ಆದಿಕಾಂಡ Chapter 32 KANIRV Bible Verse Images

ಆದಿಕಾಂಡ 32 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಆದಿಕಾಂಡ 32 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಆದಿಕಾಂಡ 32:1 (KANIRV)
Square Portrait Landscape 4K UHD
ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.

ಆದಿಕಾಂಡ 32:2 (KANIRV)
Square Portrait Landscape 4K UHD
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.

ಆದಿಕಾಂಡ 32:3 (KANIRV)
Square Portrait Landscape 4K UHD
ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.

ಆದಿಕಾಂಡ 32:4 (KANIRV)
Square Portrait Landscape 4K UHD
ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು

ಆದಿಕಾಂಡ 32:5 (KANIRV)
Square Portrait Landscape 4K UHD
ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.

ಆದಿಕಾಂಡ 32:6 (KANIRV)
Square Portrait Landscape 4K UHD
ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,

ಆದಿಕಾಂಡ 32:7 (KANIRV)
Square Portrait Landscape 4K UHD
ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.

ಆದಿಕಾಂಡ 32:8 (KANIRV)
Square Portrait Landscape 4K UHD
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.

ಆದಿಕಾಂಡ 32:9 (KANIRV)
Square Portrait Landscape 4K UHD
ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,

ಆದಿಕಾಂಡ 32:10 (KANIRV)
Square Portrait Landscape 4K UHD
ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

ಆದಿಕಾಂಡ 32:11 (KANIRV)
Square Portrait Landscape 4K UHD
ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,

ಆದಿಕಾಂಡ 32:12 (KANIRV)
Square Portrait Landscape 4K UHD
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.

ಆದಿಕಾಂಡ 32:13 (KANIRV)
Square Portrait Landscape 4K UHD
ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.

ಆದಿಕಾಂಡ 32:14 (KANIRV)
Square Portrait Landscape 4K UHD
ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ

ಆದಿಕಾಂಡ 32:15 (KANIRV)
Square Portrait Landscape 4K UHD
ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.

ಆದಿಕಾಂಡ 32:16 (KANIRV)
Square Portrait Landscape 4K UHD
ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.

ಆದಿಕಾಂಡ 32:17 (KANIRV)
Square Portrait Landscape 4K UHD
ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,

ಆದಿಕಾಂಡ 32:18 (KANIRV)
Square Portrait Landscape 4K UHD
ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.

ಆದಿಕಾಂಡ 32:19 (KANIRV)
Square Portrait Landscape 4K UHD
ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.

ಆದಿಕಾಂಡ 32:20 (KANIRV)
Square Portrait Landscape 4K UHD
ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.

ಆದಿಕಾಂಡ 32:21 (KANIRV)
Square Portrait Landscape 4K UHD
ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.

ಆದಿಕಾಂಡ 32:22 (KANIRV)
Square Portrait Landscape 4K UHD
ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಆದಿಕಾಂಡ 32:23 (KANIRV)
Square Portrait Landscape 4K UHD
ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ

ಆದಿಕಾಂಡ 32:24 (KANIRV)
Square Portrait Landscape 4K UHD
ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.

ಆದಿಕಾಂಡ 32:25 (KANIRV)
Square Portrait Landscape 4K UHD
ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.

ಆದಿಕಾಂಡ 32:26 (KANIRV)
Square Portrait Landscape 4K UHD
ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.

ಆದಿಕಾಂಡ 32:27 (KANIRV)
Square Portrait Landscape 4K UHD
ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,

ಆದಿಕಾಂಡ 32:28 (KANIRV)
Square Portrait Landscape 4K UHD
ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಆದಿಕಾಂಡ 32:29 (KANIRV)
Square Portrait Landscape 4K UHD
ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.

ಆದಿಕಾಂಡ 32:30 (KANIRV)
Square Portrait Landscape 4K UHD
ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಆದಿಕಾಂಡ 32:31 (KANIRV)
Square Portrait Landscape 4K UHD
ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.

ಆದಿಕಾಂಡ 32:32 (KANIRV)
Square Portrait Landscape 4K UHD
ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

Available Bible Translations

American Standard Version (ASV)
Genesis 32 (ASV) »
King James Version (KJV)
Genesis 32 (KJV) »
GOD’S WORD® (GW)
Genesis 32 (GW) »
Berean Bible (BSB)
Genesis 32 (BSB) »
World English Bible (WEB)
Genesis 32 (WEB) »
French Bible (LSG)
Genèse 32 (LSG) »
German Bible (LUTH1912)
Genesis 32 (LUTH1912) »
Bengali Bible (BENIRV)
আদি 32 (BENIRV) »
Hebrew Bible (HEB)
בראשית 32 (HEB) »
Portuguese Bible (BSL)
Gênesis 32 (BSL) »
Vietnamese Bible (VIE)
Sáng Thế 32 (VIE) »
Spanish Bible (RVA)
Génesis 32 (RVA) »
Italian Bible (RIV)
Genesi 32 (RIV) »
Chinese Simplified (CUVS)
创 世 纪 32 (CUVS) »
Chinese Traditional (CUVT)
創 世 記 32 (CUVT) »
Albanian Bible (ALB)
Zanafilla 32 (ALB) »
Swedish Bible (SV1917)
1 Mosebok 32 (SV1917) »
Russian Bible (RUSV)
Бытие 32 (RUSV) »
Ukrainian Bible (UKR)
Буття 32 (UKR) »
Hungarian Bible (KAR)
1 Mózes 32 (KAR) »
Bulgarian Bible (BULG)
Битие 32 (BULG) »
Japanese Bible (JPN)
創世記 32 (JPN) »
Norwegian Bible (NORSK)
1 Mosebok 32 (NORSK) »

ಆದಿಕಾಂಡ (KANIRV) Chapter Selection

KANIRV Book Selection List