ಯೆರೆಮೀಯನು Chapter 48 KANIRV Bible Verse Images

ಯೆರೆಮೀಯನು 48 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೆರೆಮೀಯನು 48 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೆರೆಮೀಯನು 48:1 (KANIRV)
Square Portrait Landscape 4K UHD
ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.

ಯೆರೆಮೀಯನು 48:2 (KANIRV)
Square Portrait Landscape 4K UHD
ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ, ‘ಮೋವಾಬ್ ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ’ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವುದು.

ಯೆರೆಮೀಯನು 48:3 (KANIRV)
Square Portrait Landscape 4K UHD
‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!

ಯೆರೆಮೀಯನು 48:4 (KANIRV)
Square Portrait Landscape 4K UHD
ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕುಗೆಟ್ಟವರು ಮೊರೆಯಿಟ್ಟಿದ್ದಾರೆ.

ಯೆರೆಮೀಯನು 48:5 (KANIRV)
Square Portrait Landscape 4K UHD
ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.

ಯೆರೆಮೀಯನು 48:6 (KANIRV)
Square Portrait Landscape 4K UHD
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.

ಯೆರೆಮೀಯನು 48:7 (KANIRV)
Square Portrait Landscape 4K UHD
ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.

ಯೆರೆಮೀಯನು 48:8 (KANIRV)
Square Portrait Landscape 4K UHD
ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.

ಯೆರೆಮೀಯನು 48:9 (KANIRV)
Square Portrait Landscape 4K UHD
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

ಯೆರೆಮೀಯನು 48:10 (KANIRV)
Square Portrait Landscape 4K UHD
ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.

ಯೆರೆಮೀಯನು 48:11 (KANIRV)
Square Portrait Landscape 4K UHD
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಯೆರೆಮೀಯನು 48:12 (KANIRV)
Square Portrait Landscape 4K UHD
ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ಇಗೋ, ಮುಂದಿನ ಕಾಲದಲ್ಲಿ ನಾನು ಅವರ ಬಳಿಗೆ ಹೊಯ್ಯತಕ್ಕವರನ್ನು ಕಳುಹಿಸುವೆನು, ಅವರು ಅದನ್ನು ಹೊಯ್ದುಬಿಡುವರು, ಪಾತ್ರೆಗಳನ್ನು ಬರಿದು ಮಾಡುವರು, ಗಡಿಗೆಗಳನ್ನು ಒಡೆದುಬಿಡುವರು” ಎಂಬುದೇ.

ಯೆರೆಮೀಯನು 48:13 (KANIRV)
Square Portrait Landscape 4K UHD
ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.

ಯೆರೆಮೀಯನು 48:14 (KANIRV)
Square Portrait Landscape 4K UHD
“‘ನಾವು ಶೂರರು, ಯುದ್ಧಪ್ರವೀಣರಾದ ಪರಾಕ್ರಮಶಾಲಿಗಳು’ ಎಂದು ನೀವು ಅಂದುಕೊಳ್ಳುವುದು ಹೇಗೆ?

ಯೆರೆಮೀಯನು 48:15 (KANIRV)
Square Portrait Landscape 4K UHD
ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.

ಯೆರೆಮೀಯನು 48:16 (KANIRV)
Square Portrait Landscape 4K UHD
ಮೋವಾಬಿಗೆ ದುರ್ಗತಿ ಸಮೀಪಿಸಿದೆ, ವಿಪತ್ತು ಬೇಗ ಬರುವುದು.

ಯೆರೆಮೀಯನು 48:17 (KANIRV)
Square Portrait Landscape 4K UHD
ಮೋವಾಬಿನ ನೆರೆಹೊರೆಯವರೇ, ಅದರ ಹೆಸರನ್ನೂ, ಪ್ರಖ್ಯಾತಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ. ‘ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ’ ಎಂದು ಪ್ರಲಾಪಿಸಿರಿ.

ಯೆರೆಮೀಯನು 48:18 (KANIRV)
Square Portrait Landscape 4K UHD
ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.

ಯೆರೆಮೀಯನು 48:19 (KANIRV)
Square Portrait Landscape 4K UHD
ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.

ಯೆರೆಮೀಯನು 48:20 (KANIRV)
Square Portrait Landscape 4K UHD
ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.

ಯೆರೆಮೀಯನು 48:21 (KANIRV)
Square Portrait Landscape 4K UHD
ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,

ಯೆರೆಮೀಯನು 48:22 (KANIRV)
Square Portrait Landscape 4K UHD
ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,

ಯೆರೆಮೀಯನು 48:23 (KANIRV)
Square Portrait Landscape 4K UHD
ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,

ಯೆರೆಮೀಯನು 48:24 (KANIRV)
Square Portrait Landscape 4K UHD
ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.

ಯೆರೆಮೀಯನು 48:25 (KANIRV)
Square Portrait Landscape 4K UHD
ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.

ಯೆರೆಮೀಯನು 48:26 (KANIRV)
Square Portrait Landscape 4K UHD
“ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು.

ಯೆರೆಮೀಯನು 48:27 (KANIRV)
Square Portrait Landscape 4K UHD
ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?

ಯೆರೆಮೀಯನು 48:28 (KANIRV)
Square Portrait Landscape 4K UHD
ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;

ಯೆರೆಮೀಯನು 48:29 (KANIRV)
Square Portrait Landscape 4K UHD
ಮೋವಾಬ್ಯರಿಗೆ ಬಹು ಸೊಕ್ಕೇರಿದೆ ಎಂಬ ಅವರ ಹೆಮ್ಮೆಯ ಸುದ್ದಿಯೂ, ಅವರ ಡಂಭ, ಅಹಂಕಾರ, ಸ್ವಾಭಿಮಾನ ಮತ್ತು ಸ್ವಪ್ರತಿಷ್ಠೆ ಇವುಗಳ ಸಮಾಚಾರವೂ ನಮ್ಮ ಕಿವಿಗೆ ಬಿದ್ದಿವೆ.”

