ವಿಮೋಚನಕಾಂಡ Chapter 21 KANIRV Bible Verse Images

ವಿಮೋಚನಕಾಂಡ 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 21:1 (KANIRV)
Square Portrait Landscape 4K UHD
“ಈಗ ನೀನು ಅವರ ಮುಂದೆ ಇಡಬೇಕಾದ ನ್ಯಾಯವಿಧಿಗಳು ಯಾವುದೆಂದರೆ;

ವಿಮೋಚನಕಾಂಡ 21:2 (KANIRV)
Square Portrait Landscape 4K UHD
“‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ವಿಮೋಚನಕಾಂಡ 21:3 (KANIRV)
Square Portrait Landscape 4K UHD
ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.

ವಿಮೋಚನಕಾಂಡ 21:4 (KANIRV)
Square Portrait Landscape 4K UHD
ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.’”

ವಿಮೋಚನಕಾಂಡ 21:5 (KANIRV)
Square Portrait Landscape 4K UHD
ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,

ವಿಮೋಚನಕಾಂಡ 21:6 (KANIRV)
Square Portrait Landscape 4K UHD
ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.

ವಿಮೋಚನಕಾಂಡ 21:7 (KANIRV)
Square Portrait Landscape 4K UHD
ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.

ವಿಮೋಚನಕಾಂಡ 21:8 (KANIRV)
Square Portrait Landscape 4K UHD
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ವಿಮೋಚನಕಾಂಡ 21:9 (KANIRV)
Square Portrait Landscape 4K UHD
ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.

ವಿಮೋಚನಕಾಂಡ 21:10 (KANIRV)
Square Portrait Landscape 4K UHD
ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು.

ವಿಮೋಚನಕಾಂಡ 21:11 (KANIRV)
Square Portrait Landscape 4K UHD
ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.

ವಿಮೋಚನಕಾಂಡ 21:12 (KANIRV)
Square Portrait Landscape 4K UHD
ಮನುಷ್ಯನನ್ನು ಹೊಡೆದು ಕೊಂದವನು ಖಂಡಿತವಾಗಿ ಸಾಯಬೇಕು.

ವಿಮೋಚನಕಾಂಡ 21:13 (KANIRV)
Square Portrait Landscape 4K UHD
ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

ವಿಮೋಚನಕಾಂಡ 21:14 (KANIRV)
Square Portrait Landscape 4K UHD
ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.

ವಿಮೋಚನಕಾಂಡ 21:15 (KANIRV)
Square Portrait Landscape 4K UHD
ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು.

ವಿಮೋಚನಕಾಂಡ 21:16 (KANIRV)
Square Portrait Landscape 4K UHD
ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ವಿಮೋಚನಕಾಂಡ 21:17 (KANIRV)
Square Portrait Landscape 4K UHD
ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.

ವಿಮೋಚನಕಾಂಡ 21:18 (KANIRV)
Square Portrait Landscape 4K UHD
ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,

ವಿಮೋಚನಕಾಂಡ 21:19 (KANIRV)
Square Portrait Landscape 4K UHD
ತರುವಾಯ ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ ಅವನನ್ನು ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಬಾರದು. ಆದರೆ ಪೆಟ್ಟುತಿಂದ ಮನುಷ್ಯನು ಗುಣಹೊಂದುವವರೆಗೂ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.

ವಿಮೋಚನಕಾಂಡ 21:20 (KANIRV)
Square Portrait Landscape 4K UHD
ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು.

ವಿಮೋಚನಕಾಂಡ 21:21 (KANIRV)
Square Portrait Landscape 4K UHD
ಆ ದಾಸನು ಆಗಲೇ ಸಾಯದೆ ಒಂದೆರಡು ದಿನ ಬದುಕಿದ್ದರೆ, ಯಜಮಾನನಿಗೆ ಶಿಕ್ಷೆಯನ್ನು ವಿಧಿಸಕೂಡದು. ಏಕೆಂದರೆ ಆ ದಾಸನು ಅವನ ಸೊತ್ತಾಗಿದ್ದಾನೆ.

ವಿಮೋಚನಕಾಂಡ 21:22 (KANIRV)
Square Portrait Landscape 4K UHD
ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.

