ಯೋಬನು Chapter 38 KANIRV Bible Verse Images

ಯೋಬನು 38 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಬನು 38 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಬನು 38:1 (KANIRV)
Square Portrait Landscape 4K UHD
ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,

ಯೋಬನು 38:2 (KANIRV)
Square Portrait Landscape 4K UHD
“ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?

ಯೋಬನು 38:3 (KANIRV)
Square Portrait Landscape 4K UHD
ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.

ಯೋಬನು 38:4 (KANIRV)
Square Portrait Landscape 4K UHD
ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.

ಯೋಬನು 38:5 (KANIRV)
Square Portrait Landscape 4K UHD
ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?

ಯೋಬನು 38:6 (KANIRV)
Square Portrait Landscape 4K UHD
ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?

ಯೋಬನು 38:7 (KANIRV)
Square Portrait Landscape 4K UHD
ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,

ಯೋಬನು 38:8 (KANIRV)
Square Portrait Landscape 4K UHD
ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?

ಯೋಬನು 38:9 (KANIRV)
Square Portrait Landscape 4K UHD
ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?

ಯೋಬನು 38:10 (KANIRV)
Square Portrait Landscape 4K UHD
ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು

ಯೋಬನು 38:11 (KANIRV)
Square Portrait Landscape 4K UHD
‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.

ಯೋಬನು 38:12 (KANIRV)
Square Portrait Landscape 4K UHD
ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?

ಯೋಬನು 38:13 (KANIRV)
Square Portrait Landscape 4K UHD
ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?

ಯೋಬನು 38:14 (KANIRV)
Square Portrait Landscape 4K UHD
ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು.

ಯೋಬನು 38:15 (KANIRV)
Square Portrait Landscape 4K UHD
ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.

ಯೋಬನು 38:16 (KANIRV)
Square Portrait Landscape 4K UHD
ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?

ಯೋಬನು 38:17 (KANIRV)
Square Portrait Landscape 4K UHD
ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?

ಯೋಬನು 38:18 (KANIRV)
Square Portrait Landscape 4K UHD
ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.

ಯೋಬನು 38:19 (KANIRV)
Square Portrait Landscape 4K UHD
ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?

ಯೋಬನು 38:20 (KANIRV)
Square Portrait Landscape 4K UHD
ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?

ಯೋಬನು 38:21 (KANIRV)
Square Portrait Landscape 4K UHD
ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು!

ಯೋಬನು 38:22 (KANIRV)
Square Portrait Landscape 4K UHD
ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,

ಯೋಬನು 38:23 (KANIRV)
Square Portrait Landscape 4K UHD
ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?

ಯೋಬನು 38:24 (KANIRV)
Square Portrait Landscape 4K UHD
ಬೆಳಕನ್ನು ಭಾಗಿಸುವುದಕ್ಕೆ, ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ?

ಯೋಬನು 38:25 (KANIRV)
Square Portrait Landscape 4K UHD
ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,

ಯೋಬನು 38:26 (KANIRV)
Square Portrait Landscape 4K UHD
ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,

ಯೋಬನು 38:27 (KANIRV)
Square Portrait Landscape 4K UHD
ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?

ಯೋಬನು 38:28 (KANIRV)
Square Portrait Landscape 4K UHD
ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?

ಯೋಬನು 38:29 (KANIRV)
Square Portrait Landscape 4K UHD
ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?

ಯೋಬನು 38:30 (KANIRV)
Square Portrait Landscape 4K UHD
ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು.

ಯೋಬನು 38:31 (KANIRV)
Square Portrait Landscape 4K UHD
ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?

ಯೋಬನು 38:32 (KANIRV)
Square Portrait Landscape 4K UHD
ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ?

ಯೋಬನು 38:33 (KANIRV)
Square Portrait Landscape 4K UHD
ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ?

ಯೋಬನು 38:34 (KANIRV)
Square Portrait Landscape 4K UHD
ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ?

ಯೋಬನು 38:35 (KANIRV)
Square Portrait Landscape 4K UHD
ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?

ಯೋಬನು 38:36 (KANIRV)
Square Portrait Landscape 4K UHD
ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?

ಯೋಬನು 38:37 (KANIRV)
Square Portrait Landscape 4K UHD
ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,

ಯೋಬನು 38:38 (KANIRV)
Square Portrait Landscape 4K UHD
ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು?

ಯೋಬನು 38:39 (KANIRV)
Square Portrait Landscape 4K UHD
ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ?

ಯೋಬನು 38:40 (KANIRV)
Square Portrait Landscape 4K UHD
ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ?

ಯೋಬನು 38:41 (KANIRV)
Square Portrait Landscape 4K UHD
ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?”

Available Bible Translations

American Standard Version (ASV)
Job 38 (ASV) »
King James Version (KJV)
Job 38 (KJV) »
GOD’S WORD® (GW)
Job 38 (GW) »
Berean Bible (BSB)
Job 38 (BSB) »
World English Bible (WEB)
Job 38 (WEB) »
French Bible (LSG)
Job 38 (LSG) »
German Bible (LUTH1912)
Hiob 38 (LUTH1912) »
Punjabi Bible (PANIRV)
ਅੱਯੂਬ 38 (PANIRV) »
Bengali Bible (BENIRV)
ইয়োব 38 (BENIRV) »
Tamil Bible (TAMIRV)
யோபு 38 (TAMIRV) »
Marathi Bible (MARIRV)
ईयोब 38 (MARIRV) »
Telugu Bible (TELIRV)
యోబు 38 (TELIRV) »
Gujarati Bible (GUJIRV)
અયૂબ 38 (GUJIRV) »
Hebrew Bible (HEB)
איוב 38 (HEB) »
Portuguese Bible (BSL)
Jó 38 (BSL) »
Vietnamese Bible (VIE)
Gióp 38 (VIE) »
Spanish Bible (RVA)
Job 38 (RVA) »
Italian Bible (RIV)
Giobbe 38 (RIV) »
Chinese Simplified (CUVS)
约 伯 记 38 (CUVS) »
Chinese Traditional (CUVT)
約 伯 記 38 (CUVT) »
Albanian Bible (ALB)
Jobi 38 (ALB) »
Swedish Bible (SV1917)
Job 38 (SV1917) »
Russian Bible (RUSV)
Иов 38 (RUSV) »
Ukrainian Bible (UKR)
Йов 38 (UKR) »
Hungarian Bible (KAR)
Jób 38 (KAR) »
Bulgarian Bible (BULG)
Йов 38 (BULG) »
Japanese Bible (JPN)
ヨブ記 38 (JPN) »
Norwegian Bible (NORSK)
Job 38 (NORSK) »

ಯೋಬನು (KANIRV) Chapter Selection

KANIRV Book Selection List