ಆದಿಕಾಂಡ Chapter 21 KANIRV Bible Verse Images

ಆದಿಕಾಂಡ 21 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಆದಿಕಾಂಡ 21 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಆದಿಕಾಂಡ 21:1 (KANIRV)
Square Portrait Landscape 4K UHD
ಯೆಹೋವನು ತಾನು ವಾಗ್ದಾನ ಮಾಡಿದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.

ಆದಿಕಾಂಡ 21:2 (KANIRV)
Square Portrait Landscape 4K UHD
ಅದರಂತೆ ಸಾರಳು ಬಸುರಾಗಿ, ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಅವನಿಗೆ ಒಬ್ಬ ಮಗನನ್ನು ಹೆತ್ತಳು.

ಆದಿಕಾಂಡ 21:3 (KANIRV)
Square Portrait Landscape 4K UHD
ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು.

ಆದಿಕಾಂಡ 21:4 (KANIRV)
Square Portrait Landscape 4K UHD
ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.

ಆದಿಕಾಂಡ 21:5 (KANIRV)
Square Portrait Landscape 4K UHD
ಇಸಾಕನು ಹುಟ್ಟಿದಾಗ ಅಬ್ರಹಾಮನು ನೂರು ವರ್ಷದವನಾಗಿದ್ದನು.

ಆದಿಕಾಂಡ 21:6 (KANIRV)
Square Portrait Landscape 4K UHD
ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.

ಆದಿಕಾಂಡ 21:7 (KANIRV)
Square Portrait Landscape 4K UHD
ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು.

ಆದಿಕಾಂಡ 21:8 (KANIRV)
Square Portrait Landscape 4K UHD
ಆ ಕೂಸು ಬೆಳೆದು ಮೊಲೆಬಿಟ್ಟಿತು. ಇಸಾಕನು ಮೊಲೆ ಬಿಟ್ಟ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.

ಆದಿಕಾಂಡ 21:9 (KANIRV)
Square Portrait Landscape 4K UHD
ಆದರೆ ಐಗುಪ್ತಳಾದ ಹಾಗರಳಲ್ಲಿ ಅಬ್ರಹಾಮನಿಗೆ ಹುಟ್ಟಿದ್ದ ಮಗನು ಇಸಾಕನ ವಿಷಯದಲ್ಲಿ ಹಾಸ್ಯಮಾಡುವುದನ್ನು ಕಂಡು ಸಾರಳು,

ಆದಿಕಾಂಡ 21:10 (KANIRV)
Square Portrait Landscape 4K UHD
ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.

ಆದಿಕಾಂಡ 21:11 (KANIRV)
Square Portrait Landscape 4K UHD
ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು.

ಆದಿಕಾಂಡ 21:12 (KANIRV)
Square Portrait Landscape 4K UHD
ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;

ಆದಿಕಾಂಡ 21:13 (KANIRV)
Square Portrait Landscape 4K UHD
ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು.

ಆದಿಕಾಂಡ 21:14 (KANIRV)
Square Portrait Landscape 4K UHD
ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಆದಿಕಾಂಡ 21:15 (KANIRV)
Square Portrait Landscape 4K UHD
ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,

ಆದಿಕಾಂಡ 21:16 (KANIRV)
Square Portrait Landscape 4K UHD
ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು.

ಆದಿಕಾಂಡ 21:17 (KANIRV)
Square Portrait Landscape 4K UHD
ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;

ಆದಿಕಾಂಡ 21:18 (KANIRV)
Square Portrait Landscape 4K UHD
ನೀನು ಎದ್ದು ಮಗನನ್ನು ಎತ್ತಿಕೊಂಡು ಸಂತೈಸು. ಏಕೆಂದರೆ ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು” ಎಂದು ಹೇಳಿದನು.

ಆದಿಕಾಂಡ 21:19 (KANIRV)
Square Portrait Landscape 4K UHD
ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.

