ಗಲಾತ್ಯದವರಿಗೆ Chapter 4 KANIRV Bible Verse Images

ಗಲಾತ್ಯದವರಿಗೆ 4 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಗಲಾತ್ಯದವರಿಗೆ 4 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಗಲಾತ್ಯದವರಿಗೆ 4:1 (KANIRV)
Square Portrait Landscape 4K UHD
ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.

ಗಲಾತ್ಯದವರಿಗೆ 4:2 (KANIRV)
Square Portrait Landscape 4K UHD
ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.

ಗಲಾತ್ಯದವರಿಗೆ 4:3 (KANIRV)
Square Portrait Landscape 4K UHD
ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು.

ಗಲಾತ್ಯದವರಿಗೆ 4:4 (KANIRV)
Square Portrait Landscape 4K UHD
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ಗಲಾತ್ಯದವರಿಗೆ 4:5 (KANIRV)
Square Portrait Landscape 4K UHD
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ಗಲಾತ್ಯದವರಿಗೆ 4:6 (KANIRV)
Square Portrait Landscape 4K UHD
ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.

ಗಲಾತ್ಯದವರಿಗೆ 4:7 (KANIRV)
Square Portrait Landscape 4K UHD
ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.

ಗಲಾತ್ಯದವರಿಗೆ 4:8 (KANIRV)
Square Portrait Landscape 4K UHD
ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.

ಗಲಾತ್ಯದವರಿಗೆ 4:9 (KANIRV)
Square Portrait Landscape 4K UHD
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?

ಗಲಾತ್ಯದವರಿಗೆ 4:10 (KANIRV)
Square Portrait Landscape 4K UHD
ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.

ಗಲಾತ್ಯದವರಿಗೆ 4:11 (KANIRV)
Square Portrait Landscape 4K UHD
ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.

ಗಲಾತ್ಯದವರಿಗೆ 4:12 (KANIRV)
Square Portrait Landscape 4K UHD
ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.

ಗಲಾತ್ಯದವರಿಗೆ 4:13 (KANIRV)
Square Portrait Landscape 4K UHD
ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

ಗಲಾತ್ಯದವರಿಗೆ 4:14 (KANIRV)
Square Portrait Landscape 4K UHD
ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.

ಗಲಾತ್ಯದವರಿಗೆ 4:15 (KANIRV)
Square Portrait Landscape 4K UHD
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.

ಗಲಾತ್ಯದವರಿಗೆ 4:16 (KANIRV)
Square Portrait Landscape 4K UHD
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?

ಗಲಾತ್ಯದವರಿಗೆ 4:17 (KANIRV)
Square Portrait Landscape 4K UHD
ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ.

ಗಲಾತ್ಯದವರಿಗೆ 4:18 (KANIRV)
Square Portrait Landscape 4K UHD
ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.

ಗಲಾತ್ಯದವರಿಗೆ 4:19 (KANIRV)
Square Portrait Landscape 4K UHD
ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.

ಗಲಾತ್ಯದವರಿಗೆ 4:20 (KANIRV)
Square Portrait Landscape 4K UHD
ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!

ಗಲಾತ್ಯದವರಿಗೆ 4:21 (KANIRV)
Square Portrait Landscape 4K UHD
ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಗಲಾತ್ಯದವರಿಗೆ 4:22 (KANIRV)
Square Portrait Landscape 4K UHD
ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನು ದಾಸಿಯಲ್ಲಿ ಹುಟ್ಟಿದವನು, ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.

ಗಲಾತ್ಯದವರಿಗೆ 4:23 (KANIRV)
Square Portrait Landscape 4K UHD
ದಾಸಿಯ ಮಗನು ಶರೀರಕ್ಕನುಸಾರವಾಗಿ ಹುಟ್ಟಿದವನು, ಸ್ವತಂತ್ರಳಾದವಳ ಮಗನಾದರೋ ವಾಗ್ದಾನದ ಮೂಲಕ ಹುಟ್ಟಿದವನು.

ಗಲಾತ್ಯದವರಿಗೆ 4:24 (KANIRV)
Square Portrait Landscape 4K UHD
ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.

ಗಲಾತ್ಯದವರಿಗೆ 4:25 (KANIRV)
Square Portrait Landscape 4K UHD
ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.

ಗಲಾತ್ಯದವರಿಗೆ 4:26 (KANIRV)
Square Portrait Landscape 4K UHD
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.

ಗಲಾತ್ಯದವರಿಗೆ 4:27 (KANIRV)
Square Portrait Landscape 4K UHD
“ಹೆರದ ಬಂಜೆಯೇ, ಆನಂದಿಸು. ಪ್ರಸವವೇದನೆಯಿಲ್ಲದವಳೇ, ಹರ್ಷೋದ್ಗಾರಮಾಡು, ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಬರೆದಿದೆಯಲ್ಲಾ.

ಗಲಾತ್ಯದವರಿಗೆ 4:28 (KANIRV)
Square Portrait Landscape 4K UHD
ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.

ಗಲಾತ್ಯದವರಿಗೆ 4:29 (KANIRV)
Square Portrait Landscape 4K UHD
ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.

ಗಲಾತ್ಯದವರಿಗೆ 4:30 (KANIRV)
Square Portrait Landscape 4K UHD
ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ.

ಗಲಾತ್ಯದವರಿಗೆ 4:31 (KANIRV)
Square Portrait Landscape 4K UHD
ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ.

Available Bible Translations

American Standard Version (ASV)
Galatians 4 (ASV) »
King James Version (KJV)
Galatians 4 (KJV) »
GOD’S WORD® (GW)
Galatians 4 (GW) »
Berean Bible (BSB)
Galatians 4 (BSB) »
World English Bible (WEB)
Galatians 4 (WEB) »
French Bible (LSG)
Galates 4 (LSG) »
German Bible (LUTH1912)
Galater 4 (LUTH1912) »
Portuguese Bible (BSL)
Gálatas 4 (BSL) »
Vietnamese Bible (VIE)
Ga-la-ti 4 (VIE) »
Spanish Bible (RVA)
Gálatas 4 (RVA) »
Italian Bible (RIV)
Galati 4 (RIV) »
Chinese Simplified (CUVS)
加 拉 太 书 4 (CUVS) »
Chinese Traditional (CUVT)
加 拉 太 書 4 (CUVT) »
Albanian Bible (ALB)
Galatasve 4 (ALB) »
Swedish Bible (SV1917)
Galaterbrevet 4 (SV1917) »
Russian Bible (RUSV)
Галатам 4 (RUSV) »
Ukrainian Bible (UKR)
галатів 4 (UKR) »
Hungarian Bible (KAR)
Galátzia 4 (KAR) »
Bulgarian Bible (BULG)
Галатяни 4 (BULG) »
Norwegian Bible (NORSK)
Galaterne 4 (NORSK) »

ಗಲಾತ್ಯದವರಿಗೆ (KANIRV) Chapter Selection

1 2 3 4 5 6

KANIRV Book Selection List