ವಿಮೋಚನಕಾಂಡ Chapter 25 KANIRV Bible Verse Images

ವಿಮೋಚನಕಾಂಡ 25 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 25 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 25:1 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ವಿಮೋಚನಕಾಂಡ 25:2 (KANIRV)
Square Portrait Landscape 4K UHD
“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.

ವಿಮೋಚನಕಾಂಡ 25:3 (KANIRV)
Square Portrait Landscape 4K UHD
ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,

ವಿಮೋಚನಕಾಂಡ 25:4 (KANIRV)
Square Portrait Landscape 4K UHD
ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,

ವಿಮೋಚನಕಾಂಡ 25:5 (KANIRV)
Square Portrait Landscape 4K UHD
ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,

ವಿಮೋಚನಕಾಂಡ 25:6 (KANIRV)
Square Portrait Landscape 4K UHD
ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,

ವಿಮೋಚನಕಾಂಡ 25:7 (KANIRV)
Square Portrait Landscape 4K UHD
ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.

ವಿಮೋಚನಕಾಂಡ 25:8 (KANIRV)
Square Portrait Landscape 4K UHD
“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.

ವಿಮೋಚನಕಾಂಡ 25:9 (KANIRV)
Square Portrait Landscape 4K UHD
ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.

ವಿಮೋಚನಕಾಂಡ 25:10 (KANIRV)
Square Portrait Landscape 4K UHD
“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವು ಹಾಗೂ ಒಂದುವರೆ ಮೊಳ ಎತ್ತರವು ಆಗಿರಬೇಕು.

ವಿಮೋಚನಕಾಂಡ 25:11 (KANIRV)
Square Portrait Landscape 4K UHD
ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

ವಿಮೋಚನಕಾಂಡ 25:12 (KANIRV)
Square Portrait Landscape 4K UHD
ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.

ವಿಮೋಚನಕಾಂಡ 25:13 (KANIRV)
Square Portrait Landscape 4K UHD
ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,

ವಿಮೋಚನಕಾಂಡ 25:14 (KANIRV)
Square Portrait Landscape 4K UHD
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.

ವಿಮೋಚನಕಾಂಡ 25:15 (KANIRV)
Square Portrait Landscape 4K UHD
ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.

ವಿಮೋಚನಕಾಂಡ 25:16 (KANIRV)
Square Portrait Landscape 4K UHD
ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.

ವಿಮೋಚನಕಾಂಡ 25:17 (KANIRV)
Square Portrait Landscape 4K UHD
ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.

ವಿಮೋಚನಕಾಂಡ 25:18 (KANIRV)
Square Portrait Landscape 4K UHD
ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.

ವಿಮೋಚನಕಾಂಡ 25:19 (KANIRV)
Square Portrait Landscape 4K UHD
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.

ವಿಮೋಚನಕಾಂಡ 25:20 (KANIRV)
Square Portrait Landscape 4K UHD
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಮತ್ತು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿರುವಂತೆಯೂ ಇರಿಸಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುವಂತಿರಬೇಕು.

ವಿಮೋಚನಕಾಂಡ 25:21 (KANIRV)
Square Portrait Landscape 4K UHD
ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು

ವಿಮೋಚನಕಾಂಡ 25:22 (KANIRV)
Square Portrait Landscape 4K UHD
ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.

ವಿಮೋಚನಕಾಂಡ 25:23 (KANIRV)
Square Portrait Landscape 4K UHD
“ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.

ವಿಮೋಚನಕಾಂಡ 25:24 (KANIRV)
Square Portrait Landscape 4K UHD
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

ವಿಮೋಚನಕಾಂಡ 25:25 (KANIRV)
Square Portrait Landscape 4K UHD
ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡ ಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.

ವಿಮೋಚನಕಾಂಡ 25:26 (KANIRV)
Square Portrait Landscape 4K UHD
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.

ವಿಮೋಚನಕಾಂಡ 25:27 (KANIRV)
Square Portrait Landscape 4K UHD
ಆ ಬಳೆಗಳು ಅಡ್ಡಪಟ್ಟಿಗೆಗೆ ಅಂಟಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.

ವಿಮೋಚನಕಾಂಡ 25:28 (KANIRV)
Square Portrait Landscape 4K UHD
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.

