ವಿಮೋಚನಕಾಂಡ Chapter 36 KANIRV Bible Verse Images

ವಿಮೋಚನಕಾಂಡ 36 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ವಿಮೋಚನಕಾಂಡ 36 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ವಿಮೋಚನಕಾಂಡ 36:1 (KANIRV)
Square Portrait Landscape 4K UHD
“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.

ವಿಮೋಚನಕಾಂಡ 36:2 (KANIRV)
Square Portrait Landscape 4K UHD
ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.

ವಿಮೋಚನಕಾಂಡ 36:3 (KANIRV)
Square Portrait Landscape 4K UHD
ಅವರು ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಇಸ್ರಾಯೇಲ್ಯರು ತಂದಿದ್ದ ಕಾಣಿಕೆಗಳನ್ನೆಲ್ಲಾ ಮೋಶೆಯಿಂದ ಪಡೆದುಕೊಂಡರು. ಇಸ್ರಾಯೇಲರು ಪ್ರತಿದಿನ ಹೊತ್ತಾರೆಯಲ್ಲಿ ಮೋಶೆಯ ಬಳಿಗೆ ಬಂದು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.

ವಿಮೋಚನಕಾಂಡ 36:4 (KANIRV)
Square Portrait Landscape 4K UHD
ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,

ವಿಮೋಚನಕಾಂಡ 36:5 (KANIRV)
Square Portrait Landscape 4K UHD
ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ, “ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾಗಿರುವುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ ಎಂದು” ಹೇಳಿದರು.

ವಿಮೋಚನಕಾಂಡ 36:6 (KANIRV)
Square Portrait Landscape 4K UHD
ಆಗ ಮೋಶೆಯು ಇದನ್ನು ಗಮನಿಸಿ, “ದೇವಮಂದಿರದ ಕೆಲಸಕ್ಕಾಗಿ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಇನ್ನು ಮುಂದೆ ಕಾರ್ಯಗಳನ್ನೂ ಮಾಡಬಾರದು” ಎಂದು ಅಪ್ಪಣೆಮಾಡಿ ಅದನ್ನು ಪಾಳೆಯದಲ್ಲಿ ಪ್ರಕಟಿಸಿದನು. ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.

ವಿಮೋಚನಕಾಂಡ 36:7 (KANIRV)
Square Portrait Landscape 4K UHD
ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು.

ವಿಮೋಚನಕಾಂಡ 36:8 (KANIRV)
Square Portrait Landscape 4K UHD
ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.

ವಿಮೋಚನಕಾಂಡ 36:9 (KANIRV)
Square Portrait Landscape 4K UHD
ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.

ವಿಮೋಚನಕಾಂಡ 36:10 (KANIRV)
Square Portrait Landscape 4K UHD
ಐದೈದು ಪರದೆಗಳನ್ನು ಒಂದೊಂದಾಗಿ ಜೋಡಿಸಿದರು.

ವಿಮೋಚನಕಾಂಡ 36:11 (KANIRV)
Square Portrait Landscape 4K UHD
ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ

ವಿಮೋಚನಕಾಂಡ 36:12 (KANIRV)
Square Portrait Landscape 4K UHD
ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು; ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.

ವಿಮೋಚನಕಾಂಡ 36:13 (KANIRV)
Square Portrait Landscape 4K UHD
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.

ವಿಮೋಚನಕಾಂಡ 36:14 (KANIRV)
Square Portrait Landscape 4K UHD
ಬೆಚಲೇಲನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಉಣ್ಣೆಯ ಹನ್ನೊಂದು ಪರದೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದನು.

ವಿಮೋಚನಕಾಂಡ 36:15 (KANIRV)
Square Portrait Landscape 4K UHD
ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು; ಎಲ್ಲಾ ಪರದೆಗಳೂ ಒಂದೇ ಅಳತೆಯಾಗಿದ್ದವು.

ವಿಮೋಚನಕಾಂಡ 36:16 (KANIRV)
Square Portrait Landscape 4K UHD
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು.

ವಿಮೋಚನಕಾಂಡ 36:17 (KANIRV)
Square Portrait Landscape 4K UHD
ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು.

ವಿಮೋಚನಕಾಂಡ 36:18 (KANIRV)
Square Portrait Landscape 4K UHD
ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.

ವಿಮೋಚನಕಾಂಡ 36:19 (KANIRV)
Square Portrait Landscape 4K UHD
ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.

ವಿಮೋಚನಕಾಂಡ 36:20 (KANIRV)
Square Portrait Landscape 4K UHD
ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.