ಯೆರೆಮೀಯನು 48:30 (KANIRV)
Square Portrait Landscape 4K UHD
ಯೆಹೋವನು ಹೇಳುವುದೇನೆಂದರೆ, “ಅವರ ಗರ್ವೋದ್ರೇಕವು ನನಗೆ ಗೊತ್ತು, ಅದು ಬರೀ ಬುರುಡೆಯೇ; ಅವರು ಕೊಚ್ಚಿಕೊಳ್ಳುವುದೆಲ್ಲಾ ನಿರರ್ಥಕ.

ಯೆರೆಮೀಯನು 48:31 (KANIRV)
Square Portrait Landscape 4K UHD
ಆದಕಾರಣ ನಾನು ಮೋವಾಬಿನ ನಿಮಿತ್ತ ಗೋಳಾಡುವೆನು; ಹೌದು, ಇಡೀ ದೇಶದ ದುರ್ಗತಿಯನ್ನು ನೋಡಿ ಪ್ರಲಾಪಿಸುವೆನು; ಕೀರ್ ಹೆರೆಸಿನವರ ವಿಷಯವಾಗಿ ನರಳಾಟವಾಗುವುದು.

ಯೆರೆಮೀಯನು 48:32 (KANIRV)
Square Portrait Landscape 4K UHD
ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.

ಯೆರೆಮೀಯನು 48:33 (KANIRV)
Square Portrait Landscape 4K UHD
ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಯೆರೆಮೀಯನು 48:34 (KANIRV)
Square Portrait Landscape 4K UHD
ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.

ಯೆರೆಮೀಯನು 48:35 (KANIRV)
Square Portrait Landscape 4K UHD
ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”

ಯೆರೆಮೀಯನು 48:36 (KANIRV)
Square Portrait Landscape 4K UHD
ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.

ಯೆರೆಮೀಯನು 48:37 (KANIRV)
Square Portrait Landscape 4K UHD
ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.

ಯೆರೆಮೀಯನು 48:38 (KANIRV)
Square Portrait Landscape 4K UHD
ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಚೌಕಗಳಲ್ಲಿಯೂ ರೋದನವು ತುಂಬಿದೆ; “ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದುಬಿಟ್ಟಿದ್ದೇನೆ” ಎಂದು ಯೆಹೋವನು ಅನ್ನುತ್ತಾನೆ.

ಯೆರೆಮೀಯನು 48:39 (KANIRV)
Square Portrait Landscape 4K UHD
ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.

ಯೆರೆಮೀಯನು 48:40 (KANIRV)
Square Portrait Landscape 4K UHD
ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.

ಯೆರೆಮೀಯನು 48:41 (KANIRV)
Square Portrait Landscape 4K UHD
ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.

ಯೆರೆಮೀಯನು 48:42 (KANIRV)
Square Portrait Landscape 4K UHD
ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಯೆರೆಮೀಯನು 48:43 (KANIRV)
Square Portrait Landscape 4K UHD
ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;

ಯೆರೆಮೀಯನು 48:44 (KANIRV)
Square Portrait Landscape 4K UHD
ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”

ಯೆರೆಮೀಯನು 48:45 (KANIRV)
Square Portrait Landscape 4K UHD
ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.

ಯೆರೆಮೀಯನು 48:46 (KANIRV)
Square Portrait Landscape 4K UHD
“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.

ಯೆರೆಮೀಯನು 48:47 (KANIRV)
Square Portrait Landscape 4K UHD
ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.

Available Bible Translations

American Standard Version (ASV)
Jeremiah 48 (ASV) »
King James Version (KJV)
Jeremiah 48 (KJV) »
GOD’S WORD® (GW)
Jeremiah 48 (GW) »
Berean Bible (BSB)
Jeremiah 48 (BSB) »
World English Bible (WEB)
Jeremiah 48 (WEB) »
French Bible (LSG)
Jérémie 48 (LSG) »
German Bible (LUTH1912)
Jeremia 48 (LUTH1912) »
Hebrew Bible (HEB)
ירמיה 48 (HEB) »
Portuguese Bible (BSL)
Jeremias 48 (BSL) »
Vietnamese Bible (VIE)
Giê-rê-mi-a 48 (VIE) »
Spanish Bible (RVA)
Jeremías 48 (RVA) »
Italian Bible (RIV)
Geremia 48 (RIV) »
Chinese Simplified (CUVS)
耶 利 米 书 48 (CUVS) »
Chinese Traditional (CUVT)
耶 利 米 書 48 (CUVT) »
Albanian Bible (ALB)
Jeremia 48 (ALB) »
Swedish Bible (SV1917)
Jeremia 48 (SV1917) »
Russian Bible (RUSV)
Иеремия 48 (RUSV) »
Ukrainian Bible (UKR)
Єремія 48 (UKR) »
Hungarian Bible (KAR)
Jeremiás 48 (KAR) »
Bulgarian Bible (BULG)
Еремия 48 (BULG) »
Japanese Bible (JPN)
エレミヤ書 48 (JPN) »
Norwegian Bible (NORSK)
Jeremia 48 (NORSK) »

ಯೆರೆಮೀಯನು (KANIRV) Chapter Selection

KANIRV Book Selection List