ವಿಮೋಚನಕಾಂಡ Chapter 29 KANIRV Bible Verse Images

ವಿಮೋಚನಕಾಂಡ 29 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 29 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 29:1 (KANIRV)
Square Portrait Landscape 4K UHD
ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.

ವಿಮೋಚನಕಾಂಡ 29:2 (KANIRV)
Square Portrait Landscape 4K UHD
ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ವಿಮೋಚನಕಾಂಡ 29:3 (KANIRV)
Square Portrait Landscape 4K UHD
ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.

ವಿಮೋಚನಕಾಂಡ 29:4 (KANIRV)
Square Portrait Landscape 4K UHD
ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.

ವಿಮೋಚನಕಾಂಡ 29:5 (KANIRV)
Square Portrait Landscape 4K UHD
ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,

ವಿಮೋಚನಕಾಂಡ 29:6 (KANIRV)
Square Portrait Landscape 4K UHD
ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,

ವಿಮೋಚನಕಾಂಡ 29:7 (KANIRV)
Square Portrait Landscape 4K UHD
ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.

ವಿಮೋಚನಕಾಂಡ 29:8 (KANIRV)
Square Portrait Landscape 4K UHD
ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿ

ವಿಮೋಚನಕಾಂಡ 29:9 (KANIRV)
Square Portrait Landscape 4K UHD
ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.

ವಿಮೋಚನಕಾಂಡ 29:10 (KANIRV)
Square Portrait Landscape 4K UHD
ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.

ವಿಮೋಚನಕಾಂಡ 29:11 (KANIRV)
Square Portrait Landscape 4K UHD
ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು.

ವಿಮೋಚನಕಾಂಡ 29:12 (KANIRV)
Square Portrait Landscape 4K UHD
ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು.

ವಿಮೋಚನಕಾಂಡ 29:13 (KANIRV)
Square Portrait Landscape 4K UHD
ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

ವಿಮೋಚನಕಾಂಡ 29:14 (KANIRV)
Square Portrait Landscape 4K UHD
ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.

ವಿಮೋಚನಕಾಂಡ 29:15 (KANIRV)
Square Portrait Landscape 4K UHD
ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ವಿಮೋಚನಕಾಂಡ 29:16 (KANIRV)
Square Portrait Landscape 4K UHD
ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.

ವಿಮೋಚನಕಾಂಡ 29:17 (KANIRV)
Square Portrait Landscape 4K UHD
ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.

ವಿಮೋಚನಕಾಂಡ 29:18 (KANIRV)
Square Portrait Landscape 4K UHD
ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ವಿಮೋಚನಕಾಂಡ 29:19 (KANIRV)
Square Portrait Landscape 4K UHD
ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ವಿಮೋಚನಕಾಂಡ 29:20 (KANIRV)
Square Portrait Landscape 4K UHD
ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.

ವಿಮೋಚನಕಾಂಡ 29:21 (KANIRV)
Square Portrait Landscape 4K UHD
ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.

ವಿಮೋಚನಕಾಂಡ 29:22 (KANIRV)
Square Portrait Landscape 4K UHD
ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,

ವಿಮೋಚನಕಾಂಡ 29:23 (KANIRV)
Square Portrait Landscape 4K UHD
ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,

ವಿಮೋಚನಕಾಂಡ 29:24 (KANIRV)
Square Portrait Landscape 4K UHD
ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.

ವಿಮೋಚನಕಾಂಡ 29:25 (KANIRV)
Square Portrait Landscape 4K UHD
ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.

ವಿಮೋಚನಕಾಂಡ 29:26 (KANIRV)
Square Portrait Landscape 4K UHD
ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.

ವಿಮೋಚನಕಾಂಡ 29:27 (KANIRV)
Square Portrait Landscape 4K UHD
ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ವಿಮೋಚನಕಾಂಡ 29:28 (KANIRV)
Square Portrait Landscape 4K UHD
ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.

ವಿಮೋಚನಕಾಂಡ 29:29 (KANIRV)
Square Portrait Landscape 4K UHD
ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.

ವಿಮೋಚನಕಾಂಡ 29:30 (KANIRV)
Square Portrait Landscape 4K UHD
ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ವಿಮೋಚನಕಾಂಡ 29:31 (KANIRV)
Square Portrait Landscape 4K UHD
ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.

ವಿಮೋಚನಕಾಂಡ 29:32 (KANIRV)
Square Portrait Landscape 4K UHD
ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.

