ಯೆರೆಮೀಯನು Chapter 36 KANIRV Bible Verse Images

ಯೆರೆಮೀಯನು 36 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆರೆಮೀಯನು 36 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆರೆಮೀಯನು 36:1 (KANIRV)
Square Portrait Landscape 4K UHD
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,

ಯೆರೆಮೀಯನು 36:2 (KANIRV)
Square Portrait Landscape 4K UHD
“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.

ಯೆರೆಮೀಯನು 36:3 (KANIRV)
Square Portrait Landscape 4K UHD
ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.

ಯೆರೆಮೀಯನು 36:4 (KANIRV)
Square Portrait Landscape 4K UHD
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಯೆರೆಮೀಯನು 36:5 (KANIRV)
Square Portrait Landscape 4K UHD
ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಯೆರೆಮೀಯನು 36:6 (KANIRV)
Square Portrait Landscape 4K UHD
ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.

ಯೆರೆಮೀಯನು 36:7 (KANIRV)
Square Portrait Landscape 4K UHD
ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಯೆರೆಮೀಯನು 36:8 (KANIRV)
Square Portrait Landscape 4K UHD
ನೇರೀಯನ ಮಗನಾದ ಬಾರೂಕನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಯೆಹೋವನ ಆಲಯದೊಳಗೆ ಓದಿ ಪ್ರವಾದಿಯಾದ ಯೆರೆಮೀಯನು ಆಜ್ಞಾಪಿಸಿದಂತೆ ಮಾಡಿದನು.

ಯೆರೆಮೀಯನು 36:9 (KANIRV)
Square Portrait Landscape 4K UHD
ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಯೆರೆಮೀಯನು 36:10 (KANIRV)
Square Portrait Landscape 4K UHD
ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.

ಯೆರೆಮೀಯನು 36:11 (KANIRV)
Square Portrait Landscape 4K UHD
ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.

ಯೆರೆಮೀಯನು 36:12 (KANIRV)
Square Portrait Landscape 4K UHD
ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.

ಯೆರೆಮೀಯನು 36:13 (KANIRV)
Square Portrait Landscape 4K UHD
ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,

ಯೆರೆಮೀಯನು 36:14 (KANIRV)
Square Portrait Landscape 4K UHD
ಸಕಲ ಪ್ರಧಾನರು ಬಾರೂಕನಿಗೆ, “ನೀನು ಜನರ ಮುಂದೆ ಓದಿದ ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಬಾ” ಎಂದು ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯ ಮೂಲಕ ಹೇಳಿ ಕಳುಹಿಸಿದರು. ಕೂಡಲೆ ನೇರೀಯನ ಮಗನಾದ ಬಾರೂಕನು ಸುರುಳಿಯನ್ನು ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.

ಯೆರೆಮೀಯನು 36:15 (KANIRV)
Square Portrait Landscape 4K UHD
ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.

ಯೆರೆಮೀಯನು 36:16 (KANIRV)
Square Portrait Landscape 4K UHD
ಅವರು ಆ ಮಾತುಗಳನ್ನೆಲ್ಲಾ ಕೇಳಿ ಬೆಚ್ಚಿಬಿದ್ದು ಒಬ್ಬರನ್ನೊಬ್ಬರು ನೋಡುತ್ತಾ, “ನಾವು ಈ ಮಾತುಗಳನ್ನೆಲ್ಲಾ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.

ಯೆರೆಮೀಯನು 36:17 (KANIRV)
Square Portrait Landscape 4K UHD
ಮತ್ತು, “ನೀನು ಈ ಮಾತುಗಳನ್ನೆಲ್ಲಾ ಹೇಗೆ ಬರೆದಿ? ಅವನ ಬಾಯಿಂದ ಬಂದ ಹಾಗೆತಾನೇ? ದಯಮಾಡಿ ನಮಗೆ ತಿಳಿಸು” ಎಂದು ಅವನನ್ನು ಕೇಳಿದರು.

ಯೆರೆಮೀಯನು 36:18 (KANIRV)
Square Portrait Landscape 4K UHD
ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.

ಯೆರೆಮೀಯನು 36:19 (KANIRV)
Square Portrait Landscape 4K UHD
ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.

ಯೆರೆಮೀಯನು 36:20 (KANIRV)
Square Portrait Landscape 4K UHD
ಅನಂತರ ಅವರು ಸುರುಳಿಯನ್ನು ಲೇಖಕನಾದ ಎಲೀಷಾಮನ ಕೋಣೆಯಲ್ಲಿ ಇಟ್ಟುಬಿಟ್ಟು ಪ್ರಾಕಾರದಲ್ಲಿನ ಅರಸನ ಬಳಿಗೆ ಹೋಗಿ ಆ ಮಾತುಗಳನ್ನೆಲ್ಲಾ ಅವನಿಗೆ ಅರಿಕೆ ಮಾಡಿದರು.

