ಎಫೆಸದವರಿಗೆ Chapter 5 KANIRV Bible Verse Images

ಎಫೆಸದವರಿಗೆ 5 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಎಫೆಸದವರಿಗೆ 5 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಎಫೆಸದವರಿಗೆ 5:1 (KANIRV)
Square Portrait Landscape 4K UHD
ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಎಫೆಸದವರಿಗೆ 5:2 (KANIRV)
Square Portrait Landscape 4K UHD
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಎಫೆಸದವರಿಗೆ 5:3 (KANIRV)
Square Portrait Landscape 4K UHD
ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.

ಎಫೆಸದವರಿಗೆ 5:4 (KANIRV)
Square Portrait Landscape 4K UHD
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಎಫೆಸದವರಿಗೆ 5:5 (KANIRV)
Square Portrait Landscape 4K UHD
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಎಫೆಸದವರಿಗೆ 5:6 (KANIRV)
Square Portrait Landscape 4K UHD
ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.

ಎಫೆಸದವರಿಗೆ 5:7 (KANIRV)
Square Portrait Landscape 4K UHD
ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.

ಎಫೆಸದವರಿಗೆ 5:8 (KANIRV)
Square Portrait Landscape 4K UHD
ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.

ಎಫೆಸದವರಿಗೆ 5:9 (KANIRV)
Square Portrait Landscape 4K UHD
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

ಎಫೆಸದವರಿಗೆ 5:10 (KANIRV)
Square Portrait Landscape 4K UHD
ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

ಎಫೆಸದವರಿಗೆ 5:11 (KANIRV)
Square Portrait Landscape 4K UHD
ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಎಫೆಸದವರಿಗೆ 5:12 (KANIRV)
Square Portrait Landscape 4K UHD
ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

ಎಫೆಸದವರಿಗೆ 5:13 (KANIRV)
Square Portrait Landscape 4K UHD
ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

ಎಫೆಸದವರಿಗೆ 5:14 (KANIRV)
Square Portrait Landscape 4K UHD
ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

ಎಫೆಸದವರಿಗೆ 5:15 (KANIRV)
Square Portrait Landscape 4K UHD
ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

ಎಫೆಸದವರಿಗೆ 5:16 (KANIRV)
Square Portrait Landscape 4K UHD
ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

ಎಫೆಸದವರಿಗೆ 5:17 (KANIRV)
Square Portrait Landscape 4K UHD
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

ಎಫೆಸದವರಿಗೆ 5:18 (KANIRV)
Square Portrait Landscape 4K UHD
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

ಎಫೆಸದವರಿಗೆ 5:19 (KANIRV)
Square Portrait Landscape 4K UHD
ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

ಎಫೆಸದವರಿಗೆ 5:20 (KANIRV)
Square Portrait Landscape 4K UHD
ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ಎಫೆಸದವರಿಗೆ 5:21 (KANIRV)
Square Portrait Landscape 4K UHD
ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಎಫೆಸದವರಿಗೆ 5:22 (KANIRV)
Square Portrait Landscape 4K UHD
ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ಎಫೆಸದವರಿಗೆ 5:23 (KANIRV)
Square Portrait Landscape 4K UHD
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

ಎಫೆಸದವರಿಗೆ 5:24 (KANIRV)
Square Portrait Landscape 4K UHD
ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

ಎಫೆಸದವರಿಗೆ 5:25 (KANIRV)
Square Portrait Landscape 4K UHD
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಎಫೆಸದವರಿಗೆ 5:26 (KANIRV)
Square Portrait Landscape 4K UHD
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಎಫೆಸದವರಿಗೆ 5:27 (KANIRV)
Square Portrait Landscape 4K UHD
ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ಎಫೆಸದವರಿಗೆ 5:28 (KANIRV)
Square Portrait Landscape 4K UHD
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.

ಎಫೆಸದವರಿಗೆ 5:29 (KANIRV)
Square Portrait Landscape 4K UHD
ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.

ಎಫೆಸದವರಿಗೆ 5:30 (KANIRV)
Square Portrait Landscape 4K UHD
ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.

ಎಫೆಸದವರಿಗೆ 5:31 (KANIRV)
Square Portrait Landscape 4K UHD
“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.

ಎಫೆಸದವರಿಗೆ 5:32 (KANIRV)
Square Portrait Landscape 4K UHD
ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.

ಎಫೆಸದವರಿಗೆ 5:33 (KANIRV)
Square Portrait Landscape 4K UHD
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

Available Bible Translations

American Standard Version (ASV)
Ephesians 5 (ASV) »
King James Version (KJV)
Ephesians 5 (KJV) »
GOD’S WORD® (GW)
Ephesians 5 (GW) »
Berean Bible (BSB)
Ephesians 5 (BSB) »
World English Bible (WEB)
Ephesians 5 (WEB) »
French Bible (LSG)
Éphésiens 5 (LSG) »
German Bible (LUTH1912)
Epheser 5 (LUTH1912) »
Arabic Bible (AVD)
أفَسُس 5 (AVD) »
Portuguese Bible (BSL)
Efésios 5 (BSL) »
Vietnamese Bible (VIE)
Ê-phê-sô 5 (VIE) »
Spanish Bible (RVA)
Efesios 5 (RVA) »
Italian Bible (RIV)
Efesini 5 (RIV) »
Chinese Simplified (CUVS)
以 弗 所 书 5 (CUVS) »
Chinese Traditional (CUVT)
以 弗 所 書 5 (CUVT) »
Albanian Bible (ALB)
Efesianëve 5 (ALB) »
Swedish Bible (SV1917)
Efesierbrevet 5 (SV1917) »
Russian Bible (RUSV)
Ефесянам 5 (RUSV) »
Ukrainian Bible (UKR)
ефесян 5 (UKR) »
Hungarian Bible (KAR)
Efézus 5 (KAR) »
Bulgarian Bible (BULG)
Ефесяни 5 (BULG) »
Norwegian Bible (NORSK)
Efeserne 5 (NORSK) »

ಎಫೆಸದವರಿಗೆ (KANIRV) Chapter Selection

1 2 3 4 5 6

KANIRV Book Selection List