ವಿಮೋಚನಕಾಂಡ 29:33 (KANIRV)
Square Portrait Landscape 4K UHD
ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.

ವಿಮೋಚನಕಾಂಡ 29:34 (KANIRV)
Square Portrait Landscape 4K UHD
ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.

ವಿಮೋಚನಕಾಂಡ 29:35 (KANIRV)
Square Portrait Landscape 4K UHD
ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.

ವಿಮೋಚನಕಾಂಡ 29:36 (KANIRV)
Square Portrait Landscape 4K UHD
ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.

ವಿಮೋಚನಕಾಂಡ 29:37 (KANIRV)
Square Portrait Landscape 4K UHD
ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ವಿಮೋಚನಕಾಂಡ 29:38 (KANIRV)
Square Portrait Landscape 4K UHD
ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ವಿಮೋಚನಕಾಂಡ 29:39 (KANIRV)
Square Portrait Landscape 4K UHD
ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

ವಿಮೋಚನಕಾಂಡ 29:40 (KANIRV)
Square Portrait Landscape 4K UHD
ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ವಿಮೋಚನಕಾಂಡ 29:41 (KANIRV)
Square Portrait Landscape 4K UHD
ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.

ವಿಮೋಚನಕಾಂಡ 29:42 (KANIRV)
Square Portrait Landscape 4K UHD
ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.

ವಿಮೋಚನಕಾಂಡ 29:43 (KANIRV)
Square Portrait Landscape 4K UHD
ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.

ವಿಮೋಚನಕಾಂಡ 29:44 (KANIRV)
Square Portrait Landscape 4K UHD
ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.

ವಿಮೋಚನಕಾಂಡ 29:45 (KANIRV)
Square Portrait Landscape 4K UHD
ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.

ವಿಮೋಚನಕಾಂಡ 29:46 (KANIRV)
Square Portrait Landscape 4K UHD
ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.

Available Bible Translations

American Standard Version
Exodus 29 (ASV) »
King James Version
Exodus 29 (KJV) »
GOD’S WORD® (GW)
Exodus 29 (GW) »
World English Bible
Exodus 29 (WEB) »
Louis Segond 1910
Exode 29 (LSG) »
Luther Bibel 1912
Exodus 29 (LUTH1912) »
इंडियन रिवाइज्ड वर्जन - हिंदी
निर्गमन 29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਖ਼ਰੋਜ 29 (PANIRV) »
ভারতীয় সংশোধিত সংস্করণ - বাংলা
যাত্ৰা 29 (BENIRV) »
இந்தியன் ரீவைஸ்டு வேர்ஷன் - தமிழ்
யாத்திராகமம் 29 (TAMIRV) »
इंडियन रिवाइज्ड वर्जन - मराठी
निर्गम 29 (MARIRV) »
ఇండియన్ రేవిజ్డ్ వెర్షన్ - తెలుగు
నిర్గమకాండం 29 (TELIRV) »
ઇન્ડિયન રિવાયઝ્ડ વર્ઝન - ગુજરાતી
નિર્ગમન 29 (GUJIRV) »
الكتاب المقدس باللغة العربية، فان دايك
اَلْخُرُوجُ 29 (AVD) »
תנ ך עברי מודרני
שמות 29 (HEB) »
Bíblia Sagrada Português
Êxodo 29 (BSL) »
Kinh Thánh: Tiếng Việt
Xuất Hành 29 (VIE) »
Reina Valera Antigua
Éxodo 29 (RVA) »
La Sacra Bibbia
Esodo 29 (RIV) »
圣 经 简体中文和合本
出 埃 及 记 29 (CUVS) »
聖 經 繁體中文和合本
出 埃 及 記 29 (CUVT) »
Bibla e Shenjtë
Eksodi 29 (ALB) »
Svenska Bibeln 1917
2 Mosebok 29 (SV1917) »
Библия на русском
Исход 29 (RUSV) »
Українська Біблія
Вихід 29 (UKR) »
Szent Biblia - Magyar
2 Mózes 29 (KAR) »
Българска Библия
Изход 29 (BULG) »
Biblia Takatifu
Kutoka 29 (SWHULB) »
Kitaabka Quduuska Ah
Baxniintii 29 (SOM) »
De Heilige Schrift
Exodus 29 (NLD) »

ವಿಮೋಚನಕಾಂಡ (KANIRV) Chapter Selection

KANIRV Book Selection List