ವಿಮೋಚನಕಾಂಡ 25:29 (KANIRV)
Square Portrait Landscape 4K UHD
ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

ವಿಮೋಚನಕಾಂಡ 25:30 (KANIRV)
Square Portrait Landscape 4K UHD
ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.

ವಿಮೋಚನಕಾಂಡ 25:31 (KANIRV)
Square Portrait Landscape 4K UHD
“ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.

ವಿಮೋಚನಕಾಂಡ 25:32 (KANIRV)
Square Portrait Landscape 4K UHD
ಕಂಬದ ಒಂದೊಂದು ಪಾರ್ಶ್ವದಲ್ಲಿಯೂ ಮೂರು ಮೂರು ಕೊಂಬೆಗಳಂತೆ ಹಾಗೆ ಆರು ಕೊಂಬೆಗಳೂ ಇರಬೇಕು.

ವಿಮೋಚನಕಾಂಡ 25:33 (KANIRV)
Square Portrait Landscape 4K UHD
ಪ್ರತಿಯೊಂದು ಕೊಂಬೆಗಳಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಹೂವುಗಳೂ ಮೊಗ್ಗುಗಳೂ ಇರಬೇಕು. ದೀಪಸ್ತಂಭದಿಂದ ಬರುವ ಆರು ಕೊಂಬೆಗಳನ್ನು ಹಾಗೆಯೇ ಮಾಡಿಸಬೇಕು.

ವಿಮೋಚನಕಾಂಡ 25:34 (KANIRV)
Square Portrait Landscape 4K UHD
ದೀಪಸ್ತಂಭದ ಕಂಬದಲ್ಲಿ ಪುಷ್ಪಗುಚ್ಛಗಳೂ, ಪುಷ್ಪಗಳೂ, ಮೊಗ್ಗುಗಳು ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳೂ ಇರಬೇಕು.

ವಿಮೋಚನಕಾಂಡ 25:35 (KANIRV)
Square Portrait Landscape 4K UHD
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇರಬೇಕು.

ವಿಮೋಚನಕಾಂಡ 25:36 (KANIRV)
Square Portrait Landscape 4K UHD
ಪುಷ್ಪಪಾತ್ರೆಗಳೂ, ಕೊಂಬುಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕ ಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.

ವಿಮೋಚನಕಾಂಡ 25:37 (KANIRV)
Square Portrait Landscape 4K UHD
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.

ವಿಮೋಚನಕಾಂಡ 25:38 (KANIRV)
Square Portrait Landscape 4K UHD
ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

ವಿಮೋಚನಕಾಂಡ 25:39 (KANIRV)
Square Portrait Landscape 4K UHD
ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.

ವಿಮೋಚನಕಾಂಡ 25:40 (KANIRV)
Square Portrait Landscape 4K UHD
ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”

Available Bible Translations

American Standard Version (ASV)
Exodus 25 (ASV) »
King James Version (KJV)
Exodus 25 (KJV) »
GOD’S WORD® (GW)
Exodus 25 (GW) »
Berean Bible (BSB)
Exodus 25 (BSB) »
World English Bible (WEB)
Exodus 25 (WEB) »
French Bible (LSG)
Exode 25 (LSG) »
German Bible (LUTH1912)
Exodus 25 (LUTH1912) »
Punjabi Bible (PANIRV)
ਖ਼ਰੋਜ 25 (PANIRV) »
Hebrew Bible (HEB)
שמות 25 (HEB) »
Portuguese Bible (BSL)
Êxodo 25 (BSL) »
Vietnamese Bible (VIE)
Xuất Hành 25 (VIE) »
Spanish Bible (RVA)
Éxodo 25 (RVA) »
Italian Bible (RIV)
Esodo 25 (RIV) »
Chinese Simplified (CUVS)
出 埃 及 记 25 (CUVS) »
Chinese Traditional (CUVT)
出 埃 及 記 25 (CUVT) »
Albanian Bible (ALB)
Eksodi 25 (ALB) »
Swedish Bible (SV1917)
2 Mosebok 25 (SV1917) »
Russian Bible (RUSV)
Исход 25 (RUSV) »
Ukrainian Bible (UKR)
Вихід 25 (UKR) »
Hungarian Bible (KAR)
2 Mózes 25 (KAR) »
Bulgarian Bible (BULG)
Изход 25 (BULG) »
Norwegian Bible (NORSK)
2 Mosebok 25 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List