ಯೆರೆಮೀಯನು 36:21 (KANIRV)
Square Portrait Landscape 4K UHD
ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.

ಯೆರೆಮೀಯನು 36:22 (KANIRV)
Square Portrait Landscape 4K UHD
ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.

ಯೆರೆಮೀಯನು 36:23 (KANIRV)
Square Portrait Landscape 4K UHD
ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.

ಯೆರೆಮೀಯನು 36:24 (KANIRV)
Square Portrait Landscape 4K UHD
ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.

ಯೆರೆಮೀಯನು 36:25 (KANIRV)
Square Portrait Landscape 4K UHD
ಎಲ್ನಾಥಾನನೂ, ದೆಲಾಯನೂ ಮತ್ತು ಗೆಮರ್ಯನೂ, “ದಯಮಾಡಿ ಸುರುಳಿಯನ್ನು ಸುಡಬಾರದು” ಎಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.

ಯೆರೆಮೀಯನು 36:26 (KANIRV)
Square Portrait Landscape 4K UHD
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

ಯೆರೆಮೀಯನು 36:27 (KANIRV)
Square Portrait Landscape 4K UHD
ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಮಾತುಗಳ ಸುರುಳಿಯನ್ನು ಅರಸನು ಸುಟ್ಟುಬಿಟ್ಟ ಮೇಲೆ ಯೆಹೋವನು ಯೆರೆಮೀಯನಿಗೆ,

ಯೆರೆಮೀಯನು 36:28 (KANIRV)
Square Portrait Landscape 4K UHD
“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲಾ ಪುನಃ ಬರೆಯಿಸು.

ಯೆರೆಮೀಯನು 36:29 (KANIRV)
Square Portrait Landscape 4K UHD
ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.

ಯೆರೆಮೀಯನು 36:30 (KANIRV)
Square Portrait Landscape 4K UHD
ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.

ಯೆರೆಮೀಯನು 36:31 (KANIRV)
Square Portrait Landscape 4K UHD
ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.

ಯೆರೆಮೀಯನು 36:32 (KANIRV)
Square Portrait Landscape 4K UHD
ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

Available Bible Translations

American Standard Version
Jeremiah 36 (ASV) »
King James Version
Jeremiah 36 (KJV) »
GOD’S WORD® (GW)
Jeremiah 36 (GW) »
World English Bible
Jeremiah 36 (WEB) »
Louis Segond 1910
Jérémie 36 (LSG) »
Luther Bibel 1912
Jeremia 36 (LUTH1912) »
इंडियन रिवाइज्ड वर्जन - हिंदी
यिर्मयाह 36 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 36 (PANIRV) »
ভারতীয় সংশোধিত সংস্করণ - বাংলা
যিৰিমিয়া 36 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 36 (TAMIRV) »
इंडियन रिवाइज्ड वर्जन - मराठी
यिर्मया 36 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 36 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 36 (GUJIRV) »
الكتاب المقدس باللغة العربية، فان دايك
إِرْمِيَا 36 (AVD) »
תנ ך עברי מודרני
ירמיה 36 (HEB) »
Bíblia Sagrada Português
Jeremias 36 (BSL) »
Kinh Thánh: Tiếng Việt
Giê-rê-mi-a 36 (VIE) »
Reina Valera Antigua
Jeremías 36 (RVA) »
La Sacra Bibbia
Geremia 36 (RIV) »
圣 经 简体中文和合本
耶 利 米 书 36 (CUVS) »
聖 經 繁體中文和合本
耶 利 米 書 36 (CUVT) »
Bibla e Shenjtë
Jeremia 36 (ALB) »
Svenska Bibeln 1917
Jeremia 36 (SV1917) »
Библия на русском
Иеремия 36 (RUSV) »
Українська Біблія
Єремія 36 (UKR) »
Szent Biblia - Magyar
Jeremiás 36 (KAR) »
Българска Библия
Еремия 36 (BULG) »
Det Norsk Bibel
Jeremia 36 (NORSK) »
Kitaabka Quduuska Ah
Yeremyaah 36 (SOM) »
De Heilige Schrift
Jeremia 36 (NLD) »
Dansk Bibel 1871
Jeremias 36 (DA1871) »

ಯೆರೆಮೀಯನು (KANIRV) Chapter Selection

KANIRV Book Selection List