ವಿಮೋಚನಕಾಂಡ Chapter 30 KANIRV Bible Verse Images

ವಿಮೋಚನಕಾಂಡ 30 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 30 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 30:1 (KANIRV)
Square Portrait Landscape 4K UHD
“ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

ವಿಮೋಚನಕಾಂಡ 30:2 (KANIRV)
Square Portrait Landscape 4K UHD
ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.

ವಿಮೋಚನಕಾಂಡ 30:3 (KANIRV)
Square Portrait Landscape 4K UHD
ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.

ವಿಮೋಚನಕಾಂಡ 30:4 (KANIRV)
Square Portrait Landscape 4K UHD
ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.

ವಿಮೋಚನಕಾಂಡ 30:5 (KANIRV)
Square Portrait Landscape 4K UHD
ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.

ವಿಮೋಚನಕಾಂಡ 30:6 (KANIRV)
Square Portrait Landscape 4K UHD
ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ವಿಮೋಚನಕಾಂಡ 30:7 (KANIRV)
Square Portrait Landscape 4K UHD
“ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ವಿಮೋಚನಕಾಂಡ 30:8 (KANIRV)
Square Portrait Landscape 4K UHD
ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.

ವಿಮೋಚನಕಾಂಡ 30:9 (KANIRV)
Square Portrait Landscape 4K UHD
ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.

ವಿಮೋಚನಕಾಂಡ 30:10 (KANIRV)
Square Portrait Landscape 4K UHD
ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”

ವಿಮೋಚನಕಾಂಡ 30:11 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ವಿಮೋಚನಕಾಂಡ 30:12 (KANIRV)
Square Portrait Landscape 4K UHD
“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.

ವಿಮೋಚನಕಾಂಡ 30:13 (KANIRV)
Square Portrait Landscape 4K UHD
ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ವಿಮೋಚನಕಾಂಡ 30:14 (KANIRV)
Square Portrait Landscape 4K UHD
ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.

ವಿಮೋಚನಕಾಂಡ 30:15 (KANIRV)
Square Portrait Landscape 4K UHD
ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.

ವಿಮೋಚನಕಾಂಡ 30:16 (KANIRV)
Square Portrait Landscape 4K UHD
ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”

ವಿಮೋಚನಕಾಂಡ 30:17 (KANIRV)
Square Portrait Landscape 4K UHD
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ವಿಮೋಚನಕಾಂಡ 30:18 (KANIRV)
Square Portrait Landscape 4K UHD
“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.

ವಿಮೋಚನಕಾಂಡ 30:19 (KANIRV)
Square Portrait Landscape 4K UHD
ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.

ವಿಮೋಚನಕಾಂಡ 30:20 (KANIRV)
Square Portrait Landscape 4K UHD
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.

ವಿಮೋಚನಕಾಂಡ 30:21 (KANIRV)
Square Portrait Landscape 4K UHD
ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”

ವಿಮೋಚನಕಾಂಡ 30:22 (KANIRV)
Square Portrait Landscape 4K UHD
ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,

ವಿಮೋಚನಕಾಂಡ 30:23 (KANIRV)
Square Portrait Landscape 4K UHD
“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,

ವಿಮೋಚನಕಾಂಡ 30:24 (KANIRV)
Square Portrait Landscape 4K UHD
ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,

ವಿಮೋಚನಕಾಂಡ 30:25 (KANIRV)
Square Portrait Landscape 4K UHD
ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.

ವಿಮೋಚನಕಾಂಡ 30:26 (KANIRV)
Square Portrait Landscape 4K UHD
ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,

ವಿಮೋಚನಕಾಂಡ 30:27 (KANIRV)
Square Portrait Landscape 4K UHD
ದೀಪಸ್ತಂಭ, ದೀಪಸ್ತಂಭದ ಉಪಕರಣಗಳು,

ವಿಮೋಚನಕಾಂಡ 30:28 (KANIRV)
Square Portrait Landscape 4K UHD
ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು.

ವಿಮೋಚನಕಾಂಡ 30:29 (KANIRV)
Square Portrait Landscape 4K UHD
ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ವಿಮೋಚನಕಾಂಡ 30:30 (KANIRV)
Square Portrait Landscape 4K UHD
ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.”

ವಿಮೋಚನಕಾಂಡ 30:31 (KANIRV)
Square Portrait Landscape 4K UHD
ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.

ವಿಮೋಚನಕಾಂಡ 30:32 (KANIRV)
Square Portrait Landscape 4K UHD
ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.

ವಿಮೋಚನಕಾಂಡ 30:33 (KANIRV)
Square Portrait Landscape 4K UHD
ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ವಿಮೋಚನಕಾಂಡ 30:34 (KANIRV)
Square Portrait Landscape 4K UHD
ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,

ವಿಮೋಚನಕಾಂಡ 30:35 (KANIRV)
Square Portrait Landscape 4K UHD
ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.

ವಿಮೋಚನಕಾಂಡ 30:36 (KANIRV)
Square Portrait Landscape 4K UHD
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.

ವಿಮೋಚನಕಾಂಡ 30:37 (KANIRV)
Square Portrait Landscape 4K UHD
ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.

ವಿಮೋಚನಕಾಂಡ 30:38 (KANIRV)
Square Portrait Landscape 4K UHD
ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”

Available Bible Translations

American Standard Version (ASV)
Exodus 30 (ASV) »
King James Version (KJV)
Exodus 30 (KJV) »
GOD’S WORD® (GW)
Exodus 30 (GW) »
Berean Bible (BSB)
Exodus 30 (BSB) »
World English Bible (WEB)
Exodus 30 (WEB) »
French Bible (LSG)
Exode 30 (LSG) »
German Bible (LUTH1912)
Exodus 30 (LUTH1912) »
Punjabi Bible (PANIRV)
ਖ਼ਰੋਜ 30 (PANIRV) »
Hebrew Bible (HEB)
שמות 30 (HEB) »
Portuguese Bible (BSL)
Êxodo 30 (BSL) »
Vietnamese Bible (VIE)
Xuất Hành 30 (VIE) »
Spanish Bible (RVA)
Éxodo 30 (RVA) »
Italian Bible (RIV)
Esodo 30 (RIV) »
Chinese Simplified (CUVS)
出 埃 及 记 30 (CUVS) »
Chinese Traditional (CUVT)
出 埃 及 記 30 (CUVT) »
Albanian Bible (ALB)
Eksodi 30 (ALB) »
Swedish Bible (SV1917)
2 Mosebok 30 (SV1917) »
Russian Bible (RUSV)
Исход 30 (RUSV) »
Ukrainian Bible (UKR)
Вихід 30 (UKR) »
Hungarian Bible (KAR)
2 Mózes 30 (KAR) »
Bulgarian Bible (BULG)
Изход 30 (BULG) »
Norwegian Bible (NORSK)
2 Mosebok 30 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List