ಯೋಹಾನನು Chapter 1 KANIRV Bible Verse Images

ಯೋಹಾನನು 1 Bible Verse Pictures. Choose from a large collection of inspirational, motivational and encouraging Bible verses with pictures of nature. Download and share ಯೋಹಾನನು 1 inspirational Bible verse images. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.


ಯೋಹಾನನು 1:1 (KANIRV)
Square Portrait Landscape 4K UHD
ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.

ಯೋಹಾನನು 1:2 (KANIRV)
Square Portrait Landscape 4K UHD
ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.

ಯೋಹಾನನು 1:3 (KANIRV)
Square Portrait Landscape 4K UHD
ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.

ಯೋಹಾನನು 1:4 (KANIRV)
Square Portrait Landscape 4K UHD
ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.

ಯೋಹಾನನು 1:5 (KANIRV)
Square Portrait Landscape 4K UHD
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.

ಯೋಹಾನನು 1:6 (KANIRV)
Square Portrait Landscape 4K UHD
ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.

ಯೋಹಾನನು 1:7 (KANIRV)
Square Portrait Landscape 4K UHD
ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.

ಯೋಹಾನನು 1:8 (KANIRV)
Square Portrait Landscape 4K UHD
ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.

ಯೋಹಾನನು 1:9 (KANIRV)
Square Portrait Landscape 4K UHD
ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.

ಯೋಹಾನನು 1:10 (KANIRV)
Square Portrait Landscape 4K UHD
ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.

ಯೋಹಾನನು 1:11 (KANIRV)
Square Portrait Landscape 4K UHD
ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.

ಯೋಹಾನನು 1:12 (KANIRV)
Square Portrait Landscape 4K UHD
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.

ಯೋಹಾನನು 1:13 (KANIRV)
Square Portrait Landscape 4K UHD
ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.

ಯೋಹಾನನು 1:14 (KANIRV)
Square Portrait Landscape 4K UHD
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಯೋಹಾನನು 1:15 (KANIRV)
Square Portrait Landscape 4K UHD
ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.

ಯೋಹಾನನು 1:16 (KANIRV)
Square Portrait Landscape 4K UHD
ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

ಯೋಹಾನನು 1:17 (KANIRV)
Square Portrait Landscape 4K UHD
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಯೋಹಾನನು 1:18 (KANIRV)
Square Portrait Landscape 4K UHD
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಯೋಹಾನನು 1:19 (KANIRV)
Square Portrait Landscape 4K UHD
ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,

ಯೋಹಾನನು 1:20 (KANIRV)
Square Portrait Landscape 4K UHD
ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.

ಯೋಹಾನನು 1:21 (KANIRV)
Square Portrait Landscape 4K UHD
ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.

ಯೋಹಾನನು 1:22 (KANIRV)
Square Portrait Landscape 4K UHD
ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.

ಯೋಹಾನನು 1:23 (KANIRV)
Square Portrait Landscape 4K UHD
ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.

ಯೋಹಾನನು 1:24 (KANIRV)
Square Portrait Landscape 4K UHD
ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.

ಯೋಹಾನನು 1:25 (KANIRV)
Square Portrait Landscape 4K UHD
ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.

ಯೋಹಾನನು 1:26 (KANIRV)
Square Portrait Landscape 4K UHD
ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.

ಯೋಹಾನನು 1:27 (KANIRV)
Square Portrait Landscape 4K UHD
ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.

ಯೋಹಾನನು 1:28 (KANIRV)
Square Portrait Landscape 4K UHD
ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.

ಯೋಹಾನನು 1:29 (KANIRV)
Square Portrait Landscape 4K UHD
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

ಯೋಹಾನನು 1:30 (KANIRV)
Square Portrait Landscape 4K UHD
‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.

ಯೋಹಾನನು 1:31 (KANIRV)
Square Portrait Landscape 4K UHD
ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”

ಯೋಹಾನನು 1:32 (KANIRV)
Square Portrait Landscape 4K UHD
ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.

ಯೋಹಾನನು 1:33 (KANIRV)
Square Portrait Landscape 4K UHD
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.