ವಿಮೋಚನಕಾಂಡ 21:23 (KANIRV)
Square Portrait Landscape 4K UHD
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.

ವಿಮೋಚನಕಾಂಡ 21:24 (KANIRV)
Square Portrait Landscape 4K UHD
ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,

ವಿಮೋಚನಕಾಂಡ 21:25 (KANIRV)
Square Portrait Landscape 4K UHD
ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.

ವಿಮೋಚನಕಾಂಡ 21:26 (KANIRV)
Square Portrait Landscape 4K UHD
ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.

ವಿಮೋಚನಕಾಂಡ 21:27 (KANIRV)
Square Portrait Landscape 4K UHD
ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.

ವಿಮೋಚನಕಾಂಡ 21:28 (KANIRV)
Square Portrait Landscape 4K UHD
ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ, ತಿವಿದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆದರೆ ಆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.

ವಿಮೋಚನಕಾಂಡ 21:29 (KANIRV)
Square Portrait Landscape 4K UHD
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.

ವಿಮೋಚನಕಾಂಡ 21:30 (KANIRV)
Square Portrait Landscape 4K UHD
ಆದರೆ ಯಜಮಾನನಿಗೆ ಹಣವನ್ನು ನೇಮಿಸಿದರೆ ಅವನು ತನಗೆ ನೇಮಕವಾದ ಹಣವನ್ನು ಕೊಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಿ.

ವಿಮೋಚನಕಾಂಡ 21:31 (KANIRV)
Square Portrait Landscape 4K UHD
ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.

ವಿಮೋಚನಕಾಂಡ 21:32 (KANIRV)
Square Portrait Landscape 4K UHD
ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ವಿಮೋಚನಕಾಂಡ 21:33 (KANIRV)
Square Portrait Landscape 4K UHD
ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,

ವಿಮೋಚನಕಾಂಡ 21:34 (KANIRV)
Square Portrait Landscape 4K UHD
ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.

ವಿಮೋಚನಕಾಂಡ 21:35 (KANIRV)
Square Portrait Landscape 4K UHD
ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು.

ವಿಮೋಚನಕಾಂಡ 21:36 (KANIRV)
Square Portrait Landscape 4K UHD
ಆದರೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ಅದರ ಯಜಮಾನನಿಗೆ ತಿಳಿದಿದ್ದರೂ ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಖಂಡಿತವಾಗಿ ಬದಲು ಕೊಡಬೇಕು. ಆದರೆ ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.

Available Bible Translations

American Standard Version (ASV)
Exodus 21 (ASV) »
King James Version (KJV)
Exodus 21 (KJV) »
GOD’S WORD® (GW)
Exodus 21 (GW) »
Berean Bible (BSB)
Exodus 21 (BSB) »
World English Bible (WEB)
Exodus 21 (WEB) »
French Bible (LSG)
Exode 21 (LSG) »
German Bible (LUTH1912)
Exodus 21 (LUTH1912) »
Punjabi Bible (PANIRV)
ਖ਼ਰੋਜ 21 (PANIRV) »
Hebrew Bible (HEB)
שמות 21 (HEB) »
Portuguese Bible (BSL)
Êxodo 21 (BSL) »
Vietnamese Bible (VIE)
Xuất Hành 21 (VIE) »
Spanish Bible (RVA)
Éxodo 21 (RVA) »
Italian Bible (RIV)
Esodo 21 (RIV) »
Chinese Simplified (CUVS)
出 埃 及 记 21 (CUVS) »
Chinese Traditional (CUVT)
出 埃 及 記 21 (CUVT) »
Albanian Bible (ALB)
Eksodi 21 (ALB) »
Swedish Bible (SV1917)
2 Mosebok 21 (SV1917) »
Russian Bible (RUSV)
Исход 21 (RUSV) »
Ukrainian Bible (UKR)
Вихід 21 (UKR) »
Hungarian Bible (KAR)
2 Mózes 21 (KAR) »
Bulgarian Bible (BULG)
Изход 21 (BULG) »
Norwegian Bible (NORSK)
2 Mosebok 21 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List