ಆದಿಕಾಂಡ Chapter 18 KANIRV Bible Verse Images

ಆದಿಕಾಂಡ 18 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಆದಿಕಾಂಡ 18 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಆದಿಕಾಂಡ 18:1 (KANIRV)
Square Portrait Landscape 4K UHD
ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು.

ಆದಿಕಾಂಡ 18:2 (KANIRV)
Square Portrait Landscape 4K UHD
ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.

ಆದಿಕಾಂಡ 18:3 (KANIRV)
Square Portrait Landscape 4K UHD
“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.

ಆದಿಕಾಂಡ 18:4 (KANIRV)
Square Portrait Landscape 4K UHD
ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.

ಆದಿಕಾಂಡ 18:5 (KANIRV)
Square Portrait Landscape 4K UHD
ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.

ಆದಿಕಾಂಡ 18:6 (KANIRV)
Square Portrait Landscape 4K UHD
ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.

ಆದಿಕಾಂಡ 18:7 (KANIRV)
Square Portrait Landscape 4K UHD
ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.

ಆದಿಕಾಂಡ 18:8 (KANIRV)
Square Portrait Landscape 4K UHD
ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು.

ಆದಿಕಾಂಡ 18:9 (KANIRV)
Square Portrait Landscape 4K UHD
ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಆದಿಕಾಂಡ 18:10 (KANIRV)
Square Portrait Landscape 4K UHD
ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಆದಿಕಾಂಡ 18:11 (KANIRV)
Square Portrait Landscape 4K UHD
ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.

ಆದಿಕಾಂಡ 18:12 (KANIRV)
Square Portrait Landscape 4K UHD
ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.

ಆದಿಕಾಂಡ 18:13 (KANIRV)
Square Portrait Landscape 4K UHD
ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು?

ಆದಿಕಾಂಡ 18:14 (KANIRV)
Square Portrait Landscape 4K UHD
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.

ಆದಿಕಾಂಡ 18:15 (KANIRV)
Square Portrait Landscape 4K UHD
ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ಆದಿಕಾಂಡ 18:16 (KANIRV)
Square Portrait Landscape 4K UHD
ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.

ಆದಿಕಾಂಡ 18:17 (KANIRV)
Square Portrait Landscape 4K UHD
ಆಗ ಯೆಹೋವನು ತನ್ನೊಳಗೆ, “ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವುದು ಸರಿಯೋ?

ಆದಿಕಾಂಡ 18:18 (KANIRV)
Square Portrait Landscape 4K UHD
ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;

ಆದಿಕಾಂಡ 18:19 (KANIRV)
Square Portrait Landscape 4K UHD
ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಆದಿಕಾಂಡ 18:20 (KANIRV)
Square Portrait Landscape 4K UHD
ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,

ಆದಿಕಾಂಡ 18:21 (KANIRV)
Square Portrait Landscape 4K UHD
ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.

ಆದಿಕಾಂಡ 18:22 (KANIRV)
Square Portrait Landscape 4K UHD
ಆ ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು; ಆದರೆ ಅಬ್ರಹಾಮನು ಯೆಹೋವನಿಗೆ ಎದುರಾಗಿ ಇನ್ನೂ ನಿಂತುಕೊಂಡಿದ್ದನು.

ಆದಿಕಾಂಡ 18:23 (KANIRV)
Square Portrait Landscape 4K UHD
ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

ಆದಿಕಾಂಡ 18:24 (KANIRV)
Square Portrait Landscape 4K UHD
ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?

ಆದಿಕಾಂಡ 18:25 (KANIRV)
Square Portrait Landscape 4K UHD
ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಆದಿಕಾಂಡ 18:26 (KANIRV)
Square Portrait Landscape 4K UHD
ಯೆಹೋವನು, “ಸೊದೋಮನಲ್ಲಿ ಐವತ್ತು ಮಂದಿ ನೀತಿವಂತರು ನನಗೆ ಸಿಕ್ಕಿದರೆ ಅವರ ನಿಮಿತ್ತ ಪಟ್ಟಣವನ್ನೆಲ್ಲಾ ಉಳಿಸುವೆನು” ಎಂದನು.

ಆದಿಕಾಂಡ 18:27 (KANIRV)
Square Portrait Landscape 4K UHD
ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;

ಆದಿಕಾಂಡ 18:28 (KANIRV)
Square Portrait Landscape 4K UHD
ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಆದಿಕಾಂಡ 18:29 (KANIRV)
Square Portrait Landscape 4K UHD
ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.

ಆದಿಕಾಂಡ 18:30 (KANIRV)
Square Portrait Landscape 4K UHD
ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಆದಿಕಾಂಡ 18:31 (KANIRV)
Square Portrait Landscape 4K UHD
ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.

ಆದಿಕಾಂಡ 18:32 (KANIRV)
Square Portrait Landscape 4K UHD
ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

ಆದಿಕಾಂಡ 18:33 (KANIRV)
Square Portrait Landscape 4K UHD
ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

Available Bible Translations

American Standard Version (ASV)
Genesis 18 (ASV) »
King James Version (KJV)
Genesis 18 (KJV) »
GOD’S WORD® (GW)
Genesis 18 (GW) »
Berean Bible (BSB)
Genesis 18 (BSB) »
World English Bible (WEB)
Genesis 18 (WEB) »
French Bible (LSG)
Genèse 18 (LSG) »
German Bible (LUTH1912)
Genesis 18 (LUTH1912) »
Bengali Bible (BENIRV)
আদি 18 (BENIRV) »
Hebrew Bible (HEB)
בראשית 18 (HEB) »
Portuguese Bible (BSL)
Gênesis 18 (BSL) »
Vietnamese Bible (VIE)
Sáng Thế 18 (VIE) »
Spanish Bible (RVA)
Génesis 18 (RVA) »
Italian Bible (RIV)
Genesi 18 (RIV) »
Chinese Simplified (CUVS)
创 世 纪 18 (CUVS) »
Chinese Traditional (CUVT)
創 世 記 18 (CUVT) »
Albanian Bible (ALB)
Zanafilla 18 (ALB) »
Swedish Bible (SV1917)
1 Mosebok 18 (SV1917) »
Russian Bible (RUSV)
Бытие 18 (RUSV) »
Ukrainian Bible (UKR)
Буття 18 (UKR) »
Hungarian Bible (KAR)
1 Mózes 18 (KAR) »
Bulgarian Bible (BULG)
Битие 18 (BULG) »
Japanese Bible (JPN)
創世記 18 (JPN) »
Norwegian Bible (NORSK)
1 Mosebok 18 (NORSK) »

ಆದಿಕಾಂಡ (KANIRV) Chapter Selection

KANIRV Book Selection List