ಇಬ್ರಿಯರಿಗೆ Chapter 10 KANIRV Bible Verse Images

ಇಬ್ರಿಯರಿಗೆ 10 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಇಬ್ರಿಯರಿಗೆ 10 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಇಬ್ರಿಯರಿಗೆ 10:1 (KANIRV)
Square Portrait Landscape 4K UHD
ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.

ಇಬ್ರಿಯರಿಗೆ 10:2 (KANIRV)
Square Portrait Landscape 4K UHD
ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ.

ಇಬ್ರಿಯರಿಗೆ 10:3 (KANIRV)
Square Portrait Landscape 4K UHD
ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು,

ಇಬ್ರಿಯರಿಗೆ 10:4 (KANIRV)
Square Portrait Landscape 4K UHD
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಇಬ್ರಿಯರಿಗೆ 10:5 (KANIRV)
Square Portrait Landscape 4K UHD
ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,

ಇಬ್ರಿಯರಿಗೆ 10:6 (KANIRV)
Square Portrait Landscape 4K UHD
ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

ಇಬ್ರಿಯರಿಗೆ 10:7 (KANIRV)
Square Portrait Landscape 4K UHD
ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.

ಇಬ್ರಿಯರಿಗೆ 10:8 (KANIRV)
Square Portrait Landscape 4K UHD
ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ.

ಇಬ್ರಿಯರಿಗೆ 10:9 (KANIRV)
Square Portrait Landscape 4K UHD
ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.

ಇಬ್ರಿಯರಿಗೆ 10:10 (KANIRV)
Square Portrait Landscape 4K UHD
ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಇಬ್ರಿಯರಿಗೆ 10:11 (KANIRV)
Square Portrait Landscape 4K UHD
ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು.

ಇಬ್ರಿಯರಿಗೆ 10:12 (KANIRV)
Square Portrait Landscape 4K UHD
ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಇಬ್ರಿಯರಿಗೆ 10:13 (KANIRV)
Square Portrait Landscape 4K UHD
ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು.

ಇಬ್ರಿಯರಿಗೆ 10:14 (KANIRV)
Square Portrait Landscape 4K UHD
ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ.

ಇಬ್ರಿಯರಿಗೆ 10:15 (KANIRV)
Square Portrait Landscape 4K UHD
ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,

ಇಬ್ರಿಯರಿಗೆ 10:16 (KANIRV)
Square Portrait Landscape 4K UHD
“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,

ಇಬ್ರಿಯರಿಗೆ 10:17 (KANIRV)
Square Portrait Landscape 4K UHD
“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ.

ಇಬ್ರಿಯರಿಗೆ 10:18 (KANIRV)
Square Portrait Landscape 4K UHD
ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಇಬ್ರಿಯರಿಗೆ 10:19 (KANIRV)
Square Portrait Landscape 4K UHD
ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಇಬ್ರಿಯರಿಗೆ 10:20 (KANIRV)
Square Portrait Landscape 4K UHD
ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.

ಇಬ್ರಿಯರಿಗೆ 10:21 (KANIRV)
Square Portrait Landscape 4K UHD
ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ.

ಇಬ್ರಿಯರಿಗೆ 10:22 (KANIRV)
Square Portrait Landscape 4K UHD
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಇಬ್ರಿಯರಿಗೆ 10:23 (KANIRV)
Square Portrait Landscape 4K UHD
ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.

ಇಬ್ರಿಯರಿಗೆ 10:24 (KANIRV)
Square Portrait Landscape 4K UHD
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.

ಇಬ್ರಿಯರಿಗೆ 10:25 (KANIRV)
Square Portrait Landscape 4K UHD
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

ಇಬ್ರಿಯರಿಗೆ 10:26 (KANIRV)
Square Portrait Landscape 4K UHD
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.

ಇಬ್ರಿಯರಿಗೆ 10:27 (KANIRV)
Square Portrait Landscape 4K UHD
ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.

ಇಬ್ರಿಯರಿಗೆ 10:28 (KANIRV)
Square Portrait Landscape 4K UHD
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.

ಇಬ್ರಿಯರಿಗೆ 10:29 (KANIRV)
Square Portrait Landscape 4K UHD
ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?

ಇಬ್ರಿಯರಿಗೆ 10:30 (KANIRV)
Square Portrait Landscape 4K UHD
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು” ಹೇಳಿದಾತನನ್ನು ಬಲ್ಲೆವು. ಇದಲ್ಲದೆ “ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು” ಎಂದು ಹೇಳಿಯದೆ.

ಇಬ್ರಿಯರಿಗೆ 10:31 (KANIRV)
Square Portrait Landscape 4K UHD
ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.

ಇಬ್ರಿಯರಿಗೆ 10:32 (KANIRV)
Square Portrait Landscape 4K UHD
ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.

ಇಬ್ರಿಯರಿಗೆ 10:33 (KANIRV)
Square Portrait Landscape 4K UHD
ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.

ಇಬ್ರಿಯರಿಗೆ 10:34 (KANIRV)
Square Portrait Landscape 4K UHD
ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.

ಇಬ್ರಿಯರಿಗೆ 10:35 (KANIRV)
Square Portrait Landscape 4K UHD
ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.

ಇಬ್ರಿಯರಿಗೆ 10:36 (KANIRV)
Square Portrait Landscape 4K UHD
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

ಇಬ್ರಿಯರಿಗೆ 10:37 (KANIRV)
Square Portrait Landscape 4K UHD
“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.

ಇಬ್ರಿಯರಿಗೆ 10:38 (KANIRV)
Square Portrait Landscape 4K UHD
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ಇಬ್ರಿಯರಿಗೆ 10:39 (KANIRV)
Square Portrait Landscape 4K UHD
ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

Available Bible Translations

American Standard Version (ASV)
Hebrews 10 (ASV) »
King James Version (KJV)
Hebrews 10 (KJV) »
GOD’S WORD® (GW)
Hebrews 10 (GW) »
Berean Bible (BSB)
Hebrews 10 (BSB) »
World English Bible (WEB)
Hebrews 10 (WEB) »
French Bible (LSG)
Hébreux 10 (LSG) »
German Bible (LUTH1912)
Hebräer 10 (LUTH1912) »
Portuguese Bible (BSL)
Hebreus 10 (BSL) »
Vietnamese Bible (VIE)
Hê-bơ-rơ 10 (VIE) »
Spanish Bible (RVA)
Hebreos 10 (RVA) »
Italian Bible (RIV)
Ebrei 10 (RIV) »
Chinese Simplified (CUVS)
希 伯 来 书 10 (CUVS) »
Chinese Traditional (CUVT)
希 伯 來 書 10 (CUVT) »
Albanian Bible (ALB)
Hebrenjve 10 (ALB) »
Swedish Bible (SV1917)
Hebreerbrevet 10 (SV1917) »
Russian Bible (RUSV)
Евреям 10 (RUSV) »
Ukrainian Bible (UKR)
євреїв 10 (UKR) »
Hungarian Bible (KAR)
Zsidók 10 (KAR) »
Bulgarian Bible (BULG)
Евреи 10 (BULG) »
Norwegian Bible (NORSK)
Hebreerne 10 (NORSK) »

ಇಬ್ರಿಯರಿಗೆ (KANIRV) Chapter Selection

1 2 3 4 5 6 7 8 9 10 11 12 13

KANIRV Book Selection List