ವಿಮೋಚನಕಾಂಡ Chapter 26 KANIRV Bible Verse Images

ವಿಮೋಚನಕಾಂಡ 26 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 26 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 26:1 (KANIRV)
Square Portrait Landscape 4K UHD
ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.

ವಿಮೋಚನಕಾಂಡ 26:2 (KANIRV)
Square Portrait Landscape 4K UHD
ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.

ವಿಮೋಚನಕಾಂಡ 26:3 (KANIRV)
Square Portrait Landscape 4K UHD
ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.

ವಿಮೋಚನಕಾಂಡ 26:4 (KANIRV)
Square Portrait Landscape 4K UHD
ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:5 (KANIRV)
Square Portrait Landscape 4K UHD
ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.

ವಿಮೋಚನಕಾಂಡ 26:6 (KANIRV)
Square Portrait Landscape 4K UHD
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.

ವಿಮೋಚನಕಾಂಡ 26:7 (KANIRV)
Square Portrait Landscape 4K UHD
ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:8 (KANIRV)
Square Portrait Landscape 4K UHD
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.

ವಿಮೋಚನಕಾಂಡ 26:9 (KANIRV)
Square Portrait Landscape 4K UHD
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು.

ವಿಮೋಚನಕಾಂಡ 26:10 (KANIRV)
Square Portrait Landscape 4K UHD
ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:11 (KANIRV)
Square Portrait Landscape 4K UHD
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.

ವಿಮೋಚನಕಾಂಡ 26:12 (KANIRV)
Square Portrait Landscape 4K UHD
ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.

ವಿಮೋಚನಕಾಂಡ 26:13 (KANIRV)
Square Portrait Landscape 4K UHD
ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.

ವಿಮೋಚನಕಾಂಡ 26:14 (KANIRV)
Square Portrait Landscape 4K UHD
ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.

ವಿಮೋಚನಕಾಂಡ 26:15 (KANIRV)
Square Portrait Landscape 4K UHD
ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.

ವಿಮೋಚನಕಾಂಡ 26:16 (KANIRV)
Square Portrait Landscape 4K UHD
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಮತ್ತು ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.

ವಿಮೋಚನಕಾಂಡ 26:17 (KANIRV)
Square Portrait Landscape 4K UHD
ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು.

ವಿಮೋಚನಕಾಂಡ 26:18 (KANIRV)
Square Portrait Landscape 4K UHD
ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.

ವಿಮೋಚನಕಾಂಡ 26:19 (KANIRV)
Square Portrait Landscape 4K UHD
ನಲ್ವತ್ತು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು (ಅಡಿಗಲ್ಲು) ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೆ ಕಲ್ಲು ಇರಬೇಕು.

ವಿಮೋಚನಕಾಂಡ 26:20 (KANIRV)
Square Portrait Landscape 4K UHD
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳು,

ವಿಮೋಚನಕಾಂಡ 26:21 (KANIRV)
Square Portrait Landscape 4K UHD
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆ ಕಲ್ಲುಗಳು ಇರಬೇಕು.

ವಿಮೋಚನಕಾಂಡ 26:22 (KANIRV)
Square Portrait Landscape 4K UHD
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:23 (KANIRV)
Square Portrait Landscape 4K UHD
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:24 (KANIRV)
Square Portrait Landscape 4K UHD
ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.

ವಿಮೋಚನಕಾಂಡ 26:25 (KANIRV)
Square Portrait Landscape 4K UHD
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಬೆಳ್ಳಿಯ ಗದ್ದಿಗೆ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೆ ಕಲ್ಲುಗಳು ಇರಬೇಕು.

ವಿಮೋಚನಕಾಂಡ 26:26 (KANIRV)
Square Portrait Landscape 4K UHD
ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಯ ಚೌಕಟ್ಟುಗಳಿಗೂ,

ವಿಮೋಚನಕಾಂಡ 26:27 (KANIRV)
Square Portrait Landscape 4K UHD
ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.

ವಿಮೋಚನಕಾಂಡ 26:28 (KANIRV)
Square Portrait Landscape 4K UHD
ಚೌಕಟ್ಟುಗಳ ಮಧ್ಯದಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಲುಪುವಂತಿರಬೇಕು.

ವಿಮೋಚನಕಾಂಡ 26:29 (KANIRV)
Square Portrait Landscape 4K UHD
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.

ವಿಮೋಚನಕಾಂಡ 26:30 (KANIRV)
Square Portrait Landscape 4K UHD
ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.

ವಿಮೋಚನಕಾಂಡ 26:31 (KANIRV)
Square Portrait Landscape 4K UHD
ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ವಿಮೋಚನಕಾಂಡ 26:32 (KANIRV)
Square Portrait Landscape 4K UHD
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.

ವಿಮೋಚನಕಾಂಡ 26:33 (KANIRV)
Square Portrait Landscape 4K UHD
ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.

ವಿಮೋಚನಕಾಂಡ 26:34 (KANIRV)
Square Portrait Landscape 4K UHD
ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.

ವಿಮೋಚನಕಾಂಡ 26:35 (KANIRV)
Square Portrait Landscape 4K UHD
ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು.

ವಿಮೋಚನಕಾಂಡ 26:36 (KANIRV)
Square Portrait Landscape 4K UHD
ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.

ವಿಮೋಚನಕಾಂಡ 26:37 (KANIRV)
Square Portrait Landscape 4K UHD
ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.

Available Bible Translations

American Standard Version (ASV)
Exodus 26 (ASV) »
King James Version (KJV)
Exodus 26 (KJV) »
GOD’S WORD® (GW)
Exodus 26 (GW) »
Berean Bible (BSB)
Exodus 26 (BSB) »
World English Bible (WEB)
Exodus 26 (WEB) »
French Bible (LSG)
Exode 26 (LSG) »
German Bible (LUTH1912)
Exodus 26 (LUTH1912) »
Punjabi Bible (PANIRV)
ਖ਼ਰੋਜ 26 (PANIRV) »
Hebrew Bible (HEB)
שמות 26 (HEB) »
Portuguese Bible (BSL)
Êxodo 26 (BSL) »
Vietnamese Bible (VIE)
Xuất Hành 26 (VIE) »
Spanish Bible (RVA)
Éxodo 26 (RVA) »
Italian Bible (RIV)
Esodo 26 (RIV) »
Chinese Simplified (CUVS)
出 埃 及 记 26 (CUVS) »
Chinese Traditional (CUVT)
出 埃 及 記 26 (CUVT) »
Albanian Bible (ALB)
Eksodi 26 (ALB) »
Swedish Bible (SV1917)
2 Mosebok 26 (SV1917) »
Russian Bible (RUSV)
Исход 26 (RUSV) »
Ukrainian Bible (UKR)
Вихід 26 (UKR) »
Hungarian Bible (KAR)
2 Mózes 26 (KAR) »
Bulgarian Bible (BULG)
Изход 26 (BULG) »
Norwegian Bible (NORSK)
2 Mosebok 26 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List