ಯೆಹೆಜ್ಕೇಲನು Chapter 21 KANIRV Bible Verse Images

ಯೆಹೆಜ್ಕೇಲನು 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆಹೆಜ್ಕೇಲನು 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆಹೆಜ್ಕೇಲನು 21:1 (KANIRV)
Square Portrait Landscape 4K UHD
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಯೆಹೆಜ್ಕೇಲನು 21:2 (KANIRV)
Square Portrait Landscape 4K UHD
“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,

ಯೆಹೆಜ್ಕೇಲನು 21:3 (KANIRV)
Square Portrait Landscape 4K UHD
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.

ಯೆಹೆಜ್ಕೇಲನು 21:4 (KANIRV)
Square Portrait Landscape 4K UHD
ನಾನು ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗವು ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರದವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು.

ಯೆಹೆಜ್ಕೇಲನು 21:5 (KANIRV)
Square Portrait Landscape 4K UHD
ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”

ಯೆಹೆಜ್ಕೇಲನು 21:6 (KANIRV)
Square Portrait Landscape 4K UHD
“ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.

ಯೆಹೆಜ್ಕೇಲನು 21:7 (KANIRV)
Square Portrait Landscape 4K UHD
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”

ಯೆಹೆಜ್ಕೇಲನು 21:8 (KANIRV)
Square Portrait Landscape 4K UHD
ಆ ಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಯೆಹೆಜ್ಕೇಲನು 21:9 (KANIRV)
Square Portrait Landscape 4K UHD
“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!

ಯೆಹೆಜ್ಕೇಲನು 21:10 (KANIRV)
Square Portrait Landscape 4K UHD
ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?

ಯೆಹೆಜ್ಕೇಲನು 21:11 (KANIRV)
Square Portrait Landscape 4K UHD
ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.

ಯೆಹೆಜ್ಕೇಲನು 21:12 (KANIRV)
Square Portrait Landscape 4K UHD
ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”

ಯೆಹೆಜ್ಕೇಲನು 21:13 (KANIRV)
Square Portrait Landscape 4K UHD
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಶೋಧನೆಯು ಸಂಭವಿಸಿತು; ತಿರಸ್ಕರಿಸುತ್ತಿದ್ದ ರಾಜದಂಡವೇ ನಾಶವಾದರೆ ಗತಿಯೇನು?

ಯೆಹೆಜ್ಕೇಲನು 21:14 (KANIRV)
Square Portrait Landscape 4K UHD
ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!

ಯೆಹೆಜ್ಕೇಲನು 21:15 (KANIRV)
Square Portrait Landscape 4K UHD
ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!

ಯೆಹೆಜ್ಕೇಲನು 21:16 (KANIRV)
Square Portrait Landscape 4K UHD
ಖಡ್ಗವೇ, ಏಕಾಗ್ರವಾಗಿ ಬಲಕ್ಕೆ ಹೋಗು, ಸಿದ್ಧವಾಗಿ ಎಡಕ್ಕೆ ಸಾಗು, ನಿನ್ನ ಖಡ್ಗದ ಮೊನೆಯಿದ್ದ ಕಡೆಗೇ ಹೊರಡು.

ಯೆಹೆಜ್ಕೇಲನು 21:17 (KANIRV)
Square Portrait Landscape 4K UHD
ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”

ಯೆಹೆಜ್ಕೇಲನು 21:18 (KANIRV)
Square Portrait Landscape 4K UHD
ಯೆಹೋವನು ನನಗೆ ಮತ್ತೊಂದು ವಾಕ್ಯವನ್ನು ದಯಪಾಲಿಸಿದನು,

ಯೆಹೆಜ್ಕೇಲನು 21:19 (KANIRV)
Square Portrait Landscape 4K UHD
“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.

ಯೆಹೆಜ್ಕೇಲನು 21:20 (KANIRV)
Square Portrait Landscape 4K UHD
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.

ಯೆಹೆಜ್ಕೇಲನು 21:21 (KANIRV)
Square Portrait Landscape 4K UHD
“ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಯೆಹೆಜ್ಕೇಲನು 21:22 (KANIRV)
Square Portrait Landscape 4K UHD
ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

ಯೆಹೆಜ್ಕೇಲನು 21:23 (KANIRV)
Square Portrait Landscape 4K UHD
ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸವಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವನು ಅವರ ಅಧರ್ಮವನ್ನು ಬಯಲಿಗೆ ತರಲು ಅವನ ಕೈಗೆ ಸಿಕ್ಕಿಬೀಳುವರು.”

ಯೆಹೆಜ್ಕೇಲನು 21:24 (KANIRV)
Square Portrait Landscape 4K UHD
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.

ಯೆಹೆಜ್ಕೇಲನು 21:25 (KANIRV)
Square Portrait Landscape 4K UHD
ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”

ಯೆಹೆಜ್ಕೇಲನು 21:26 (KANIRV)
Square Portrait Landscape 4K UHD
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.

ಯೆಹೆಜ್ಕೇಲನು 21:27 (KANIRV)
Square Portrait Landscape 4K UHD
ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”

ಯೆಹೆಜ್ಕೇಲನು 21:28 (KANIRV)
Square Portrait Landscape 4K UHD
ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.

ಯೆಹೆಜ್ಕೇಲನು 21:29 (KANIRV)
Square Portrait Landscape 4K UHD
ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.

ಯೆಹೆಜ್ಕೇಲನು 21:30 (KANIRV)
Square Portrait Landscape 4K UHD
“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.

ಯೆಹೆಜ್ಕೇಲನು 21:31 (KANIRV)
Square Portrait Landscape 4K UHD
ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಯೆಹೆಜ್ಕೇಲನು 21:32 (KANIRV)
Square Portrait Landscape 4K UHD
ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

Available Bible Translations

American Standard Version (ASV)
Ezekiel 21 (ASV) »
King James Version (KJV)
Ezekiel 21 (KJV) »
GOD’S WORD® (GW)
Ezekiel 21 (GW) »
Berean Bible (BSB)
Ezekiel 21 (BSB) »
World English Bible (WEB)
Ezekiel 21 (WEB) »
French Bible (LSG)
Ézéchiel 21 (LSG) »
German Bible (LUTH1912)
Hesekiel 21 (LUTH1912) »
Hebrew Bible (HEB)
יחזקאל 21 (HEB) »
Portuguese Bible (BSL)
Ezequiel 21 (BSL) »
Vietnamese Bible (VIE)
Ê-xê-ki-ên 21 (VIE) »
Spanish Bible (RVA)
Ezequiel 21 (RVA) »
Italian Bible (RIV)
Ezechiele 21 (RIV) »
Chinese Simplified (CUVS)
以 西 结 书 21 (CUVS) »
Chinese Traditional (CUVT)
以 西 結 書 21 (CUVT) »
Albanian Bible (ALB)
Ezekieli 21 (ALB) »
Swedish Bible (SV1917)
Hesekiel 21 (SV1917) »
Ukrainian Bible (UKR)
Єзекіїль 21 (UKR) »
Hungarian Bible (KAR)
Ezékiel 21 (KAR) »
Bulgarian Bible (BULG)
Езекил 21 (BULG) »
Norwegian Bible (NORSK)
Esekiel 21 (NORSK) »

ಯೆಹೆಜ್ಕೇಲನು (KANIRV) Chapter Selection

KANIRV Book Selection List