ಯೆಹೆಜ್ಕೇಲನು Chapter 11 KANIRV Bible Verse Images

ಯೆಹೆಜ್ಕೇಲನು 11 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆಹೆಜ್ಕೇಲನು 11 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆಹೆಜ್ಕೇಲನು 11:1 (KANIRV)
Square Portrait Landscape 4K UHD
ಆ ಮೇಲೆ ದೇವರಾತ್ಮವು ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು; ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು; ಅವರ ಮಧ್ಯದಲ್ಲಿ ಅಜ್ಜೂರನ ಮಗನಾದ ಯಾಜನ್ಯ, ಬೆನಾಯನ ಮಗನಾದ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.

ಯೆಹೆಜ್ಕೇಲನು 11:2 (KANIRV)
Square Portrait Landscape 4K UHD
ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.

ಯೆಹೆಜ್ಕೇಲನು 11:3 (KANIRV)
Square Portrait Landscape 4K UHD
ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.

ಯೆಹೆಜ್ಕೇಲನು 11:4 (KANIRV)
Square Portrait Landscape 4K UHD
ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಅಹಿತವನ್ನು ನುಡಿ, ತಪ್ಪದೆ ನುಡಿ” ಎಂದು ಆಜ್ಞಾಪಿಸಿದನು.

ಯೆಹೆಜ್ಕೇಲನು 11:5 (KANIRV)
Square Portrait Landscape 4K UHD
ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.

ಯೆಹೆಜ್ಕೇಲನು 11:6 (KANIRV)
Square Portrait Landscape 4K UHD
ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.

ಯೆಹೆಜ್ಕೇಲನು 11:7 (KANIRV)
Square Portrait Landscape 4K UHD
“ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.

ಯೆಹೆಜ್ಕೇಲನು 11:8 (KANIRV)
Square Portrait Landscape 4K UHD
ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.

ಯೆಹೆಜ್ಕೇಲನು 11:9 (KANIRV)
Square Portrait Landscape 4K UHD
“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.

ಯೆಹೆಜ್ಕೇಲನು 11:10 (KANIRV)
Square Portrait Landscape 4K UHD
ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಯೆಹೆಜ್ಕೇಲನು 11:11 (KANIRV)
Square Portrait Landscape 4K UHD
ಈ ಪಟ್ಟಣವು ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿನ ಮಾಂಸವಾಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು.

ಯೆಹೆಜ್ಕೇಲನು 11:12 (KANIRV)
Square Portrait Landscape 4K UHD
“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”

ಯೆಹೆಜ್ಕೇಲನು 11:13 (KANIRV)
Square Portrait Landscape 4K UHD
ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗನಾದ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ, “ಅಯ್ಯೋ, ಕರ್ತನಾದ ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲಮಾಡುವಿಯೋ?” ಎಂದು ಮೊರೆಯಿಟ್ಟೆನು.

ಯೆಹೆಜ್ಕೇಲನು 11:14 (KANIRV)
Square Portrait Landscape 4K UHD
ಆಗ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,

ಯೆಹೆಜ್ಕೇಲನು 11:15 (KANIRV)
Square Portrait Landscape 4K UHD
“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.

ಯೆಹೆಜ್ಕೇಲನು 11:16 (KANIRV)
Square Portrait Landscape 4K UHD
“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’

ಯೆಹೆಜ್ಕೇಲನು 11:17 (KANIRV)
Square Portrait Landscape 4K UHD
“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’

ಯೆಹೆಜ್ಕೇಲನು 11:18 (KANIRV)
Square Portrait Landscape 4K UHD
ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಯೆಹೆಜ್ಕೇಲನು 11:19 (KANIRV)
Square Portrait Landscape 4K UHD
“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಯೆಹೆಜ್ಕೇಲನು 11:20 (KANIRV)
Square Portrait Landscape 4K UHD
ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.

ಯೆಹೆಜ್ಕೇಲನು 11:21 (KANIRV)
Square Portrait Landscape 4K UHD
ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.

ಯೆಹೆಜ್ಕೇಲನು 11:22 (KANIRV)
Square Portrait Landscape 4K UHD
ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.

ಯೆಹೆಜ್ಕೇಲನು 11:23 (KANIRV)
Square Portrait Landscape 4K UHD
ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.

ಯೆಹೆಜ್ಕೇಲನು 11:24 (KANIRV)
Square Portrait Landscape 4K UHD
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.

ಯೆಹೆಜ್ಕೇಲನು 11:25 (KANIRV)
Square Portrait Landscape 4K UHD
ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.

Available Bible Translations

American Standard Version (ASV)
Ezekiel 11 (ASV) »
King James Version (KJV)
Ezekiel 11 (KJV) »
GOD’S WORD® (GW)
Ezekiel 11 (GW) »
Berean Bible (BSB)
Ezekiel 11 (BSB) »
World English Bible (WEB)
Ezekiel 11 (WEB) »
French Bible (LSG)
Ézéchiel 11 (LSG) »
German Bible (LUTH1912)
Hesekiel 11 (LUTH1912) »
Hebrew Bible (HEB)
יחזקאל 11 (HEB) »
Portuguese Bible (BSL)
Ezequiel 11 (BSL) »
Vietnamese Bible (VIE)
Ê-xê-ki-ên 11 (VIE) »
Spanish Bible (RVA)
Ezequiel 11 (RVA) »
Italian Bible (RIV)
Ezechiele 11 (RIV) »
Chinese Simplified (CUVS)
以 西 结 书 11 (CUVS) »
Chinese Traditional (CUVT)
以 西 結 書 11 (CUVT) »
Albanian Bible (ALB)
Ezekieli 11 (ALB) »
Swedish Bible (SV1917)
Hesekiel 11 (SV1917) »
Ukrainian Bible (UKR)
Єзекіїль 11 (UKR) »
Hungarian Bible (KAR)
Ezékiel 11 (KAR) »
Bulgarian Bible (BULG)
Езекил 11 (BULG) »
Norwegian Bible (NORSK)
Esekiel 11 (NORSK) »

ಯೆಹೆಜ್ಕೇಲನು (KANIRV) Chapter Selection

KANIRV Book Selection List