ವಿಮೋಚನಕಾಂಡ 36:21 (KANIRV)
Square Portrait Landscape 4K UHD
ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;

ವಿಮೋಚನಕಾಂಡ 36:22 (KANIRV)
Square Portrait Landscape 4K UHD
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಿದರು.

ವಿಮೋಚನಕಾಂಡ 36:23 (KANIRV)
Square Portrait Landscape 4K UHD
ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು;

ವಿಮೋಚನಕಾಂಡ 36:24 (KANIRV)
Square Portrait Landscape 4K UHD
ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೆಕಲ್ಲನ್ನು ಇಟ್ಟರು.

ವಿಮೋಚನಕಾಂಡ 36:25 (KANIRV)
Square Portrait Landscape 4K UHD
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು

ವಿಮೋಚನಕಾಂಡ 36:26 (KANIRV)
Square Portrait Landscape 4K UHD
ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೆಕಲ್ಲುಗಳ ಮೇರೆಗೆ ನಲ್ವತ್ತು ಬೆಳ್ಳಿಯ ಗದ್ದಿಗೆಕಲ್ಲಗಳನ್ನು ಮಾಡಿದರು.

ವಿಮೋಚನಕಾಂಡ 36:27 (KANIRV)
Square Portrait Landscape 4K UHD
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.

ವಿಮೋಚನಕಾಂಡ 36:28 (KANIRV)
Square Portrait Landscape 4K UHD
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.

ವಿಮೋಚನಕಾಂಡ 36:29 (KANIRV)
Square Portrait Landscape 4K UHD
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯವರೆಗೂ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.

ವಿಮೋಚನಕಾಂಡ 36:30 (KANIRV)
Square Portrait Landscape 4K UHD
ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೆಕಲ್ಲುಗಳೂ ಒಟ್ಟು ಹದಿನಾರು ಗದ್ದಿಗೆಕಲ್ಲುಗಳಿದ್ದವು.

ವಿಮೋಚನಕಾಂಡ 36:31 (KANIRV)
Square Portrait Landscape 4K UHD
ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.

ವಿಮೋಚನಕಾಂಡ 36:32 (KANIRV)
Square Portrait Landscape 4K UHD
ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.

ವಿಮೋಚನಕಾಂಡ 36:33 (KANIRV)
Square Portrait Landscape 4K UHD
ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.

ವಿಮೋಚನಕಾಂಡ 36:34 (KANIRV)
Square Portrait Landscape 4K UHD
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.

ವಿಮೋಚನಕಾಂಡ 36:35 (KANIRV)
Square Portrait Landscape 4K UHD
ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.

ವಿಮೋಚನಕಾಂಡ 36:36 (KANIRV)
Square Portrait Landscape 4K UHD
ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.

ವಿಮೋಚನಕಾಂಡ 36:37 (KANIRV)
Square Portrait Landscape 4K UHD
ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.

ವಿಮೋಚನಕಾಂಡ 36:38 (KANIRV)
Square Portrait Landscape 4K UHD
ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.

Available Bible Translations

American Standard Version (ASV)
Exodus 36 (ASV) »
King James Version (KJV)
Exodus 36 (KJV) »
GOD’S WORD® (GW)
Exodus 36 (GW) »
Berean Bible (BSB)
Exodus 36 (BSB) »
World English Bible (WEB)
Exodus 36 (WEB) »
French Bible (LSG)
Exode 36 (LSG) »
German Bible (LUTH1912)
Exodus 36 (LUTH1912) »
Punjabi Bible (PANIRV)
ਖ਼ਰੋਜ 36 (PANIRV) »
Hebrew Bible (HEB)
שמות 36 (HEB) »
Portuguese Bible (BSL)
Êxodo 36 (BSL) »
Vietnamese Bible (VIE)
Xuất Hành 36 (VIE) »
Spanish Bible (RVA)
Éxodo 36 (RVA) »
Italian Bible (RIV)
Esodo 36 (RIV) »
Chinese Simplified (CUVS)
出 埃 及 记 36 (CUVS) »
Chinese Traditional (CUVT)
出 埃 及 記 36 (CUVT) »
Albanian Bible (ALB)
Eksodi 36 (ALB) »
Swedish Bible (SV1917)
2 Mosebok 36 (SV1917) »
Russian Bible (RUSV)
Исход 36 (RUSV) »
Ukrainian Bible (UKR)
Вихід 36 (UKR) »
Hungarian Bible (KAR)
2 Mózes 36 (KAR) »
Bulgarian Bible (BULG)
Изход 36 (BULG) »
Norwegian Bible (NORSK)
2 Mosebok 36 (NORSK) »

ವಿಮೋಚನಕಾಂಡ (KANIRV) Chapter Selection

KANIRV Book Selection List