ವಿಮೋಚನಕಾಂಡ Chapter 16 KANIRV Bible Verse Images

ವಿಮೋಚನಕಾಂಡ 16 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 16 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 16:1 (KANIRV)
Square Portrait Landscape 4K UHD
ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.

ವಿಮೋಚನಕಾಂಡ 16:2 (KANIRV)
Square Portrait Landscape 4K UHD
ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

ವಿಮೋಚನಕಾಂಡ 16:3 (KANIRV)
Square Portrait Landscape 4K UHD
ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ವಿಮೋಚನಕಾಂಡ 16:4 (KANIRV)
Square Portrait Landscape 4K UHD
ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.

ವಿಮೋಚನಕಾಂಡ 16:5 (KANIRV)
Square Portrait Landscape 4K UHD
ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.

ವಿಮೋಚನಕಾಂಡ 16:6 (KANIRV)
Square Portrait Landscape 4K UHD
ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.

ವಿಮೋಚನಕಾಂಡ 16:7 (KANIRV)
Square Portrait Landscape 4K UHD
ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ವಿಮೋಚನಕಾಂಡ 16:8 (KANIRV)
Square Portrait Landscape 4K UHD
ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.

ವಿಮೋಚನಕಾಂಡ 16:9 (KANIRV)
Square Portrait Landscape 4K UHD
ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.

ವಿಮೋಚನಕಾಂಡ 16:10 (KANIRV)
Square Portrait Landscape 4K UHD
ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.

ವಿಮೋಚನಕಾಂಡ 16:11 (KANIRV)
Square Portrait Landscape 4K UHD
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ವಿಮೋಚನಕಾಂಡ 16:12 (KANIRV)
Square Portrait Landscape 4K UHD
“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.

ವಿಮೋಚನಕಾಂಡ 16:13 (KANIRV)
Square Portrait Landscape 4K UHD
ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.

ವಿಮೋಚನಕಾಂಡ 16:14 (KANIRV)
Square Portrait Landscape 4K UHD
ಆ ಮಂಜು ಕರಗಿ ಹೋದ ಮೇಲೆ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.

ವಿಮೋಚನಕಾಂಡ 16:15 (KANIRV)
Square Portrait Landscape 4K UHD
ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.

ವಿಮೋಚನಕಾಂಡ 16:16 (KANIRV)
Square Portrait Landscape 4K UHD
ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.

ವಿಮೋಚನಕಾಂಡ 16:17 (KANIRV)
Square Portrait Landscape 4K UHD
ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.

ವಿಮೋಚನಕಾಂಡ 16:18 (KANIRV)
Square Portrait Landscape 4K UHD
ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು.

ವಿಮೋಚನಕಾಂಡ 16:19 (KANIRV)
Square Portrait Landscape 4K UHD
ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.

ವಿಮೋಚನಕಾಂಡ 16:20 (KANIRV)
Square Portrait Landscape 4K UHD
ಆದಾಗ್ಯೂ ಅವರು ಮೋಶೆಯ ಮಾತನ್ನು ಕೇಳದೆ, ಅದರಲ್ಲಿ ಸ್ವಲ್ಪವನ್ನು ಮರು ದಿನದವರೆಗೆ ಇಟ್ಟುಕೊಂಡಾಗ ಅದು ಹುಳ ಬಿದ್ದು ಹೊಲಸುವಾಸನೆ ಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಕೋಪಗೊಂಡನು.

ವಿಮೋಚನಕಾಂಡ 16:21 (KANIRV)
Square Portrait Landscape 4K UHD
ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.

ವಿಮೋಚನಕಾಂಡ 16:22 (KANIRV)
Square Portrait Landscape 4K UHD
ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.

ವಿಮೋಚನಕಾಂಡ 16:23 (KANIRV)
Square Portrait Landscape 4K UHD
ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.

ವಿಮೋಚನಕಾಂಡ 16:24 (KANIRV)
Square Portrait Landscape 4K UHD
ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.

ವಿಮೋಚನಕಾಂಡ 16:25 (KANIRV)
Square Portrait Landscape 4K UHD
ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ವಿಮೋಚನಕಾಂಡ 16:26 (KANIRV)
Square Portrait Landscape 4K UHD
ಆರು ದಿನ ಅದನ್ನು ಕೂಡಿಸಿಡಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ” ಎಂದು ಹೇಳಿದನು.

ವಿಮೋಚನಕಾಂಡ 16:27 (KANIRV)
Square Portrait Landscape 4K UHD
ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.

ವಿಮೋಚನಕಾಂಡ 16:28 (KANIRV)
Square Portrait Landscape 4K UHD
ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ವಿಮೋಚನಕಾಂಡ 16:29 (KANIRV)
Square Portrait Landscape 4K UHD
ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.

ವಿಮೋಚನಕಾಂಡ 16:30 (KANIRV)
Square Portrait Landscape 4K UHD
ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು.

ವಿಮೋಚನಕಾಂಡ 16:31 (KANIRV)
Square Portrait Landscape 4K UHD
ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.

ವಿಮೋಚನಕಾಂಡ 16:32 (KANIRV)
Square Portrait Landscape 4K UHD
ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.

ವಿಮೋಚನಕಾಂಡ 16:33 (KANIRV)
Square Portrait Landscape 4K UHD
ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.

ವಿಮೋಚನಕಾಂಡ 16:34 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.

ವಿಮೋಚನಕಾಂಡ 16:35 (KANIRV)
Square Portrait Landscape 4K UHD
ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ವಿಮೋಚನಕಾಂಡ 16:36 (KANIRV)
Square Portrait Landscape 4K UHD
ಓಮೆರ್ ಎಂಬುದು ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಒಂದು ಅಳತೆಯ ಮಾಪನವಾಗಿದೆ.

Available Bible Translations

American Standard Version (ASV)
Exodus 16 (ASV) »
King James Version (KJV)
Exodus 16 (KJV) »
GOD’S WORD® (GW)
Exodus 16 (GW) »
Berean Bible (BSB)
Exodus 16 (BSB) »
World English Bible (WEB)
Exodus 16 (WEB) »
French Bible (LSG)
Exode 16 (LSG) »
German Bible (LUTH1912)
Exodus 16 (LUTH1912) »
Punjabi Bible (PANIRV)
ਖ਼ਰੋਜ 16 (PANIRV) »
Hebrew Bible (HEB)
שמות 16 (HEB) »
Portuguese Bible (BSL)
Êxodo 16 (BSL) »
Vietnamese Bible (VIE)
Xuất Hành 16 (VIE) »
Spanish Bible (RVA)
Éxodo 16 (RVA) »
Italian Bible (RIV)
Esodo 16 (RIV) »
Chinese Simplified (CUVS)
出 埃 及 记 16 (CUVS) »
Chinese Traditional (CUVT)
出 埃 及 記 16 (CUVT) »
Albanian Bible (ALB)
Eksodi 16 (ALB) »
Swedish Bible (SV1917)
2 Mosebok 16 (SV1917) »
Russian Bible (RUSV)
Исход 16 (RUSV) »
Ukrainian Bible (UKR)
Вихід 16 (UKR) »
Hungarian Bible (KAR)
2 Mózes 16 (KAR) »
Bulgarian Bible (BULG)
Изход 16 (BULG) »
Norwegian Bible (NORSK)
2 Mosebok 16 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List