗಿದ್ದೀರಷ್ಟೆ.

ಧರ್ಮೋಪದೇಶಕಾಂಡ 27:10 (KANIRV)
Square Portrait Landscape 4K UHD
ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.

ಧರ್ಮೋಪದೇಶಕಾಂಡ 27:11 (KANIRV)
Square Portrait Landscape 4K UHD
ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,

ಧರ್ಮೋಪದೇಶಕಾಂಡ 27:12 (KANIRV)
Square Portrait Landscape 4K UHD
“ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಈ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.

ಧರ್ಮೋಪದೇಶಕಾಂಡ 27:13 (KANIRV)
Square Portrait Landscape 4K UHD
ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.

ಧರ್ಮೋಪದೇಶಕಾಂಡ 27:14 (KANIRV)
Square Portrait Landscape 4K UHD
“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,

ಧರ್ಮೋಪದೇಶಕಾಂಡ 27:15 (KANIRV)
Square Portrait Landscape 4K UHD
‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.

ಧರ್ಮೋಪದೇಶಕಾಂಡ 27:16 (KANIRV)
Square Portrait Landscape 4K UHD
“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:17 (KANIRV)
Square Portrait Landscape 4K UHD
“ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:18 (KANIRV)
Square Portrait Landscape 4K UHD
“ಅವರು, ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:19 (KANIRV)
Square Portrait Landscape 4K UHD
“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:20 (KANIRV)
Square Portrait Landscape 4K UHD
“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:21 (KANIRV)
Square Portrait Landscape 4K UHD
“ಅವರು, ಪಶುಸಂಗಮ ಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:22 (KANIRV)
Square Portrait Landscape 4K UHD
“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:23 (KANIRV)
Square Portrait Landscape 4K UHD
“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:24 (KANIRV)
Square Portrait Landscape 4K UHD
“ಅವರು, ರಹಸ್ಯವಾಗಿ ನರಹತ್ಯಮಾಡಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:25 (KANIRV)
Square Portrait Landscape 4K UHD
“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.

ಧರ್ಮೋಪದೇಶಕಾಂಡ 27:26 (KANIRV)
Square Portrait Landscape 4K UHD
“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

Available Bible Translations

American Standard Version (ASV)
Deuteronomy 27 (ASV) »
King James Version (KJV)
Deuteronomy 27 (KJV) »
GOD’S WORD® (GW)
Deuteronomy 27 (GW) »
Berean Bible (BSB)
Deuteronomy 27 (BSB) »
World English Bible (WEB)
Deuteronomy 27 (WEB) »
French Bible (LSG)
Deutéronome 27 (LSG) »
German Bible (LUTH1912)
Deuteronomium 27 (LUTH1912) »
Hebrew Bible (HEB)
דברים 27 (HEB) »
Portuguese Bible (BSL)
Deuteronômio 27 (BSL) »
Spanish Bible (RVA)
Deuteronomio 27 (RVA) »
Italian Bible (RIV)
Deuteronomio 27 (RIV) »
Chinese Simplified (CUVS)
申 命 记 27 (CUVS) »
Chinese Traditional (CUVT)
申 命 記 27 (CUVT) »
Swedish Bible (SV1917)
5 Mosebok 27 (SV1917) »
Hungarian Bible (KAR)
5 Mózes 27 (KAR) »
Japanese Bible (JPN)
申命記 27 (JPN) »
Norwegian Bible (NORSK)
5 Mosebok 27 (NORSK) »

ಧರ್ಮೋಪದೇಶಕಾಂಡ (KANIRV) Chapter Selection

KANIRV Book Selection List