ಆದಿಕಾಂಡ 21:20 (KANIRV)
Square Portrait Landscape 4K UHD
ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ಆದಿಕಾಂಡ 21:21 (KANIRV)
Square Portrait Landscape 4K UHD
ಅವನು ಪಾರಾನಿನ ಅರಣ್ಯದಲ್ಲಿ ವಾಸ ಮಾಡಿದನು. ಅವನ ತಾಯಿ ಐಗುಪ್ತ ದೇಶದಿಂದ ಕನ್ಯೆಯನ್ನು ತಂದು ಅವನಿಗೆ ಮದುವೆ ಮಾಡಿಸಿದಳು.

ಆದಿಕಾಂಡ 21:22 (KANIRV)
Square Portrait Landscape 4K UHD
ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಧಿಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನೆ.

ಆದಿಕಾಂಡ 21:23 (KANIRV)
Square Portrait Landscape 4K UHD
ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.

ಆದಿಕಾಂಡ 21:24 (KANIRV)
Square Portrait Landscape 4K UHD
ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.

ಆದಿಕಾಂಡ 21:25 (KANIRV)
Square Portrait Landscape 4K UHD
ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,

ಆದಿಕಾಂಡ 21:26 (KANIRV)
Square Portrait Landscape 4K UHD
ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು.

ಆದಿಕಾಂಡ 21:27 (KANIRV)
Square Portrait Landscape 4K UHD
ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.

ಆದಿಕಾಂಡ 21:28 (KANIRV)
Square Portrait Landscape 4K UHD
ತರುವಾಯ ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು,

ಆದಿಕಾಂಡ 21:29 (KANIRV)
Square Portrait Landscape 4K UHD
ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.

ಆದಿಕಾಂಡ 21:30 (KANIRV)
Square Portrait Landscape 4K UHD
ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.

ಆದಿಕಾಂಡ 21:31 (KANIRV)
Square Portrait Landscape 4K UHD
ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.

ಆದಿಕಾಂಡ 21:32 (KANIRV)
Square Portrait Landscape 4K UHD
ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.

ಆದಿಕಾಂಡ 21:33 (KANIRV)
Square Portrait Landscape 4K UHD
ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು ಅಲ್ಲಿ ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಆದಿಕಾಂಡ 21:34 (KANIRV)
Square Portrait Landscape 4K UHD
ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು.

Available Bible Translations

American Standard Version (ASV)
Genesis 21 (ASV) »
King James Version (KJV)
Genesis 21 (KJV) »
GOD’S WORD® (GW)
Genesis 21 (GW) »
Berean Bible (BSB)
Genesis 21 (BSB) »
World English Bible (WEB)
Genesis 21 (WEB) »
French Bible (LSG)
Genèse 21 (LSG) »
German Bible (LUTH1912)
Genesis 21 (LUTH1912) »
Bengali Bible (BENIRV)
আদি 21 (BENIRV) »
Hebrew Bible (HEB)
בראשית 21 (HEB) »
Portuguese Bible (BSL)
Gênesis 21 (BSL) »
Vietnamese Bible (VIE)
Sáng Thế 21 (VIE) »
Spanish Bible (RVA)
Génesis 21 (RVA) »
Italian Bible (RIV)
Genesi 21 (RIV) »
Chinese Simplified (CUVS)
创 世 纪 21 (CUVS) »
Chinese Traditional (CUVT)
創 世 記 21 (CUVT) »
Albanian Bible (ALB)
Zanafilla 21 (ALB) »
Swedish Bible (SV1917)
1 Mosebok 21 (SV1917) »
Russian Bible (RUSV)
Бытие 21 (RUSV) »
Ukrainian Bible (UKR)
Буття 21 (UKR) »
Hungarian Bible (KAR)
1 Mózes 21 (KAR) »
Bulgarian Bible (BULG)
Битие 21 (BULG) »
Japanese Bible (JPN)
創世記 21 (JPN) »
Norwegian Bible (NORSK)
1 Mosebok 21 (NORSK) »

ಆದಿಕಾಂಡ (KANIRV) Chapter Selection

KANIRV Book Selection List