ಯೋಹಾನನು 1:34 (KANIRV)
Square Portrait Landscape 4K UHD
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.

ಯೋಹಾನನು 1:35 (KANIRV)
Square Portrait Landscape 4K UHD
ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,

ಯೋಹಾನನು 1:36 (KANIRV)
Square Portrait Landscape 4K UHD
ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.

ಯೋಹಾನನು 1:37 (KANIRV)
Square Portrait Landscape 4K UHD
ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.

ಯೋಹಾನನು 1:38 (KANIRV)
Square Portrait Landscape 4K UHD
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.

ಯೋಹಾನನು 1:39 (KANIRV)
Square Portrait Landscape 4K UHD
ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.

ಯೋಹಾನನು 1:40 (KANIRV)
Square Portrait Landscape 4K UHD
ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.

ಯೋಹಾನನು 1:41 (KANIRV)
Square Portrait Landscape 4K UHD
ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,

ಯೋಹಾನನು 1:42 (KANIRV)
Square Portrait Landscape 4K UHD
ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)

ಯೋಹಾನನು 1:43 (KANIRV)
Square Portrait Landscape 4K UHD
ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.

ಯೋಹಾನನು 1:44 (KANIRV)
Square Portrait Landscape 4K UHD
ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.

ಯೋಹಾನನು 1:45 (KANIRV)
Square Portrait Landscape 4K UHD
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

ಯೋಹಾನನು 1:46 (KANIRV)
Square Portrait Landscape 4K UHD
ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.

ಯೋಹಾನನು 1:47 (KANIRV)
Square Portrait Landscape 4K UHD
ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ,ಇವನು ನಿಜವಾದ ಇಸ್ರಾಯೇಲನು,ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.

ಯೋಹಾನನು 1:48 (KANIRV)
Square Portrait Landscape 4K UHD
ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.

ಯೋಹಾನನು 1:49 (KANIRV)
Square Portrait Landscape 4K UHD
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.

ಯೋಹಾನನು 1:50 (KANIRV)
Square Portrait Landscape 4K UHD
ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.

ಯೋಹಾನನು 1:51 (KANIRV)
Square Portrait Landscape 4K UHD
ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ.ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

Available Bible Translations

American Standard Version (ASV)
John 1 (ASV) »
King James Version (KJV)
John 1 (KJV) »
GOD’S WORD® (GW)
John 1 (GW) »
Berean Bible (BSB)
John 1 (BSB) »
World English Bible (WEB)
John 1 (WEB) »
French Bible (LSG)
Jean 1 (LSG) »
German Bible (LUTH1912)
Johannes 1 (LUTH1912) »
Punjabi Bible (PANIRV)
ਯੂਹੰਨਾ 1 (PANIRV) »
Bengali Bible (BENIRV)
যোহন 1 (BENIRV) »
Marathi Bible (MARIRV)
योहान 1 (MARIRV) »
Gujarati Bible (GUJIRV)
યોહાન 1 (GUJIRV) »
Arabic Bible (AVD)
يوحنَّا 1 (AVD) »
Portuguese Bible (BSL)
João 1 (BSL) »
Vietnamese Bible (VIE)
Giăng 1 (VIE) »
Spanish Bible (RVA)
Juan 1 (RVA) »
Italian Bible (RIV)
Giovanni 1 (RIV) »
Chinese Simplified (CUVS)
约 翰 福 音 1 (CUVS) »
Chinese Traditional (CUVT)
約 翰 福 音 1 (CUVT) »
Albanian Bible (ALB)
Gjoni 1 (ALB) »
Swedish Bible (SV1917)
Johannes 1 (SV1917) »
Russian Bible (RUSV)
Иоанна 1 (RUSV) »
Ukrainian Bible (UKR)
Івана 1 (UKR) »
Hungarian Bible (KAR)
János 1 (KAR) »
Bulgarian Bible (BULG)
Йоан 1 (BULG) »
Norwegian Bible (NORSK)
Johannes 1 (NORSK) »

ಯೋಹಾನನು (KANIRV) Chapter Selection

KANIRV Book Selection List